Advertisement

ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯ ಕೋಡಿ: 'ಭಾರತ ಬಿಟ್ಟು ತೊಲಗಿ ಆಂಧೋಲನ' ಉಪನ್ಯಾಸ!

Advertisement

ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಸಂದಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಕ -ಶಿಕ್ಷಣ ಮಹಾವಿದ್ಯಾಲಯ ಸ್ವಾತಂತ್ರ್ಯ ಅಮೃತ ಮಹೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದೊಂದಿಗೆ ಆಗಸ್ಟ್ಮ ಮಾಹೆ 2021 ರಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗಿಯಾಗಿ ಮಂಗಳೂರು ವಿಶ್ವವಿದ್ಯಾಲದ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಶಿಕ್ಷಕ ಶಿಕ್ಷಣ ಸಂಸ್ಥೆಗಳು ಹಲವು ಕಾರ್ಯಕ್ರಮಗಳನ್ನು ನಡೆಸಲು ಸೂಚನೆ ನೀಡಲಾಗಿದೆ. ಈ ಸೂಚನೆಯ ಮೇರೆಗೆ ' ಭಾರತ ಬಿಟ್ಟು ತೊಲಗಿ ಆಂಧೋಲನ' ಉಪನ್ಯಾಸವನ್ನು ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯ ಕೋಡಿ ಕುಂದಾಪುರ ಈ ಸಂಸ್ಥೆಯಲ್ಲಿ ಏರ್ಪಡಸಲಾಯಿತು. ಡಾ ದಿನೇಶ್ ಹೆಗ್ಡೆ , ನಿವೃತ್ತ ಪ್ರಾಂಶುಪಾಲರು ಶಾರದಾ ಕಾಲೇಜು ಬಸ್ರೂರ್ ಇವರು ಸೂಚಿತ ವಿಷಯವಾದ ' ಭಾರತ ಬಿಟ್ಟು ತೊಲಗಿ ಆಂಧೋಲನ' ದ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು. ಭಾರತ ಬ್ರೀಟಿಷರ ಆಡಳಿತಕ್ಕೆ ಒಳಪಟ್ಟನಂತರ ನಡೆದ ಸ್ವಾತಂತ್ರ್ಯ ಹೋರಾಟದ ಹೆಜ್ಜೆಗಳನ್ನು ಸೂಕ್ಷ್ಮವಾಗಿ ಗುರುತಿಸಿದರು. ಸಾತಂತ್ರ್ಯ ಸಂಗ್ರಾಮದ ಚಳುವಳಿಯಲ್ಲಿ ' ಭಾರತ ಬಿಟ್ಟು ತೊಲಗಿ ಆಂಧೋಲನ' ಅತ್ಯಂತ ಪ್ರಮುಖವಾದುದು ಮಾತ್ರವಲ್ಲ, ಅದು ಕೊನೆಯ ಘಟ್ಟವಾಗಿ ಪರಿಣಮಿಸಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಬಂಗಾಳ ವಿಭಜನೆ, ಅದರಿಂದ ಭಾರತೀಯರಮೇಲೆ ಆದ ಪರಿಣಾಮ ಮತ್ತು ಗಾಂಧೀಜಿಯವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿ, ಸ್ವಾತಂತ್ರ್ಯಚಳುವಳಿಯಲ್ಲಿ ಭಾಗವಹಿಸಿದ ಪ್ರಾರಂಭದ ದಿನಗಳು ಹೇಗಿದ್ದವು ಎಂಬುದನ್ನು ತಿಳಿಸಿದರು. 1909 ರ ಮೋರ್ಲೆ ಮಿಂಟೋ ಸುಧಾರಣೆಗಳು, 1935 ರ ಗವರ್ನಮೆಂಟ್ ಆಫ್ ಇಂಡಿಯಾ ಕಾಯ್ದೆ , ಹಾಗೂ ಇಂತಹ ಹಲವಾರು ಕಾಯ್ದೆಗಳನ್ನು ಜಾರಿಗೊಳಿಸಿ, ಇವುಗಳೊಂದಿಗೆ ಶಿಕ್ಷಣದಲ್ಲಿ ಹಲವಾರು ಬದಲಾವಣೆಗಳನ್ನು ಮಾಡುವದರ ಮೂಲಕ ಭಾರತೀಯರ ಮನವೊಲಿಸುವ ಪ್ರಯತ್ನಗಳು ನಡೆದುದರ ಕುರಿತು ವಿವರಿಸಿದರು. ಇದರ ಪರಿಣಾಮ ಭಾರತದಲ್ಲಿ ಹೊಸ ಚಿಂತನೆ ಪ್ರಾರಂಭಗೊಂಡಿತು ಮತ್ತು ಸ್ವಾತಂತ್ರ್ಯ ಹೋರಾಟ ನೂತನ ತಿರುವುಗಳನ್ನು ಪಡೆದುಕೊಂಡಿತು. 1939 ರಲ್ಲಿ ಪ್ರಾರಂಭಗೊಂಡ ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ಕಾಣಿಸಿಕೊಂಡ ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರ ನಡುವಿನ ಪೈಪೋಟಿ, ಆ ಸಂದರ್ಭದಲ್ಲಿ ಭಾರತೀಯರು ಬ್ರೀಟಿಷರನ್ನು ಬೆಂಬಲಿಸುವದರ ಕುರಿತು ತೆಗೆದುಕೊಳ್ಳಬೇಕಾದ ನಿಲುವು ಅತ್ಯಂತ ಸೂಕ್ಷ್ಮ ನಿರ್ಣಾಯಕ ನಿರ್ಧಾರವಾಗಿತ್ತು. ಯುದ್ಧದ ನಂತರ ಭಾರತಕ್ಕೆ ಸ್ವಾತಂತ್ರ್ಯ ಎಂಬ ಬ್ರೀಟಿಷರ ನಿಲುವಿಗೆ, ಮೊದಲು ಸ್ವಾತಂತ್ರ್ಯ ಆ ನಂತರ ಬೆಂಬಲ ಎಂಬ ಮಾತು ಗಾಂಧಿಯವರದಾಗಿತ್ತು. 1942 ರಲ್ಲಿ ಕಾಂಗ್ರೆಸ್ ವರ್ಕಿಂಗ್ ಸಮಿತಿ ವಾರ್ಧಾದಲ್ಲಿ ನಡೆಸಿದ ಸಭೆ, ಮತ್ತು ಆ ಸಭೆಯ ನಿರ್ಣಯಗಳು, ಕಾಂಗ್ರೆಸ್ ನಾಯಕತ್ವದ ಜೊತೆ ಕ್ರಿಪ್ಪ್ಸ್ ಮಿಷನ್ ಮಾತುಕತೆ, ಎಲ್ಲವೂ ಸ್ವಾತಂತ್ರ್ಯ ಹೋರಾಟವನ್ನು ಒಂದು ಪ್ರಮುಖ ಹಂತಕ್ಕೆ ತಂದು ನಿಲ್ಲಿಸಿತ್ತು. ಅಹಿಂಸಾ ತತ್ವವನ್ನು ಪ್ರಧಾನವಾಗಿಟ್ಟುಕೊಂಡು ಸ್ವಾತಂತ್ರ್ಯ ಚಳುವಳಿಯನ್ನು ಕಟ್ಟಿದ ಮತ್ತು ಮುನ್ನಡೆಸಿದವರು ಗಾಂಧೀಜಿಯವರು. ಅವರು ಸ್ವಾತಂತ್ರ್ಯ ಚಳುವಳಿಯ ಕೊನೆಯ ಹೋರಾಟವಾಗಿಸಬೇಕೆಂಬ ಆಶಯದೊಂದಿಗೆ 1942 ರಲ್ಲಿ ' ಭಾರತ ಬಿಟ್ಟು ತೊಲಗಿ ಆಂಧೋಲನ'ಕ್ಕೆ ಕರೆಕೊಟ್ಟರು. ಇಡೀ ಭಾರತದ ಜನಸಮೂಹ, ನಾಯಕರು ಸಹಕಾರ ಸೂಚಿಸಿ ಬೆಂಬಲಿಸದರು. ಈ ಚಳುವಳಿಯ ಕುರಿತು ಹಲವರಿಗೆ ಭಿನ್ನಾಭಿಪ್ರಾಯಗಳಿದ್ದವು. ಅಲ್ಲಲ್ಲಿ ಆಂದೋಲನದ ಸಂದರ್ಭದಲ್ಲಿ ಹಿಂಸೆಯು ಕಾಣಿಸಿಕೊಂಡಿತು. ಅಹಿಂಸೆಯೇ ಮೂಲ ಮಂತ್ರವಾಗಿ ನಂಬಿದ ಗಾಂಧೀಜಿಯವರ ಮನಸ್ಸಿಗೆ ತುಂಬ ಘಾಸಿಯಾಗಿತ್ತು. ಗಾಂಧೀಜಿಯವರು ಈ ಆಂದೋಲನದ ನಂತರ ತುಂಬಾ ಟೀಕೆಗೆ ಗುರಿಯಾದರು. ಇದೊಂದು ವೈಫಲ್ಯತೆಯನ್ನು ಕಂಡ ಚಳುವಳಿ ಎಂದು ಪ್ರತಿಬಿಂಬಿಸಲಾಯಿತು. ಆದರೆ ಇಂದೊಂದು ಪ್ರಮುಖ ಆಂದೋಲನವಾಗಿ ಇತಿಹಾಸದ ಪುಟಗಳಲ್ಲಿ ಉಳಿದಿರುವುದು ಬಹಳ ಮುಖ್ಯ ಮತ್ತು ಸ್ವಾತಂತ್ರ್ಯ ಹೋರಾಟದ ಕೊನೆಯ ಘಟಕ್ಕೆ ತಲುಪಿಸದ ಆಂದೋಲನ ಎಂದು ದಾಖಲಾಯಿತು. ಇದರ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ ಎನ್ನುವುದು ಬಹಳ ಮುಖ್ಯವಾದ ಸಂಗತಿ ಎಂದು ಡಾ ದಿನೇಶ್ ಹೆಗ್ಡೆ ಯವರು ಅಭಿಪ್ರಾಯಪಟ್ಟರು. ಕುಂದಾಪುರದ ಪರಿಸರದಲ್ಲಿ ಊರಿನ ಪ್ರಮುಖರು , ಹೆಸರಾಂತ ಮನೆತನಗಳ ಹಿರಿಯರು, ಸುತ್ತಮುತ್ತಲಿನ ಜನರು ಈ ಆಂದೋಲನದಲ್ಲಿ ಭಾಗಿಯಾಗಿದ್ದರು. ಅಸಹಕಾರ ಚಳುವಳಿ , ಕರ ನಿರಾಕರಣೆ , ಉಪವಾಸ ಸತ್ಯಾಗ್ರಹ ಮುಂತಾದವುಗಳು ಅಲ್ಲಲ್ಲಿ ನಡೆದಿವೆ ಎಂಬ ದಾಖಲೆಗಳು ಇವೆ ಎಂದು ಹೇಳುತ್ತಾ ಡಾ. ದಿನೇಶ್ ಹೆಗ್ಡೆ ಯವರು ತಮ್ಮ ಉಪನ್ಯಾಸವನ್ನು ಮುಕ್ತಾಯಗೊಳಿಸಿದರು. ಇಂದೊಂದು ಅತ್ಯಂತ ಮಾಹಿತಿದಾಯಕ, ವಿಶ್ಲೇಷಣಾತ್ಮಕ ಹಾಗೂ ಮಹತ್ವದ ತಿಳುವಳಿಕೆಗಳನ್ನು ನೀಡಿದ ಉಪನ್ಯಾಸವಾಗಿತ್ತು. ಸ್ವಾಗತ ಮತ್ತು ಧನ್ಯವಾದ ಸಮರ್ಪಣೆಗಳನ್ನು ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಸಿದ್ದಪ್ಪ ಕೆ. ಎ ಸ್. ನೆರವೇರಿಸಿದರು . ಉಪನ್ಯಾಸಕಾರರ ಪರಿಚಯದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನು ಬ್ಯಾರೀಸ್ ಸಮೂಹ ಸಂಸ್ಥೆಗಳ ನೀರ್ದೇಶಕರು ದೋಮ ಚಂದ್ರಶೇಖರ್ ನುಡಿದರು. ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement