Advertisement

ಹೋಟೆಲ್ ಮತ್ತಿತರೆಡೆ ವಿಪರೀತ ಪ್ರಮಾಣದ ಟೇಸ್ಟಿಂಗ್ ಪೌಡರ್ ಬಳಸಿದಲ್ಲಿ ಕ್ರಿಮಿನಲ್ ಮೊಕದ್ದಮೆ: ಉಡುಪಿ ಡಿಸಿ ಜಿ. ಜಗದೀಶ್ ಎಚ್ಚರಿಕೆ

Advertisement

"ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸಿ, ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಟೇಸ್ಟಿಂಗ್ ಪೌಡರ್ ಬಳಕೆ ಮಾಡಿ ಗ್ರಾಹಕರಿಗೆ ವಿತರಿಸುತ್ತಿರುವುದು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ಮಾರಣಾಂತಿಕ ದುಷ್ಪರಿಣಾಮ ಉಂಟುಮಾಡಲಿದ್ದು, ಹಾಗೆಯೇ ಇದು ಶಿಕ್ಷಾರ್ಹ ಅಪರಾಧ ಕೂಡ ಹೌದು. ಆದ ಕಾರಣ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಬಗೆಯ ಆಹಾರ ತಯಾರಿಕೆಯಲ್ಲಿ ವಿಪರೀತ ಪ್ರಮಾಣದಲ್ಲಿ ಟೇಸ್ಟಿಂಗ್ ಪೌಡರ್ ಬಳಕೆ ಕಂಡು ಬಂದಲ್ಲಿ ಅಂತಹ ಆಹಾರ ತಯಾರಿಕಾ ಘಟಕಗಳು ಯಾ ಮಾಲಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು" ಎಂದು ಅಗಸ್ಟ್ 26 ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಕುರಿತಾದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರು ಎಚ್ಚರಿಕೆ ನೀಡಿದ್ದಾರೆ.



"ವಿಪರೀತ ಮಟ್ಟದ ಟೇಸ್ಟಿಂಗ್ ಪೌಡರ್ ಬಳಸುವ ಆಹಾರ ತಯಾರಿಕಾ ಘಟಕಗಳ ಮೇಲೆ ಹಾಗೂ ಆರೋಗ್ಯ ಇಲಾಖೆ ಮತ್ತಿತರ ಇಲಾಖೆಗಳಿಂದ ಅನುಮತಿ ಪಡೆಯದೆ ಟೇಸ್ಟಿಂಗ್ ಪೌಡರ್ ಮಾರಾಟ ಮಾಡುವವರ ವಿರುದ್ದ ದಾಳಿ ನಡೆಸಿ ಕ್ರಿಮಿನಲ್ ಕೇಸು ದಾಖಲಿಸುವಂತೆ" ಜಿಲ್ಲಾಧಿಕಾರಿಯವರು ಆಹಾರ ಸುರಕ್ಷತಾ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಈ ಕುರಿತು ಜಿಲ್ಲೆಯ ಜನರಿಂದ ವ್ಯಾಪಕ ಸಂತಸ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಜಿಲ್ಲಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಬಹುಮುಖ್ಯವಾಗಿ ಸಸ್ಯಾಹಾರಿ ಮತ್ತು ಮಾಂಸಹಾರಿ ಫಾಸ್ಟ್‌ಫುಡ್ ತಯಾರಕರು, ಹೋಟೆಲ್‌ಗಳು, ಮಸಾಲೆ ಪೌಡರ್ ತಯಾರಿಕಾ ಘಟಕ ಹಾಗೂ ಕೆಟರಿಂಗ್ ನಡೆಸುವವರು ತಮ್ಮ ಸಂಸ್ಥೆಗಳ ಕಳಪೆ ರುಚಿಯ ಸಸ್ಯಾಹಾರಿ ತಿಂಡಿ ಮತ್ತಿತರ ಮಾಂಸಾಹಾರಿ ತಿನಿಸುಗಳ ರುಚಿ ಹೆಚ್ಚಿಸಲು ವಿಪರೀತ ಎಂಬಷ್ಟು ಟೇಸ್ಟಿಂಗ್ ಪೌಡರ್ ಸುರಿಯುತ್ತಿರುವುದು ಎಲ್ಲರಿಗೂ ತಿಳಿದಿರುವ ಸತ್ಯವಾಗಿದೆ. ನಿರಂತರವಾದ ಟೇಸ್ಟಿಂಗ್ ಪೌಡರ್ ಸೇವನೆಯಿಂದ ಅದು ಆರೋಗ್ಯದ ಮೇಲೆ ವಿಪರೀತ ದುಷ್ಪರಿಣಾಮ ಬೀರುತ್ತದೆ. ಎಳೆಯ ಮಕ್ಕಳಿಗಂತೂ ಅದು ಮರಣಾಂತಿಕವಾಗಿ ಪರಿಣಮಿಸುತ್ತದೆ ಎನ್ನುತ್ತದೆ ಹಲವು ವೈದ್ಯಕೀಯ ವರದಿಗಳು. ಮುಖ್ಯವಾಗಿ ಚೈನಿಸ್ ಫುಡ್ ಜೊತೆ ಜೊತೆಯಲ್ಲೆ ದೇಶದೊಳಗೆ ಕಾಲಿಟ್ಟ ಈ ಟೇಸ್ಟಿಂಗ್ ಪೌಡರ್, ಅದನ್ನು ಬಳಸಿದ ಆಹಾರ ಪದಾರ್ಥವನ್ನು ನಿರಂತರ ಸೇವನೆ ಮಾಡುವವರ ಆರೋಗ್ಯದ ಮೇಲೆ ದಾಳಿ ನಡೆಸಿದೆ. ಇದು ಮುಖ್ಯವಾಗಿ ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಗಾಗಿ ಕಾರಣವಾಗುತ್ತದೆ ಎನ್ನುತ್ತಾರೆ ಹೆಸರು ಬಹಿರಂಗಗೊಳಿಸಲು ಇಚ್ಚಿಸದ ಹಿರಿಯ ಅನುಭವಿ ತಜ್ಞ ವೈಧ್ಯರುಗಳು. ಹಾಗೆಯೇ ಈ ಟೇಸ್ಟಿಂಗ್ ಪೌಡರ್ ಮಾರಾಟವನ್ನೇ ನಿಷೇದಿಸಬೇಕು ಎನ್ನುವುದು ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದು ಈ ಕುರಿತು ಸರ್ಕಾರವೇಕೆ ಈ ತನಕವೂ ಕ್ರಮ ಕೈಗೊಂಡಿಲ್ಲ? ಎಂಬುದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರೇಮಾನಂದ್, ಕುಂದಾಪುರ ಪುರಸಭಾ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಆರೋಗ್ಯ ಇಲಾಖೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

►►ಸಂಬಂಧಿತ ಸುದ್ದಿ:

►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ ಗೊತ್ತೇ?

►►ಇದನ್ನೂ ಓದಿ:

►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.

►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ ಗೊತ್ತೇ?

►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!

►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?

►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.

►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?

►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?

►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!

►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!

►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!

►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?

►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?

►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.

►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ

►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)

►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?

►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!

►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!

►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?

►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!

►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?

►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.

►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?

►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!

►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.

►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?

►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್

►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ

►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ)

►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ

►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?



Advertisement
Advertisement
Recent Posts
Advertisement