Advertisement

ಹಿಂದೆ ಬ್ರಿಟಿಷರ ವಿರುದ್ಧ ಹೋರಾಡಿದಂತೆ ಇಂದು ಬಿಜೆಪಿಗರ ವಿರುದ್ಧ ದ್ವಿತೀಯ ಸ್ವಾತಂತ್ರ್ಯ ಹೋರಾಟ ಮಾಡಬೇಕಾಗಿದೆ!

Advertisement

ನಾವು ಯಾರೂ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದವರಲ್ಲ, ನಾವೆಲ್ಲಾ ಸ್ವಾತಂತ್ರ್ಯದ ಫಲಾನುಭವಿಗಳು. ಮಹಾನ್ ನಾಯಕರ ತ್ಯಾಗ, ಬಲಿದಾನದ ಮೇಲೆ ನಮಗೆ ದೊರೆತಿರುವ ಈ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕಾದ ಹೊಣೆ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು 'ಕ್ವಿಟ್ ಇಂಡಿಯಾ ಚಳುವಳಿ' ದಿನದ ಸ್ಮರಣಾರ್ಥ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವ ಅಂಗವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 2014 ರಲ್ಲಿ ನರೇಂದ್ರ ಮೋದಿಯವರು "ಕಾಂಗ್ರೆಸ್ ಗೆ 60 ವರ್ಷ ಅಧಿಕಾರ ನೀಡಿದ್ದೀರಿ, ನಮಗೆ 60 ತಿಂಗಳು ಕೊಡಿ ದೇಶದ ಚಿತ್ರವನ್ನೇ ಬದಲಾಯಿಸುತ್ತೇನೆ" ಎಂದು ಮಾತು ಕೊಟ್ಟಿದ್ದರು. ಅವರು ಅಧಿಕಾರಕ್ಕೆ ಬರುವ ಮೊದಲಿನ ಸ್ಥಿತಿಗಿಂತ ವಿರುದ್ಧವಾದ ಬದಲಾವಣೆ ನಡೆದು ಇಂದು ದೇಶ ಸಂಕಷ್ಟಕ್ಕೆ ಸಿಲುಕಿದೆ. ಪ್ರಧಾನಿ ನರೇಂದ್ರ ಮೋದಿಯವರ ಏಳು ವರ್ಷಗಳ ಆಡಳಿತದಲ್ಲಿ ದೇಶದ 23% ಜನ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ಹನ್ನೆರಡು ಕೋಟಿ ಉದ್ಯೋಗ ನಷ್ಟವಾಗಿದೆ, ದೇಶದ ಜಿ.ಡಿ.ಪಿ ಮೈನಸ್ 7.7 % ಕ್ಕೆ ಬಂದಿದೆ. ಜನರ ಜೀವನ ನಿರ್ವಹಣಾ ವೆಚ್ಚ ದುಪ್ಪಟ್ಟಾಗಿದೆ. ಸುಳ್ಳು ಹೇಳಿರುವುದೊಂದೆ ಅವರ ಒಟ್ಟು ಸಾಧನೆ ಎಂದವರು ಹೇಳಿದ್ದಾರೆ. ಸಾವರ್ಕರ್ ಸೇರಿದಂತೆ ಆರ್.ಎಸ್.ಎಸ್ ನ ಯಾವ ನಾಯಕನೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ. ಹೀಗಾಗಿ ಬಿಜೆಪಿ ಪಕ್ಷದ ನಾಯಕರಿಗೆ ಸ್ವಾತಂತ್ರ್ಯ ಹೋರಾಟದ ಮಹತ್ವ ತಿಳಿದಿಲ್ಲ ಮತ್ತು ಹೋರಾಟಗಾರರ ಬಗ್ಗೆ ಗೌರವವೂ ಇಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಆಶಯಗಳಾದ ಸಾಮಾಜಿಕ ಬದಲಾವಣೆ, ಸಮಾನ ಅವಕಾಶ, ಸಂಪತ್ತಿನ ಸಮಾನ ಹಂಚಿಕೆಯ ಬಗ್ಗೆ ಬಿಜೆಪಿಗೆ ನಂಬಿಕೆಯಿಲ್ಲ. ಬಿಜೆಪಿ ಪಕ್ಷವು ನಂಬಿಕೆ ಹೊಂದಿರುವುದು ಚಾತುರ್ವರ್ಣ ವ್ಯವಸ್ಥೆಯ ಬಗ್ಗೆ ಮಾತ್ರ. ಸಮಾಜವನ್ನು ಒಡೆದು, ಪರಸ್ಪರ ದ್ವೇಷ ಮತ್ತು ಭಯದ ವಾತಾವರಣ ಸೃಷ್ಟಿಸಿ, ದೇಶವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಬಿಜೆಪಿ ಪಕ್ಷವು ಪ್ರಯತ್ನಿಸುತ್ತಿದೆ. ಎಲ್ಲಿಯವರೆಗೂ ಜಾತಿ ವ್ಯವಸ್ಥೆ, ತಾರತಮ್ಯ ಭಾವನೆ ಸಮಾಜದಲ್ಲಿ ನೆಲೆಸಿರುತ್ತದೋ ಅಲ್ಲಿಯವರೆಗೆ ಮತ ಗಳಿಕೆ ಸಾಧ್ಯ ಎಂಬುದು ಬಿಜೆಪಿಯವರ ಭಾವನೆ ಎಂದು ಹೇಳಿದರು. ನಮ್ಮ‌ ಸರ್ಕಾರದ ಅವಧಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿದ್ದೆವು. ಅದನ್ನು ದೊಡ್ಡ ಅಪರಾಧ ಎಂಬಂತೆ ಬಿಂಬಿಸಿದರು. ಟಿಪ್ಪುವಿನ ದಿವಾನರಾಗಿದ್ದ ಪೂರ್ಣಯ್ಯನವರು ಯಾವ ಜಾತಿ? ಹಣಕಾಸು ಮಂತ್ರಿಯಾಗಿದ್ದ ಕೃಷ್ಣಸ್ವಾಮಿ ಅವರು ಯಾವ ಜಾತಿ? ಇವರ ಬಗ್ಗೆ ಬಿಜೆಪಿ ಗರಿಗೆ ಅಸಹನೆ ಇಲ್ಲವೇ? ಮೊಘಲರ ಆಳ್ವಿಕೆಯಲ್ಲಿ ಅವರ ಆಸ್ಥಾನದಲ್ಲಿ ಉನ್ನತ ಹುದ್ದೆಯಲ್ಲಿದ್ದ ಸಮುದಾಯದ ಜನರೇ ಇಂದು ಆರ್.ಎಸ್.ಎಸ್ ಸ್ಥಾಪಿಸಿ, ಅದರ ಉನ್ನತ ಸ್ಥಾನದಲ್ಲಿದ್ದಾರೆ. ಇಂಥವರು ಮಾಡುವ ದೇಶಭಕ್ತಿಯ ಪಾಠ ಯಾರಿಗೆ ಬೇಕು? ಬ್ರಿಟಿಷರ ವಿರುದ್ಧ ಹೈದರಾಲಿ ಮತ್ತು ಟಿಪ್ಪು 4 ಮಹಾಯುದ್ಧಗಳನ್ನು ಮಾಡಿದ್ದರು. ಟಿಪ್ಪು ಜಯಂತಿ ಮಾಡಿದರೆ ಬಿಜೆಪಿ ಪಕ್ಷದವರಿಗೆ ಕೋಪ ಬರುತ್ತೆ. ಬಿಜೆಪಿಯವರಿಗೆ ಟಿಪ್ಪು ಮೇಲಿರುವ ಕೋಪ ಟಿಪ್ಪುವಿನ ದಿವಾನರಾಗಿದ್ದ ಪೂರ್ಣಯ್ಯನ ಮೇಲೆ ಏಕಿಲ್ಲ ಎಂದವರು ಪ್ರಶ್ನಿಸಿದ್ದಾರೆ. ಬ್ರಿಟಿಷರು ಬರುವ ಮೊದಲು ಭಾರತ ಸಮೃದ್ಧವಾಗಿತ್ತು. ನಮ್ಮ ಜಿ.ಡಿ.ಪಿ 23% ಇತ್ತು, ಬ್ರಿಟಿಷರು ಕೊಳ್ಳೆ ಹೊಡೆದ ಪರಿಣಾಮ ಭಾರತ ಬಡದೇಶವಾಯಿತು. ಇವತ್ತು ಮತ್ತೆ ಭಾರತ ಬಡದೇಶವಾಗುತ್ತಿದ್ದರೆ ಅದಕ್ಕೆ ಬಿಜೆಪಿ ಪಕ್ಷವೇ ಕಾರಣ. ಬ್ರಿಟಿಷರು ದೇಶದ ಸಂಪತ್ತನ್ನು ಲೂಟಿ ಮಾಡಿದರೆ, ಬಿಜೆಪಿಗರು ದೇಶದ ಸಂಪತ್ತನ್ನು ಖಾಸಗಿಯವರಿಗೆ ಮಾರುತ್ತಿದ್ದಾರೆ. ಹೀಗಾಗಿ ಹಿಂದೆ ಬ್ರಿಟಿಷರ ವಿರುದ್ಧ ಮಾಡಿದ ಹೋರಾಟದ ಮಾದರಿಯಲ್ಲೆ ಈಗ ಬಿಜೆಪಿಗರ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಹೋರಾಟ ಮಾಡಬೇಕಾಗಿದೆ. ಕ್ವಿಟ್ ಇಂಡಿಯಾ ಚಳವಳಿ ದಿನ, ಗಣರಾಜ್ಯೋತ್ಸವ ದಿನ, ಸ್ವಾತಂತ್ರ್ಯ ದಿನಾಚರಣೆ ಮುಂತಾದ ಪ್ರಮುಖ ದಿನಗಳಂದು ನಾವೆಲ್ಲ ತ್ಯಾಗ ಬಲಿದಾನದ ಮನಸ್ಥಿತಿ ಬೆಳೆಸಿಕೊಳ್ಳುವ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸುವ ಕೆಲಸಕ್ಕೆ ಒಂದಾಗಿ ಶ್ರಮಿಸುವ ಪ್ರತಿಜ್ಞೆ ಮಾಡಬೇಕು ಎಂದವರು ಕರೆ ನೀಡಿದರು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement