ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಕೈ ಹಾಕದೆ ಇರುವುದು ಉತ್ತಮ.
ರಸ್ತೆ, ಕ್ರೀಡಾಂಗಣ, ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ಪದ್ಧತಿ. ಈ ವಿಚಾರದಲ್ಲಿ ದ್ವೇಷರಾಜಕಾರಣ ಸರಿಯಲ್ಲ. ಬೆಂಗಳೂರಿನ ಮೇಲು ಸೇತುವೆಗೆ ದೀನದಯಾಳ್ ಉಪಾಧ್ಯಾಯ, ನಗರ ಸಾರಿಗೆಗೆ ವಾಜಪೇಯಿ, ಗುಜರಾತ್ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಏಕೆ ಇಡಲಾಗಿದೆ. ಈ ಹೆಸರುಗಳನ್ನು ಕೇಂದ್ರ ಸರ್ಕಾರ ಬದಲಾಯಿಸುವುದೇ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೇಜರ್ ಧ್ಯಾನ್‍ಚಂದ್ ಅವರು ಶ್ರೇಷ್ಠ ಹಾಕಿ ಪಟು ಎಂಬುದರಲ್ಲಿ ಎರಡು ಮಾತಿಲ್ಲ. ಬೇರೆ ಪ್ರಶಸ್ತಿಗೆ ಅವರ ಹೆಸರು ಇಡಬಹುದಾಗಿತ್ತು. ರಾಜೀವ್ ಗಾಂಧಿಯವರ ಹೆಸರೇಕೆ ಬದಲಿಸಬೇಕು? ದೇಶಕ್ಕಾಗಿ ಸೇವೆ ಸಲ್ಲಿಸಿದವರ ಸ್ಮರಣೆಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಒಂದು ಪರಂಪರೆ. ಗರೀಬಿ ಹಠಾವೋ ಘೋಷಣೆ ಮೂಲಕ ಬಡವರ ಏಳಿಗೆಗೆ ಶ್ರಮಿಸಿದ್ದ ಇಂದಿರಾಗಾಂಧಿ, ಭೂ ಸುಧಾರಣೆ ಕಾಯ್ದೆ ಕೂಡ ಜಾರಿಗೆ ತಂದವರು. ಈ ಕೊಡುಗೆಯನ್ನು ಗೌರವಿಸಿ ಇಂದಿರಾ ಕ್ಯಾಂಟೀನ್‍ಗೆ ಅವರ ಹೆಸರು ಇಡಲಾಗಿದೆ. ಅವರ ಸೇವೆಯನ್ನು ಗೌರವಿಸುವುದರಲ್ಲಿ ತಪ್ಪೇನಿದೆ ಎಂದವರು ಹೇಳಿದ್ದಾರೆ.
ಬಡವರಿಗೆ ಕೊಡುತ್ತಿದ್ದ ಏಳು ಕೆ.ಜಿ. ಅಕ್ಕಿಯನ್ನು ಕಡಿತಗೊಳಿಸಿದ ಬಿಜೆಪಿಗೆ ಬಡವರ ಬಗ್ಗೆ ಏನು ಕಾಳಜಿ ಇದೆ? ಬಿಜೆಪಿಗೆ ತಮ್ಮ ನಾಯಕರ ಹೆಸರಿನ ಬಗ್ಗೆ ಅಷ್ಟೊಂದು ಮೋಹ ಇದ್ದರೆ ಹೊಸ ಯೋಜನೆ ಪ್ರಾರಂಭಿಸಿ, ಹೊಸ ಹೆಸರು ಇಟ್ಟುಕೊಂಡು ಮೆರೆದಾಡಲಿ. ಬೇಡ ಎಂದವರು ಯಾರು? ಆ ಯೋಗ್ಯತೆ ಇವರಿಗಿಲ್ಲ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ನೂತನ ಸಚಿವ ಸಂಪುಟದಲ್ಲಿ ಬಹುತೇಕ ಹಳಬರೇ ಸಚಿವರಿದ್ದಾರೆ. ಹೀಗಾಗಿ ಹೊಸದನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಮಂತ್ರಿ ಮಂಡಲದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಿಲ್ಲ. ಹಳೆ ಮೈಸೂರು ಭಾಗಕ್ಕೆ ಅವಕಾಶ ಕಡಿಮೆಯಾಗಿದೆ. ರಾಜ್ಯದಲ್ಲಿ ಶೇ. 24.1 ರಷ್ಟು ದಲಿತರಿದ್ದಾರೆ. ಆದರೆ, ಪರಿಶಿಷ್ಟರಿಗೆ ನಾಲ್ಕು ಸ್ಥಾನ ಮಾತ್ರ ನೀಡಲಾಗಿದೆ. ಬೋವಿ, ಕೊರಚ, ಕೊರಮರಿಗೆ ಪ್ರಾತಿನಿಧ್ಯ ಕೊಟ್ಟಿಲ್ಲ. ನನ್ನ ಸಂಪುಟದಲ್ಲಿ ಸಾಮಾಜಿಕ ನ್ಯಾಯದಡಿ ಸರ್ವಜಾತಿಗಳಿಗೂ ಪ್ರಾತಿನಿಧ್ಯ ನೀಡಲಾಗಿತ್ತು ಎಂದವರು ಹೇಳಿದರು.
ಸಾಮಾನ್ಯವಾಗಿ ಐಟಿ ದಾಳಿ ನಡೆಸಿದ ಬಳಿಕ ಅಗತ್ಯ ಬಿದ್ದರೆ ಇ.ಡಿ ದಾಳಿ ಮಾಡುತ್ತದೆ. ಅದು ಆದಾಯ ಮೀರಿ ಆಸ್ತಿ ಗಳಿಸಿದ್ದರೆ, ಅಕ್ರಮವಾಗಿ ಹಣ ವರ್ಗಾವಣೆ ಅಥವಾ ದುರುಪಯೋಗವಾಗಿದ್ದರೆ ಮಾತ್ರ. ಇದು ದುರುದ್ದೇಶದ ದಾಳಿ. ಜಮೀರ್ ಅಹಮದ್ ಮನೆ ಮೇಲೆ ಇಡಿ ಏಕಾಏಕಿ ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ಕೂಡಿದ ದಾಳಿ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಇದು ಮೊದಲಲ್ಲ. ಜಮೀರ್ ಅಹಮದ್ ಮನೆ ಕಟ್ಟಿದ್ದಾರೆ ಅಷ್ಟೆ. ಹಣ ದುರುಪಯೋಗ ಅಥವಾ ಅಕ್ರಮ ವರ್ಗಾವಣೆ ಎಲ್ಲಿ ಆಗಿದೆ?ಬಿಜೆಪಿಯವರ ಮೇಲೆ ಏಕೆ ದಾಳಿ ನಡೆಯುವುದಿಲ್ಲ? ಅವರೆಲ್ಲಾ ಬಡವರೇ, ಬಿಪಿಎಲ್ ಕಾರ್ಡುದಾರರೇ ಎಂದವರು ಪ್ರಶ್ನಿಸಿದ್ದಾರೆ.
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?