Advertisement

ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ!

Advertisement

ಹಸಿದವನಿಗೆ ಅನ್ನ, ಖಾಯಿಲೆಪೀಡಿತರಿಗೆ ಚಿಕಿತ್ಸೆ, ಎಳೆ ಮಕ್ಕಳಿಗೆ ಕಡ್ಡಾಯ ಶಿಕ್ಷಣ, ಯುವಜನಾಂಗಕ್ಕೆ  ಉದ್ಯೋಗ.... ಇದು ಭಾಗ್ಯಗಳ ಸರಮಾಲೆ ಅಲ್ಲ. ಜನರ ಅಗತ್ಯಗಳನ್ನು ಪೂರೈಕೆ ಮಾಡುವುದು ಜವಾಬ್ದಾರಿಯುತ ಸರಕಾರಗಳ ಕರ್ತವ್ಯ. ಮತ್ತು ಇದುವೇ ಕಾಂಗ್ರೆಸ್ ಪಕ್ಷದ ಸಿದ್ದಾಂತ. ಕಳೆದ ಎಪ್ಪತ್ತು ವರ್ಷಗಳಲ್ಲಿ ಈ ಪಕ್ಷ ಇದನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬಂದಿದೆ. ಮತ್ತು "ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು" ಸಿದ್ದಾಂತದ "ಸಂವಿಧಾನ"ವನ್ನು ಈ ದೇಶದ ಶೋಷಿತರಿಗೆ, ದಮನಿತರಿಗೆ ನೀಡಿದೆ. ಅದನ್ನು ಈ ದಿನದ ತನಕವೂ ರಕ್ಷಿಸಿಕೊಂಡು ಬಂದಿದೆ. ಹಸಿದವನಿಗೆ ಅನ್ನಾಹಾರ ಕೊಡದೆ ಕೊಲ್ಲುವುದು, ಹಿಂದುಳಿದ ವರ್ಗ, ದಲಿತ ವರ್ಗಕ್ಕೆ ವಿದ್ಯೆ ನಿರಾಕರಿಸುವುದು. ಆ ವರ್ಗ ವಿದ್ಯೆ ಪಡೆಯುವಂತಿಲ್ಲ, ಉನ್ನತ ಉದ್ಯೋಗಕ್ಕೆ ಏರುವಂತಿಲ್ಲ, ಅವರು ಕೇವಲ ಮೇಲ್ಜಾತಿಯ ಚಾಕರಿ ಮಾಡಿಕೊಂಡಿರಬೇಕು... ಇದು "ಮನುಸ್ಮೃತಿ" ಸಂವಿಧಾನದ ಮುಖ್ಯ ಸಿದ್ದಾಂತ. ಇದು ಬಿಜೆಪಿ, ಸಂಘಪರಿವಾರ ಮತ್ತದರ ಹಿಂದಿರುವ ವೈದಿಕ ವರ್ಗದ ಧರ್ಮ ಗ್ರಂಥ.  ಮತ್ತು ಅದನ್ನು ಆ ವರ್ಗ ಶತಶತಮಾನಗಳ ಕಾಲದಿಂದಲೂ ಪಾಲಿಸಿಕೊಂಡು ಬಂದಿದೆ. ಇದೀಗ ಅದೇ ವೈದಿಕ ವರ್ಗದ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಸಂವಿಧಾನದ ಬದಲಾವಣೆಯ ಕುರಿತು ಮಾತನಾಡಲು ಆರಂಭಿಸಿದೆ. ಆದರೆ ಗೊತ್ತಿರಲಿ ಹಿಂದುಳಿದ ವರ್ಗ ಮತ್ತು ದಲಿತ ವರ್ಗದ ಸಹೋದರರೆ ... ಸಂವಿಧಾನವನ್ನು ಬದಲಾಯಿಸಿದರೆ ನಮ್ಮ ಮುಂದಿನ ಜನಾಂಗಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ನೆನಪಿರಲಿ. ಹಾಗೆಯೇ, ಸಂವಿಧಾನ ಬದಲಾಯಿಸಿದರೆ ಏನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ ಹಾಗೂ ಜನಪರ ಚಿಂತಕ, ಖ್ಯಾತ ವಾಗ್ಮಿ ಡಾ. ಜೆ. ಎಸ್ ಪಾಟೀಲರ ಈ ವಿಡಿಯೋ ನೋಡಿ! ಹಿಂದುತ್ವ, ಹಿಂದೂರಾಷ್ಟ್ರ ಎಂದು ಸಾವರ್ಕರ್, ಗೊಳ್ವಲ್ಕರ್ ಪಾದಗಳಿಗೆ ಅಡ್ಡ ಬೀಳಲು ಹೋಗುತ್ತಿರುವ ನಮ್ಮ ಕೆಲವು ಯುವಕರು ಈ ಲೇಖನವನ್ನು ಒಂದಲ್ಲದಿದ್ದರೆ ನಾಲ್ಕು ನಾಲ್ಕು ಸಾರಿ ಓದಿ. ನಿಮ್ಮ ಮನಸ್ಸು ತೃಪ್ತಿಯಾಗುವವರೆಗೂ ಓದಿ. ಆಗಲಾದರೂ ವಾಸ್ತವ ಅರ್ಥವಾದರೆ ಸಾಕು. ಬಿಜೆಪಿಯ ಅನೇಕ ಮುಖಂಡರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಅವರ ಪ್ರಕಾರ ಸಂವಿಧಾನ ಬದಲಿಸುವುದು ಎಂದರೆ ಈಗಿರುವ ಅಂಬೇಡ್ಕರ್ ನಿರ್ಮಿತ ಸಂವಿಧಾನ ಬದಲಿಸಿ, ಮನುಧರ್ಮ ಆಧಾರಿತ ಸಂವಿಧಾನ ಜಾರಿಗೊಳಿಸುವುದು. ಆಗ ಏನಾಗುತ್ತದೆ ಎಂದು ತಿಳಿಯಲು ಈ ಲೇಖನ ಓದಿ. 1949 ರಲ್ಲಿ ಅಂದರೆ ನಮ್ಮ ದೇಶದ ಸಂವಿಧಾನ ಜಾರಿಯಾಗುವ ಒಂದು ವರ್ಷ ಮೊದಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ತನ್ನ ಮುಖವಾಣಿ ಪತ್ರಿಕೆಯಲ್ಲಿ ಹೀಗೆ ಬರೆದಿತ್ತು.“ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿಯ ಅಧ್ಯಕ್ಷರಾಗಿ ರಚಿಸಿರುವ ಸಂವಿಧಾನದಲ್ಲಿ ಭಾರತೀಯತೆ ಇಲ್ಲವಾಗಿದೆ. ಈ ದೇಶದ ನೆಲದ ಕಾನೂನಾದ ಮನುಸ್ಮ್ರತಿಯಿಂದ ಏನೂ ಪಡೆದಿಲ್ಲ. ಹೀಗಾಗಿ ಈ ಸಂವಿಧಾನ ನಮಗೆ ಒಪ್ಪಿತವಲ್ಲ” ಸಂಘಪರಿವಾರ ಗುರೂಜಿ ಎಂದು ಸಂಬೋಧಿಸುವ ಮಾ.ಸ.ಗೋಲ್ವಲ್ಕರ್ ಹೀಗೆಂದಿದ್ದ. “ಹಿಂದುಗಳಿಗೆ ಪ್ರಜಾಪ್ರಭುತ್ವ ತತ್ವಗಳು ಹೊರಗಿನವು. ಇಡೀ ಮನುಕುಲದ ಅತಿ ಶ್ರೇಷ್ಟ ಮತ್ತು ಮಹಾನ್ ಕಾನೂನು ರಚನೆಕಾರ ಮನು”. ಹಾಗೆಯೇ ಸಂಘಪರಿವಾರದ ಮತ್ತೊಬ್ಬ ಸಂಸ್ಥಾಪಕ, ಹಿಂದುತ್ವ ಪದ ಹುಟ್ಟುಹಾಕಿದವ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರಿಗೆ ತಪ್ಪೊಪ್ಪಿಗೆ ಬರೆದು ಕೊಟ್ಟಿದ್ದ ಸಾವರ್ಕರ್ ಹೀಗೆ ಹೇಳಿದ್ದ. ”ವೇದಗಳ ನಂತರ ಅತ್ಯಂತ ಪೂಜನೀಯ ಗ್ರಂಥ ಮನುಸ್ಮ್ರತಿ ಹಾಗೂ ದೇಶವನ್ನು ಅದರ ಆಧಾರದಲ್ಲಿ ನಡೆಸಬೇಕು”. ಮೊನ್ನೆ ಮೊನ್ನೆ ಕನ್ನಡದ ಸಾಹಿತಿ ಎಸ್ ಎಲ್ ಭೈರಪ್ಪ ಸಹ ಇದನ್ನೇ ಹೇಳಿದ್ದಾರೆ. “ಭಾರತದ ಸಂವಿಧಾನದಲ್ಲಿ ಪರಂಪರೆ ಇಲ್ಲ- ಇದರಲ್ಲಿ ಇರುವ ತತ್ವಗಳು ಪಾಶ್ಚಾತ್ಯವಾದವು” ಎಂದು. 1950 ರ ಜನವರಿ 25 ರಂದು ಅಂದರೆ ಭಾರತ ಗಣರಾಜ್ಯವಾಗುವ ಒಂದು ದಿನ ಮೊದಲು RSS ಪತ್ರಿಕೆ Organizer ನಲ್ಲಿ “ಮನು ನಮ್ಮ ಹೃದಯವನ್ನಾಳುತ್ತಾನೆ” ಎಂಬ ಶೀರ್ಷಿಕೆಯಲ್ಲಿ ನಿವೃತ್ತ ನ್ಯಾಯಾಧೀಶ ಶಂಕರ ಸುಬ್ಬಾ ಐಯರ್ ಎಂಬಾತ ಆರೆಸ್ಸೆಸ್ ಪರವಾಗಿ ಲೇಖನ ಬರೆದು *ಮನುಸ್ಮ್ರತಿಯನ್ನೇ ದೇಶದ ಸಂವಿಧಾನವಾಗಿ ಜಾರಿ ಮಾಡಬೇಕು* ಎಂದು ಬರೆದಿದ್ದ. ನಿಮಗೆ ತಿಳಿದಿರಬಹುದು. ಬಾಬಾಸಾಹೇಬ್ ಅಂಬೇಡ್ಕರ್ ಮಹಾಡ್ ಸಮ್ಮೇಳನದಲ್ಲಿ ಮನುಸ್ಮ್ರತಿಯನ್ಜು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು.ಹಾಗಾದರೆ ಈ ಮನು ಸ್ಮೃತಿ ಯಲ್ಲಿ ನಿಜಕ್ಕೂ ಏನಿದೆ? ಇದರಲ್ಲಿ ತಿಳಿಸಲಾದ ಕೆಲವು ಸಂಗತಿಗಳು ಹೀಗೆವೆ. ಓದಿ ನಿಮ್ಮ ತೀರ್ಮಾನಗಳಿಗೆ ನೀವು ಬನ್ನಿ. ಅತ್ಯಂತ ಪ್ರಾಚೀನ ವೇದವಾದ ಋಗ್ವೇದದಲ್ಲಿ ಕಾಲಾನಂತರ ಬ್ರಾಹ್ಮಣರು ಪುರುಷ ಸೂಕ್ತ ಎಂಬ ಅಧ್ಯಾಯವನ್ನು ಸೇರಿಸಿದರು. ಅದರಲ್ಲಿರುವ 16 ಶ್ಲೋಕಗಳಲ್ಲಿ ಒಂದು ಹೀಗಿದೆ. “ಬ್ರಾಹ್ಮಣೋಸ್ಯ ಮುಖಮಸಿತ್/ ಬಾಹು ರಾಜನ್ಯ ಕೃತಃ/ಉರು ತಾಡಸ್ಯ ಯಾದ್ವೈಶ್ಯಾ:/ಪಾದ್ಯೋಗಂ ಶೂದ್ರೋ ಆಜಾಯತಾ” – ಭಾರತದಲ್ಲಿ ಜಾತಿ ವಿಷಬೀಜ ಬಿತ್ತಲು ಈ ಶ್ಲೋಕವನ್ನೇ ಬ್ರಾಹ್ಮಣರು ಬಳಸಿಕೊಂಡು ಬಂದಿದ್ದಾರೆ. ಯಾವುದೇ ಸಮಾರಂಭ, ಧಾರ್ಮಿಕ ಕಾರ್ಯಕ್ರಮದಲ್ಲಿ ಪುರೋಹಿತರು ಈ ಶ್ಲೋಕವನ್ನು ತಪ್ಪದೇ ಹೇಳುತ್ತಾರೆ. ಪುರುಷ ಸೂಕ್ತದ ಇದೇ ಶ್ಲೋಕವನ್ನು ಮನುಧರ್ಮ ಶಾಸ್ತ್ರದಲ್ಲಿ ಮನು ಕೂಡಾ ಮನುಧರ್ಮ ಶಾಸ್ತ್ರದಲ್ಲಿ ಪುನರುಚ್ಛರಿಸಿದ್ದಾನೆ. ಮನು ಹೇಳಿರುವುದು ಹೀಗೆ. ಲೋಕಗಳ ಉದ್ದಾರಕ್ಕಾಗಿ ಬ್ರಹ್ಮನು ತನ್ನ ಮುಖದಿಂದ ಬ್ರಾಹ್ಮಣನ ನ್ನೂ , ಭುಜದಿಂದ ಕ್ಷತ್ರಿಯನನ್ನೂ, ತೊಡೆಯಿಂದ ವೈಶ್ಯನನ್ನೂ, ಪಾದದಿಂದ ಶೂದ್ರ ನನ್ನೂ ಸೃಷ್ಟಿಸಿದನು ( ಅಧ್ಯಾಯ -1:31) ಮಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳವರ್ಣಗಳ ( ಬ್ರಾಹ್ಮಣ, ಕ್ಷತ್ರಿಯ, ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು ಆದೇಶಿಸಿದ್ದಾನೆ (ಅಧ್ಯಾಯ – 1:91) ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯಲ್ಲಿ ಆಳುವ ಅಧಿಕಾರ ಪಡೆದುಕೊಂಡು ಹುಟ್ಟಿರುತ್ತಾನೆ. ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ ಜೀವಿಗಳ ಒಡೆಯನಾಗಿರುತ್ತಾನೆ (ಅಧ್ಯಾಯ -1:99) ಈ ಭೂಮಿಯಲ್ಲಿ ಸೇರಿರುವುದೆಲ್ಲವೂ ಬ್ರಾಹ್ಮಣನಿಗೆ ಸೇರಿದ್ದಾಗಿವೆ. ಬ್ರಾಹ್ಮಣ ನು ಶ್ರೇಷ್ಡವಾದ ಜನ್ಮವನ್ನು ಪಡೆದದ್ದರಿಂದ ಇವೆಲ್ಲವನ್ನೂ ಹೊಂದಲು ಅವನೇ ಅರ್ಹನಾಗಿರುತ್ತಾನೆ (ಅಧ್ಯಾಯ -1:100) ಬ್ರಾಹ್ಮಣನಿಗೆ ಶುಭ ಸೂಚಕವಾದ, ಕ್ಷತ್ರಿಯನಿಗೆ ಶಕ್ತಿ ಸೂಚಕವಾದ, ವೈಶ್ಯನಿಗೆ ಧನ ಸೂಚಕವಾದ ಹಾಗೂ ಶೂದ್ರನಿಗೆ ಅಸಹ್ಯ ಸೂಚಕವಾದ ಹೆಸರುಗಳನ್ನು ಇಡಬೇಕು (ಅಧ್ಯಾಯ -2:31) ಬ್ರಾಹ್ಮಣರಿಗೆ ಇಷ್ಟವಾಗುವ ಎಲ್ಲ ರುಚಿಕರ ಪದಾರ್ಥಗಳನ್ನು ಅವರಿಗೆ ನೀಡಬೇಕು. ಅವರ ಜೊತೆ ಪರಬ್ರಹ್ಮ ವಿಚಾರವನ್ನು ಚರ್ಚಿಸಬೇಕು. ಇದರಿಂದ ಪಿತೃಗಳಿಗೆ ಪ್ರೀತಿಯುಂಟಾಗುತ್ತದೆ (ಅಧ್ಯಾಯ -3:231) ಹಂದಿಯು ಮೂಸುವುದರಿಂದ, ಕೋಳಿಯ ರೆಕ್ಕೆಯ ಗಾಳಿ ತಾಕುವುದರಿಂದ, ನಾಯಿ ನೋಡುವುದರಿಂದ ಹಾಗೂ ಶೂದ್ರನ ಸ್ಪರ್ಶದಿಂದ ಬ್ರಾಹ್ಮಣ ಭೋಜನವು ನಾಶವಾಗಿ ಹೋಗುತ್ತದೆ (ಅಧ್ಯಾಯ – 3:241) ಶೂದ್ರರಾಜನ ರಾಜ್ಯದಲ್ಲಿ, ಅಧರ್ಮಿಗಳಿರುವ ಪ್ರದೇಶದಲ್ಲಿ ವೇದವಿರೋಧಿಗಳಾದ ಪಾಷಂಡಿಗಳ ಪ್ರಾಂತದಲ್ಲಿ, ಅಂತ್ಯಜರ ಸನಿಹದಲ್ಲಿ ಬ್ರಾಹ್ಮಣರು ವಾಸ ಮಾಡಬಾರದು (ಅಧ್ಯಾಯ -4:61) ಶೂದ್ರನಿಗೆ ವಿದ್ಯೆ ಕಲಿಸಬಾರದು. ಯಜ್ಞದ ಹವಿಸ್ಸಿನ ಶೇಷವನ್ನು ಕೊಡಬಾರದು. ಧರ್ಮೋಪದೇಶ ಮಾಡಬಾರದು. ವ್ರತಾಚರಣೆ ಹೇಳಿಕೊಡಬಾರದು. (ಅಧ್ಯಾಯ – 4:80) ಬ್ರಾಹ್ಮಣರನ್ನು ವಧಿಸಲು ದ್ವಿಜಾತಿಯವರು ದಂಡಗಳನ್ನೆತ್ತಿದರೆ ಬರಿ ಎತ್ತಿದ ಮಾತ್ರಕ್ಕೆ ನೂರು ವರ್ಷಗಳ ತನಕ ತಾಮಿಸ್ರವೆಂಬ ನರಕದಲ್ಲಿ ಬೀಳುತ್ತಾರೆ (ಅಧ್ಯಾಯ – 4:165) ಬೇಕು ಬೇಕೆಂದೇ ಯಾರಾದರೂ ಕೋಪಕೊಂಡು ಬ್ರಾಹ್ಮಣನಿಗೆ ಹೊಡೆದರೂ ಸಾಕು ಅವರು ಇಪ್ಪತ್ತೊಂದು ಜನ್ಮ ಕಳೆಯುವ ತನಕ ಹೀನಯೋನಿಗಳಲ್ಲಿ ಹುಟ್ಟುತ್ತಾನೆ (ಅಧ್ಯಾಯ -4:166) ಪುರಾಣಕಾಲದಲ್ಲಿ ಮಾಡಿದ ಯಜ್ಞಗಳಲ್ಲಿ ಬ್ರಾಹ್ಮಣ ಹಾಗೂ ಕ್ಷತ್ರಿಯರು ಮಾಡಿದಂತ ಯಾಗಗಳಲ್ಲಿ, ಶಾಸ್ತ್ರ ಗಳಲ್ಲಿ ತಿನ್ನಬಹುದೆಂದು ಹೇಳಿದ ಮೃಗಪಕ್ಷಿಗಳನ್ನು ಬಲಿನೀಡಿ ಅವುಗಳ ಮಾಂಸದಿಂದ ಪುರೋಡಾಶನವನ್ನು ( ಹವಿಸ್ಸನ್ನು) ಮಾಡಿದ್ದರು ( ಅ-5:23) ಬ್ರಾಹ್ಮಣರಿಗೆ ಅಪೇಕ್ಷೆಯುಂಟಾದಾಗ ಯಜ್ಞವಿಧಿಗಳಲ್ಲಿ ಮಂತ್ರಜಲದಿಂದ ಪ್ರೋಕ್ಷಿತವಾದ ಮಾಂಸವನ್ನು ಹಾಗೂ ಶಾಸ್ತ್ರವಿಧಿಗಳಲ್ಲಿ ಹೇಳಲಾದ ರೀತಿಯಿಂದ ಶ್ರಾದ್ಧದೂಟದಲ್ಲಿನ ಮಾಂಸವನ್ನು ತಿನ್ನಬಹುದು. ಹಾಗೆಯೇ ಆಹಾರ ಸಿಗದೆ ಪ್ರಾಣ ಸಂಕಟ ಉಂಟಾದಾಗ ಅನಿವಾರ್ಯವಾಗಿ ಮಾಂಸವನ್ನು ತಿನ್ನಬಹುದು (ಅಧ್ಯಾಯ -5:27) ಈ ಜಗತ್ತಿನಲ್ಲಿರುವ ಸಮಸ್ತ ಸ್ಥಾವರ ಜಂಗಮ ಜೀವ ಜಂತುಗಳನ್ನು, ಚರಾಚರ ವಸ್ತುಗಳನ್ನು ತಿನ್ನಲಿಕ್ಕೆಂದೇ ಪರಮಾತ್ಮ ನು ಸೃಷ್ಟಿಸಿದ್ದಾನೆ (ಅಧ್ಯಾಯ – 5:28) ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಇತ್ಯಾದಿ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ ಬ್ರಾಹ್ಮಣ ನು ಪಶುವನ್ನು ಕೊಂದರೆ ಅವನು ತನ್ನ ಜತೆಗೆ ಆ ಪಶುವಿಗೂ ಉತ್ತಮ ಗತಿಯನ್ನು ಉಂಟು ಮಾಡುತ್ತಾನೆ (ಅಧ್ಯಾಯ – 5:42) ಪತಿಯ ನಡತೆಯು ಚೆನ್ನಾಗಿಲ್ಲವಾದರೂ, ಅವನು ಕಾಮಾತುರನಾಗಿ ಅನ್ಯ ಹೆಂಗಸಲ್ಲಿ ಮನಸ್ಸಿಟ್ಟರೂ, ದುರ್ಗುಣಿಯಾಗಿದ್ದರೂ ಸಾಧ್ವಿಯಾದ ಆ ಹೆಂಗಸು ಆ ತನ್ನ ಪತಿಯನ್ನು ದೇವರೆಂದೇ ಭಾವಿಸಿ ಅವನ ಸೇವೆ ಮಾಡಬೇಕು (ಅಧ್ಯಾಯ – 5:154) ವಿದ್ಯೆ ಕಲಿತು ಗುರುಕುಲದಿಂದ ಹೊರಬರುವ ಬ್ರಾಹ್ಮಣ ವಿದ್ವಾಂಸರನ್ನು ರಾಜನು ಸತ್ಕರಿಸಬೇಕು. ವಿದ್ಯಾವಂತ ಬ್ರಾಹ್ಮಣರಿಗೆ ನೀಡುವ ನಿಧಿಯು ಅಕ್ಷಯವಾದ ಫಲವನ್ನು ಉಂಟುಮಾಡುತ್ತದೆ (ಅಧ್ಯಾಯ -7:82) ಯಾವ ರಾಜನ ನ್ಯಾಯಸಭೆಯಲ್ಲಿ ಶೂದ್ರನು ಧರ್ಮವಿಚಾರ ವಿಮರ್ಶೆ ಮಾಡುತ್ತಾನೋ, ಆ ರಾಜನ ದೇಶವು ಕೆಸರಿನಲ್ಲಿ ಬಿದ್ದ ಹಸುವಿನಂತಾಗಿ ಬಿಡುತ್ತದೆ. ಅಂತಹ ರಾಜನು ನೋಡು ನೋಡುತ್ತಿದ್ದಂತೆಯೇ ಕಷ್ಟ ಪಡುತ್ತಾನೆ (ಅಧ್ಯಾಯ -8:21) ಯಾವ ರಾಜ್ಯವು ಹೆಚ್ಚಾಗಿ ಶೂದ್ರರಿಂದ ತುಂಬಿರುತ್ತದೋ, ನಾಸ್ತಿಕರಿಂದ ಆಕ್ರಮಿಸಲ್ಪಡುತ್ತದೋ, ಬ್ರಾಹ್ಮಣರಹಿತವಾಗಿರುತ್ತದೋ ಆ ರಾಜ್ಯವು ದುರ್ಭಿಕ್ಷ ರೋಗಗಳಿಂದ ಜರ್ಜರಿತವಾಗಿ ಬೇಗನೆ ನಾಶವಾಗಿ ಬಿಡುತ್ತದೆ (ಅಧ್ಯಾಯ -8:22) ಪರಸ್ಪರ ವಿರುದ್ಧ ಸಾಕ್ಷಿಗಳು ಹೇಳಲ್ಪಟ್ಟಾಗ ರಾಜನು ಬಹುಮತದ ಅಭಿಪ್ರಾಯ ಮನ್ನಿಸಬೇಕು. ಸಮಾನ ಇಬ್ಬರಲ್ಲಿ ಪರಸ್ಪರ ವಿರುದ್ಧ ಸಾಕ್ಷಿ ನುಡಿದರೆ ಗುಣವಂತನ ಸಾಕ್ಷಿ ಮನ್ನಿಸಬೇಕು. ಗುಣವಂತರಲ್ಲಿ ವಿರೋಧ ಸಾಕ್ಷಿ ಉಂಟಾದಾಗ ರಾಜನು ಬ್ರಾಹ್ಮಣ ಶ್ರೇಷ್ಟನ ಸಾಕ್ಷಿನಂಬಬೇಕು (ಅಧ್ಯಾಯ -8:73) ಬ್ರಾಹ್ಮಣನನ್ನು ಬೈದರೆ ಕ್ಷತ್ರಿಯನಿಗೆ ನೂರು ಪಣಗಳ ದಂಡ, ವೈಶ್ಯನಿಗೆ ನೂರೈವತ್ತು ಅಥವಾ ಇನ್ನೂರು ಪಣಗಳ ದಂಡ. ಬ್ರಾಹ್ಮಣನನ್ನು ಬೈದ ಶೂದ್ರನಿಗೆ ವಧೆ ಶಿಕ್ಷೆ (ಮರಣ ದಂಡನೆ) ವಿಧಿಸಬೇಕು. (ಅಧ್ಯಾಯ – 8:627) ಉಪನಯನ ಸಂಸ್ಕಾರ ಹೊಂದಲು ಅರ್ಹತೆಯಿಲ್ಲದ ಶೂದ್ರನು ದ್ವಿಜಾತಿಯವರಾದ ಬ್ರಾಹ್ಮಣ ಕ್ಷತ್ರಿಯ ವೈಶ್ಯರನ್ನು ಹೀನವಾದ ಕೆಟ್ಟ ಮಾತುಗಳಿಂದ ಬೈದರೆ ಕೆಳ ಜಾತಿಯಲ್ಲಿ ಹುಟ್ಟಿದ ಆ ಶೂದ್ರನ ನಾಲಿಗೆಯನ್ನು ಛೇಧಿಸತಕ್ಕದ್ದು. ಏಕೆಂದರೆ ಅವನುಕೆಳ ಜಾತಿಯವನು (ಅಧ್ಯಾಯ -8:270) ಬ್ರಾಹ್ಮಣ, ಕ್ಷತ್ರಿಯ ವೈಶ್ಯ ಇವರ ಜಾತಿಯ ಹೆಸರುಗಳನ್ನೆತ್ತಿ ಹೀನಾಮಾನವಾಗಿ ಬೈದಂತ ಆ ಶೂದ್ರನ ಬಾಯಲ್ಲಿ ಕಾದ ಕಬ್ಬಿಣದ ಹತ್ತಂಗುಲ ಉದ್ದದ ಸರಳನ್ನಿಡಬೇಕು (ಅಧ್ಯಾಯ – 8:271) ಬ್ರಾಹಣರಿಗೆ ಅಹಂಕಾರದಂದ ಧರ್ಮವನ್ನು ಬೋಧಿಸುವ ಶೂದ್ರನಿಗೆ ರಾಜನು ಬಾಯಲ್ಲಿಹಾಗೂ ಕಿವಿಯಲ್ಲಿ ಕಾದ ಎಣ್ಣೆಯನ್ನು ಹಾಕಿಸಬೇಕು (ಅಧ್ಯಾಯ -8:272) ಬ್ರಾಹ್ಮಣ ಮೊದಲಾದ ಶ್ರೇಷ್ಟ ಜಾತಿಯವರನ್ನು ತನ್ನ ಕೈಕಾಲು ಮುಂತಾದ ಯಾವುದಾದರೂ ಅಂಗದಿಂದ ಅಂತ್ಯಜನು ( ಶೂದ್ರನು) ಹೊಡೆದರೆ ಅವನ ಆ ಅಂಗವನ್ನು ( ಕೈ ಕಾಲು ಇತ್ಯಾದಿಯನ್ನು ) ಕತ್ತರಿಸಬೇಕು. ಇದು ಮನುವು ಹೇಳಿದ ಶಾಸನವು (ಅಧ್ಯಾಯ -8:279) ಬ್ರಾಹ್ಮಣನ ಜತೆಗೆ ಒಂದೇ ಆಸನದಲ್ಲಿ ಕುಳಿತ ಅಂತ್ಯಜನಿಗೆ ಅಥವಾ ಶೂದ್ರನಿಗೆ ಸೊಂಟದಲ್ಲಿ ಬರೆ ಎಳೆದು ಊರಿನಿಂದ ಹೊರಗೆ ಹಾಕಬೇಕು ಅಥವಾ ಅವನ ಕುಂಡೆಯನ್ನು ಕತ್ತರಿಸಬೇಕು ( ಆಗ ಅವನು ಸಾಯಬಾರದು) (ಅಧ್ಯಾಯ – 8:281) ಶೂದ್ರನು ಬೇಕೆಂತಲೇ ಸೊಕ್ಕಿನಿಂದ ಬ್ರಾಹ್ಮಣನ ಮೇಲೆ ಉಗುಳಿದರೆ ಅವನ ತುಟಿ ಕತ್ತರಿಸಬೇಕು. ಮೂತ್ರ ಚೆಲ್ಲಿ ಅವಮಾಬಿಸಿದರೆ ಅವನ ಶಿಶ್ನ ಕತ್ತರಿಸಬೇಕು. ಬೇಕೆಂತಲೇ ಹೂಸು ಬಿಟ್ಟು ಅವಮಾನಿಸಿದರೆ ಅವನ ಗುದವನ್ನು ಕತ್ತರಿಸಬೇಕು (ಅಧ್ಯಾಯ -8:282) ತನಗಿಂತ ಮೇಲು ಜಾತಿಯವನೊಡನೆ ಸಂಭೋಗ ಬಯಸಿ ಕೂಡಿಕೊಂಡ ಕನ್ಯೆಗೆ ದಂಡ ಹಾಕಬಾರದು. ತನಗಿಂತ ಕೀಳು ಜಾತಿಯವನೊಡನೆ ಸಂಭೋಗ ಬಯಸಿದ ಕನ್ಯೆಯನ್ನು ಮನೆಯಲ್ಲಿಯೇ ಗೃಹಬಂಧನದಲ್ಲಿರಿಸಬೇಕು (ಅಧ್ಯಾಯ -8:365) ಓರ್ವ ವೈಶ್ಯನು ಓರ್ವ ಬ್ರಾಹ್ಮಣ ಸ್ತ್ರೀಯನ್ನು ಭೋಗಿಸಿದರೆ ಅವರ ಸರ್ವಸ್ವವನ್ನೂ ಕಸಿದುಕೊಂಡು ಅವನಿಗೆ ಒಂದು ವರ್ಷ ಸೆರೆಮನೆವಾಸ ವಿಧಿಸಬೇಕು. ಕ್ಷತ್ರಿಯನು ಬ್ರಾಹ್ಮಣ ಸ್ತ್ರೀಯನ್ನು ಕೆಡಿಸಿದರೆ ಅವನ ತಲೆಗೆ ಮೂತ್ರ ಹಚ್ಚಿ ಬೋಳಿಸಬೇಕು (ಅಧ್ಯಾಯ -8:375) ಪತಿ ಮೊದಲಾದವರಿಂದ ರಕ್ಷಿತಳಾಗಿರುವ ಬ್ರಾಹ್ಮಣ ಸ್ತ್ರೀಯನ್ನು ಕ್ಷತ್ರಿಯ ವೈಶ್ಯರು ಭೋಗಿಸಿದರೆ ಅವರಿಗೂ ಶೂದ್ರರಿಗೆ ವಿಧಿಸಿದಂತೆ ಸರ್ವಸ್ವಾಪರಹಾರದ ದಂಡ ಹಾಕಿ ಹುಲ್ಲಿನ ಬಣವೆಯಲ್ಲಿಟ್ಟು ಬೆಂಕಿಹಚ್ಚಿ ಅವರನ್ನು ಸುಡಬೇಕು (ಅಧ್ಯಾಯ -8:377) ಇಂತಹ ಅಪರಾಧ ಮಾಡಿದ ಬ್ರಾಹ್ಮಣನಿಗೆ ತಲೆ ಬೋಳಿಸಿ ಅವಮಾನಿಸಿದರೆ ಸಾಕು. ಅದು ಅವನ ಮಟ್ಟಿಗೆ ಮರಣದಂಡನೆಗೆ ಸಮನಾದ ಶಿಕ್ಷೆಯಾಗಿರುವುದು. ಉಳಿದವರಿಗೆ ಮಾತ್ರ ಮರಣದಂಡನೆಯನ್ನೇ ವಿಧಿಸಬೇಕು (ಅಧ್ಯಾಯ -8:379) ಒಬ್ಬ ಬ್ರಾಹ್ಮಣನು ಎಲ್ಲ ವಿಧದ ಅಪರಾಧ, ಪಾಪ ಮಾಡಿದರೂ ಅವನನ್ನು ಕೊಲ್ಲಬಾರದು. ಅವನ ಸರ್ವಸ್ವ ಅಪಹರಿಸಿ ಅವನನ್ನು ದೇಶದಿಂದ ಹೊರಕ್ಕೆ ಹಾಕಬೇಕು (ಅಧ್ಯಾಯ -8:380) ಶಯ್ಯೆ, ಆಸನ, ಅಲಂಕಾರ, ಇವುಗಳ ಮೋಹ, ಕಾಮ, ಕ್ರೋಧ, ಅಪ್ರಾಮಾಣಿಕತೆ, ಪತಿದ್ರೋಹ ಮತ್ತು ದುರ್ನಡತೆ ಇವೆಲ್ಲಾ ಸಾಮಾನ್ಯವಾಗಿ ಸ್ತ್ರೀಯಲ್ಲಿರುವ ಸ್ವಾಭಾವಿಕ ಗುಣಗಳು (ಅಧ್ಯಾಯ -9:17) ಸ್ತ್ರೀಯರಿಗೆ ಮಂತ್ರಪೂರ್ವಕವಾದ ಧರ್ಮ ಸಂಸ್ಕಾರಗಳಿಲ್ಲ ಎಂದು ಶಾಸ್ತ್ರ ಹೇಳುತ್ತದೆ. ಇಂದ್ರಿಯಗಳನ್ನು ನಿಗ್ರಹಿಸಲು ಮಂತ್ರಸಾಧನಗಳು ಸ್ತ್ರೀಯರಿಗೆ ಹೇಳಲ್ಪಟ್ಟಿಲ್ಲವಾದ್ದರಿಂದ ಅವರು ಸದಾ ಅಶುದ್ಧರಾಗಿಯೇ ಇರುತ್ತಾರೆ ಎಂಬುದು ಧರ್ಮದ ವಿಚಾರವಾಗಿದೆ. (ಅಧ್ಯಾಯ: 9:19) ಮೂವತ್ತು ವಯಸಿನ ಪುರುಷ ಹನ್ನೆರಡು ವಯಸ್ಸಿನ ಸುಂದರ ಕನ್ಯೆಯನ್ನು ಮದುವೆಯಾಗಬೇಕು. ಇಲ್ಲವೇ ಇಪ್ಪತ್ತನಾಲ್ಕು ವರ್ಷದವನು ಎಂಟು ವರ್ಷದ ಕನ್ಯೆಯನ್ನು ಮದುವೆ ಮಾಡಿಕೊಳ್ಳಬೇಕು. ಅದಕ್ಕಿಂತ ಮೊದಲೇ ವಿವಾಹವಾದವನು ತೊಂದರೆ ಅನುಭವಿಸುತ್ತಾನೆ (ಅಧ್ಯಾಯ: 9:94) ರಾಜನು ತನ್ನ ಮೇಲೆ ಎಷ್ಟೇ ಸಂಕಷ್ಟಗಳ ಬಂದೆರಗಿದರೂ ಬ್ರಾಹ್ಮಣರ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ಬ್ರಾಹ್ಮಣನ ಶಾಪದಿಂದ ರಾಜನ ಸರ್ವಸ್ವವೂ ನಷ್ಟವಾಗಿಬಿಡುವುದು (ಅಧ್ಯಾಯ -9:313) ಬ್ರಾಹ್ಮಣರು ಕೋಪಗೊಂಡರೆ ಹೊಸ ಲೋಕಗಳನ್ನೇ ಸೃಷ್ಟಿಸಬಲ್ಲರು. ಹೊಸ ಲೋಕಪಾಲರನ್ನು ನೇಮಿಸಬಲ್ಲರು.ದೇವತೆಗಳ ದೈವತ್ವವನ್ನೇ ಅಳಿಸಿಬಿಡಬಲ್ಲರು. ಅಂಥ ಬ್ರಾಹ್ಮಣರನ್ನು ರೇಗಿಸಿ ಯಾವ ರಾಜ ತಾನೇ ಸಮೃದ್ಧಿ ಹೊಂದಬಲ್ಲನು? (ಅಧ್ಯಾಯ -9:315) ಬ್ರಾಹ್ಮಣನ ಸೇವೆಯೇ ಶೂದ್ರನ ವಿಶಿಷ್ಟ ಕರ್ತವ್ಯವಾಗಿದೆ. ಅವನು ಬೇರೆ ಕೆಲಸ ಮಾಡಿದರೆ ಅವನಿಗೆ ಯಾವ ಫಲವೂ ಸಿಗುವುದಿಲ್ಲ (ಅಧ್ಯಾಯ -10:123) ಹಣ ಸಂಪಾದನೆ ಮಾಡುವ ಸಾಮರ್ಥ್ಯವು ಇದ್ದರೂ ಶೂದ್ರನು ಹಣ ಸಂಪಾದಿಸಬಾರದು. ಹಣ ಸಂಪಾದನೆ ಮಾಡಿದರೆ ಶೂದ್ರನು ಬ್ರಾಹ್ಮಣರನ್ನು ಕಡೆಗಣಿಸುತ್ತಾನೆ (ಅಧ್ಯಾಯ -10:129) ಇಂದು ಬಹಳಷ್ಟು ಶೂದ್ರ ಯುವಕರು ಕಂಕಣ ಬದ್ಧರಾಗಿ 'ಹಿಂದುತ್ವ'ಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಅವರಿಗೆ ಮನುಧರ್ಮ ವನ್ನು ಆಧರಿಸಿದ ಹಿಂದುತ್ವ ಯಶಸ್ವಿಯಾದರೆ ಎಂತಹ ವ್ಯವಸ್ಥೆಯನ್ನುವ RSS/ BJP ತರಲಿವೆ ಎಂಬುದು ತಿಳಿಯಲಿ. ನಮ್ಮ ಭಾರತದಲ್ಲಿ ಜನಜೀವನ ಮತ್ತು ಸಂಸ್ಕೃತಿ ಹಾಗೂ ಧರ್ಮಗಳು ಶುರುವಾಗಿದ್ದು ನಲವತ್ತು ಸಾವಿರ ವರ್ಷಗಳ ಹಿಂದೆ. 9 ಸಾವಿರ ವರ್ಷಗಳ ಹಿಂದೆ ವಿಶ್ವ ಪ್ರಸಿದ್ಧ ಹರಪ್ಪಾ ನಾಗರಿಕತೆ ಆರಂಭವಾಗಿತ್ತು. ಇಷ್ಟು ಕಾಲದವರೆಗೂ ಈ ದೇಶದಲ್ಲಿ ಬ್ರಾಹ್ಮಣರಾಗಲೀ ಅವರ ಪೂರ್ವಿಕರಾಗಲೀ ಇರಲೇ ಇಲ್ಲ. ಕೇವಲ ಮೂರೂವರೆ ಸಾವಿರ ವರ್ಷಗಳ ಹಿಂದೆ ಇಲ್ಲಿಗೆ ದಾಳಿ ನಡೆಸಿ ಈ ದೇಶದ ಧರ್ಮ ಸಂಸ್ಕೃತಿಗಳ ಮೇಲೆ ತಮ್ಮ ವೈದಿಕ ಸಂಸ್ಕೃತಿ, ಬ್ರಾಹ್ಮಣ ಧರ್ಮವನ್ನು ಹೇರಿದರು. ಅಸ್ಪೃಶ್ಯತೆ ಜಾರಿಗೊಳಿಸಿದರು. ಇವತ್ತು ಅದನ್ನೇ ಭಾರತೀಯತೆ, ಪರಂಪರೆ ಎಂದು ಕರೆದು ವೈದಿಕ ಪೂರ್ವದಲ್ಲಿ ಇದ್ದ ಪ್ರಜಾಪ್ರಭುತ್ವ ಪದ್ಧತಿಯನ್ನು ಪಾಶ್ವಿಮಾತ್ಯ ತತ್ವ ಎನ್ನುತ್ತಿದ್ದಾರೆ. ನಾವೀಗ ಎಚ್ಚೆತ್ತುಕೊಳ್ಳದಿದ್ದರೆ ಭಾರತದ ಸರ್ವನಾಶ ಖಂಡಿತ. (ಮನುಸ್ಮೃತಿ ಕುರಿತು ಹೆಚ್ಚಿನ ಆಸಕ್ತಿಯಿದ್ದವರು ಶೇಷ ನವರತ್ನ ಅವರು ಸಂಸ್ಕೃತದಿಂದ ಯಥಾವತ್ತಾಗಿ ಕನ್ನಡಕ್ಕೆ ಅನುವಾದಿಸಿರುವ (ಸಂಸ್ಕೃತ ಶ್ಲೋಕಗಳ ಸಮೇತ) 200 ಪುಟಗಳ ಮನುಸ್ಮೃತಿ ಪುಸ್ತಕವನ್ನು ತರಿಸಿಕೊಂಡು ಓದಬಹುದು) ಲೇಖನ ಮೂಲ: ಅನಾಮಿಕ (ಕನ್ನಡ ಮೀಡಿಯಾ ಡಾಟ್ ಕಾಂ ಓದುಗರ ಹೆಚ್ಚಿನ ತಿಳುವಳಿಕೆಗಾಗಿ ಇಲ್ಲಿ ಪ್ರಕಟಿಸಲಾಗಿದೆ)

►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
Advertisement
Advertisement
Recent Posts
Advertisement