ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ನೀಟ್ ಮೂಲಕ ಅಖಿಲಭಾರತ ಕೋಟಾದಡಿಯಲ್ಲಿ ಸೇರ್ಪಡೆಗೊಳ್ಳುವ ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಶೇಕಡಾ 27ರಷ್ಟು ಮೀಸಲಾತಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಈ ಬಗ್ಗೆ ಜುಲೈ ಮೂರರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ಪ್ರಧಾನಮಂತ್ರಿಯವರಿಗೆ ಪತ್ರ ಬರೆದು ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆದಿದ್ದರು. ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಅಖಿಲ ಭಾರತ ಕೋಟಾದಡಿಯಲ್ಲಿ ಪಡೆದಿರುವ ಶೇಕಡಾ 15ರಷ್ಟು ಸೀಟುಗಳಲ್ಲಿಯೂ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು. ಮೀಸಲಾತಿ ನಿರಾಕರಣೆಯಿಂದಾಗಿ 2017ರಿಂದ 11000 ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿರುವುದನ್ನು ಸೋನಿಯಾಗಾಂಧಿಯವರು ಪತ್ರದಲ್ಲಿ ಉಲ್ಲೇಖಿಸಿ ಅಖಿಲಭಾರತ ಕೋಟಾದಲ್ಲಿಯೂ ಒಬಿಸಿಗಳಿಗೆ ಮೀಸಲಾತಿ ನೀಡಬೇಕೆಂದು ಆಗ್ರಹ ಪಡಿಸಿದ್ದರು. ಇದಕ್ಕಾಗಿ ಸೋನಿಯಾ ಗಾಂಧಿಯವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ‘’ ಹತ್ತು ವರ್ಷ ಯುಪಿಎ ಸರ್ಕಾರವಿದ್ದಾಗ ಒಬಿಸಿ ಮೀಸಲು ಬಗ್ಗೆ ಸೋನಿಯಾಗಾಂಧಿ ಅವರಿಗೆ ಜ್ಞಾನ ಇರಲಿಲ್ಲವೇ? ಎಂದು ಪ್ರಶ್ನಿಸಿದೆ. ಬಿಜೆಪಿಯು ಬಡವರ,ರೈತರ, ದಲಿತರ, ಹಿಂದುಳಿದ ಜಾತಿಗಳ ವಿರೋಧಿ ಎನ್ನುವದು ನನಗೆ ಗೊತ್ತಿದೆ. ಆದರೆ ಈ ಪಕ್ಷ ಇಷ್ಟೊಂದು ಬೌದ್ದಿಕ ದಿವಾಳಿತನದಿಂದ ಬಳಲುತ್ತಿದೆ ಎಂದು ಗೊತ್ತಿರಲಿಲ್ಲ. ಇತ್ತೀಚಿನ ಇತಿಹಾಸವನ್ನಾದರೂ ಸರಿಯಾಗಿ ಓದಿಕೊಂಡು ಪ್ರತಿಕ್ರಿಯಿಸಿ ಎಂದು ಅವರಿಗೆ ವಿನಯಪೂರ್ವಕವಾಗಿ ಮನವಿ ಮಾಡುತ್ತೇನೆ. ಬಿಜೆಪಿ ನಾಯಕರ ಗಮನಕ್ಕಾಗಿ ಕೆಲವು ವಾಸ್ತವಾಂಶಗಳನ್ನು ಮುಂದಿಡಬಯಸುತ್ತೇನೆ. ಮೊದಲನೆಯದಾಗಿ, ದೇಶದಲ್ಲಿಯೇ ಮೊದಲಬಾರಿ ಅತ್ಯಂತ ವೈಜ್ಞಾನಿಕವಾದ ಎಲ್.ಜಿ.ಹಾವನೂರು ವರದಿಯ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ತಂದುಕೊಟ್ಟಿರುವುದು ರಾಜ್ಯದ ದೇವರಾಜ ಅರಸು ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ಎರಡನೆಯದಾಗಿ, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ಸಂವಿಧಾನಕ್ಕೆ 104ನೇ ತಿದ್ದುಪಡಿ ಮಾಡಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿರುವ ಐಐಟಿ ಮತ್ತು ಐಐಎಂ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಜಾರಿಗೆ ತರಲಾಯಿತು ಎಂದವರು ಹೇಳಿದರು.
ವಿ.ಪಿ.ಸಿಂಗ್ ಅವರು ಮಂಡಲವರದಿ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದ್ದರು. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದ ಅರ್ಜುನ್ ಸಿಂಗ್ ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಹಿಂದುಳಿದ ಜಾತಿಗಳಿಗೆ ಸಂವಿಧಾನಕ್ಕೆ 104ನೇ ತಿದ್ದುಪಡಿಯ ಮೂಲಕ ಮೀಸಲಾತಿ ಕಲ್ಪಿಸಿದ್ದರು.
ಮನಮೋಹನ್ ಸಿಂಗ್ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಾಗ ಅದನ್ನು ವಿರೋಧಿಸಿದ್ದು ಬಿಜೆಪಿ. ಭಾರತೀಯ ಜನತಾ ಪಕ್ಷ ಸೈದ್ಧಾಂತಿಕವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಗೆ ವಿರುದ್ಧವಾಗಿರುವ ಪಕ್ಷ. ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ ಅವರು ಬಹಿರಂಗವಾಗಿಯೇ ಮೀಸಲಾತಿ ವಿರೋಧಿಸಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ದಿವಂಗತ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದರು. ಹುಟ್ಟಿನಿಂದಲೇ ಮೀಸಲಾತಿ ವಿರೋಧಿಯಾದ ಬಿಜೆಪಿ ಈಗ ರಾಜಕೀಯ ಅನಿವಾರ್ಯತೆಗೆ ಸಿಕ್ಕಿ ಮೀಸಲಾತಿಯನ್ನು ಒಪ್ಪಿಕೊಂಡಿದೆ ಅಷ್ಟೆ. ನಮ್ಮದು ಬದ್ಧತೆ, ಬಿಜೆಪಿಯದ್ದು ಆತ್ಮವಂಚನೆಯ ನಾಟಕ ಎಂದು ಸಿದ್ದರಾಯ್ಯನವರು ಹೇಳಿದರು.
ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಶೇಕಡಾ 15ರಷ್ಟು ಸೀಟುಗಳನ್ನು ಅಖಿಲಭಾರತ ಕೋಟಾಕ್ಕಾಗಿ ಕಿತ್ತುಕೊಂಡಿರುವುದೇ ಮಹಾದ್ರೋಹ. ಈ ನಿರ್ಧಾರವನ್ನು ಕೈಗೊಂಡಿದ್ದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ. ನಮ್ಮ ಭೂಮಿ, ನಮ್ಮವರ ತೆರಿಗೆ ಹಣದಿಂದ ನೀಡಿರುವ ವಿನಾಯಿತಿ- ರಿಯಾಯಿತಿಯಿಂದ ನಿರ್ಮಾಣಗೊಂಡ ವೈದ್ಯಕೀಯ ಕಾಲೇಜುಗಳ ಸೀಟನ್ನು ಬೇರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ಯಾಕೆ ಉಡುಗೊರೆಯಾಗಿ ನೀಡಬೇಕು? ಇದಕ್ಕೆ ಬಿಜೆಪಿ ನಾಯಕರು ಉತ್ತರಿಸಬೇಕಾಗುತ್ತದೆ. ಅಖಿಲಭಾರತ ಕೋಟಾಕ್ಕಾಗಿ ರಾಜ್ಯದ ಮೆಡಿಕಲ್ ಕಾಲೇಜುಗಳ ಸೀಟುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುವುದನ್ನು ನಾನು ಮುಖ್ಯಮಂತ್ರಿಯಾಗಿರುವಾಗಲೇ ವಿರೋಧಿಸಿದ್ದೆ. ತಮಿಳುನಾಡು ಸರ್ಕಾರ ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದೆ. ಅದರ ಮುಂದಿನ ವಿಚಾರಣೆ ಆಗಸ್ಟ್ 3ಕ್ಕೆ ಇದೆ. ನ್ಯಾಯಾಲಯದ ತೀರ್ಪಿನಿಂದ ಮುಖ ಉಳಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರ ಅಖಿಲಭಾರತ ಕೋಟಾದಡಿಯಲ್ಲಿಯೂ ಒಬಿಸಿಗಳಿಗೆ ಶೇಕಡಾ 27ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಹಿಂದುಳಿದ ಜಾತಿಯ ಬಗ್ಗೆ ಪ್ರಧಾನಿಗಳ ಈ ಕಾಳಜಿಯ ನಾಟಕಕ್ಕೆ ಮುಂಬರುವ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯೂ ಕಾರಣವಾಗಿರಬಹುದು. ಉಳಿದಂತೆ ಪ್ರಧಾನಿಯವರ ಈ ಘೋಷಣೆಯಲ್ಲಿ ಯಾವುದೇ ಬದ್ಧತೆ ಇಲ್ಲ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?