ಸಿಪಿಐ ಪಕ್ಷದ ಯುವ ಮುಖಂಡ ಹಾಗೂ ಪ್ರತಿಷ್ಠಿತ ಜೆಎನ್‌ಯೂ ನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೂ ಆಗಿರುವ ಕನ್ನಯ್ಯ ಕುಮಾರ್ ಹಾಗೂ ಗುಜರಾತ್‌ನ ಪಕ್ಷೇತರ ಶಾಸಕ ಜಿಗ್ನೇಶ್ ಮೆವಾನಿ ಇಂದು(ಮಂಗಳವಾರ) ಮಧ್ಯಾಹ್ನ 4 ಗಂಟೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಇತ್ತೀಚೆಗಿನ ವರ್ಷಗಳಲ್ಲಿ ದೇಶದ ಪ್ರಗತಿಪರರ, ಯುವಜನರ ಆಶಾಕಿರಣವಾಗಿ ಹೊರಹೊಮ್ಮಿರುವ ಈ ಇಬ್ಬರು ಯುವನಾಯಕರುಗಳ ಸೇರ್ಪಡೆ ಕಾರ್ಯಕ್ರಮವು ಯುವ ಕಾಂಗ್ರೆಸ್ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿದೆ ಹಾಗೂ ಈ ಸಂಧರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮತ್ತಿತರ ರಾಷ್ಟ್ರ ನಾಯಕರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.
ಕನ್ನಯ್ಯ ರವರು ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆ ದಿಲ್ಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷನಾಗಿದ್ದು, ಅವರು ಸಂವಿಧಾನದ ಆಶಯಗಳ ಕುರಿತು ಅಪಾರ ಗೌರವ ಮತ್ತು ಎಡಪಂಥೀಯ ಸೈದ್ಧಾಂತಿಕ ಸ್ಪಷ್ಟತೆ ಹೊಂದಿದ್ದಾರೆ ಅಲ್ಲದೇ ಸಂಘ ಪರಿವಾರದ ಮನುವಾದಿ ಪ್ರೇರಿತ ಬಲಪಂಥೀಯ ವಿಚಾರಧಾರೆ ಹಾಗೂ ಬಿಜೆಪಿ ಕೋಮುವಾದಿ ರಾಜಕಾರಣವನ್ನು ವಿರುದ್ಧ ವಿದ್ಯಾರ್ಥಿ ಯಾಗಿದ್ದಾಗಲೇ ಪ್ರಭಲವಾಗಿ ವಿರೋಧಿಸಿದ್ದರು ಮತ್ತು ಹಲವಾರು ಪ್ರತಿಭಟನೆಗಳನ್ನು ಕೂಡ ಆಯೋಜಿಸಿ ಬಲಪಂಥಿಯರಲ್ಲಿ ಚಳಿ ಹುಟ್ಟಿಸಿದ್ದರು.
ಆ ಕಾರಣಕ್ಕಾಗಿ ದೂರ್ತತನದಿಂದ 2016ರಲ್ಲಿ ದೆಹಲಿಯ ಜವಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯೂ)ಯಲ್ಲಿ ನಡೆದ ವಿಧ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಕನ್ನಯ್ಯ ಕುಮಾರ್ ದೇಶವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರೇರಿತ ಆಡಳಿತ ಕನ್ನಯ್ಯ ಸೇರಿ ಒಟ್ಟು 10 ಮಂದಿಯನ್ನು ಬಂಧಿಸಿತ್ತು. ಆದರೆ ಆ ನಂತರದ ದಿನಗಳಲ್ಲಿ ತನಿಖಾಧಿಕಾರಿಗಳು ಕನ್ನಯ್ಯ ಕುಮಾರ್ ದೇಶದ್ರೋಹದ ಘೋಷಣೆ ಕೂಗಿದ್ದಕ್ಕೆ ಯಾವುದೇ ಸಾಕ್ಷ್ಯಗಳನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾದ ಹಿನ್ನಲೆಯಲ್ಲಿ ಅವರಿಗೆ ದೇಶದ ನ್ಯಾಯಾಲಯ ನಿರ್ದೋಷಿ ಎಂದು ಘೋಷಿಸಿತ್ತು. ಆ ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಪಕ್ಷದ ಅಭ್ಯರ್ಥಿಯಾಗಿ ಬೇಗುಸರಾಯ್ ಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದರಾದರೂ ಅತಿ ಕಡಿಮೆ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಪ್ರಸ್ತುತ ಗುಜರಾತ್‌ನ ವಡ್ಗಾಂವ್ ಕ್ಷೇತ್ರದ ಶಾಸಕರಾಗಿರುವ ಜಿಗ್ನೇಶ್ ಮೆವಾನಿ ಶೋಷಿತ ದಲಿತ ಪರ ಹೋರಾಟದಿಂದ ದೇಶವ್ಯಾಪಿ ಪ್ರಖ್ಯಾತರಾಗಿದ್ದಾರೆ ಮತ್ತು ಅವರು ಆ ಮೂಲಕ ಗುಜರಾತ್‌ನ ಪ್ರಭಾವಿ ದಲಿತ ಯುವ ಮುಖಂಡರಾಗಿ ಹೊರಹೊಮ್ಮಿದ್ದರು. ಅವರು ಬಹುಮುಖ್ಯವಾಗಿ 'ಗುಜರಾತ್‌ನ ಉನ್ನಾವೋದಲ್ಲಿ ನಡೆದ ದಲಿತರ ಮೇಲಿನ ಅಮಾನುಷ ದೌರ್ಜನ್ಯ'ದ ವಿರುದ್ಧ ಹೋರಾಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರು. ಬಳಿಕ ಅದೇ ವರ್ಚಸ್ಸಿನಿಂದ ಕಳೆದ ಗುಜರಾತ್ ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿದ್ದರು ಮತ್ತು ಅತ್ಯಪೂರ್ವ ಗೆಲುವು ಕಂಡಿದ್ದರು ಮತ್ತು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅವರನ್ನು ಬೆಂಬಲಿಸಿತ್ತು.
ಜನಪರ ಹಾಗೂ ಪ್ರಗತಿಪರ ನಿಲುವು ಹೊಂದಿರುವ ಈ ಇಬ್ಬರು ಯುವ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಪಕ್ಷಕ್ಕೆ ಆನೆಬಲವನ್ನು ಹಾಗೂ ಹೊಸ ವರ್ಚಸ್ಸನ್ನು ಮೂಡಿಸಲಿದೆ ಎಂದು ದೇಶಾದ್ಯಂತ ವ್ಯಾಖ್ಯಾನಿಸಲಾಗುತ್ತಿದೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಇವರುಗಳ ಸೇರ್ಪಡೆಯಿಂದ ಯುವ ಕಾಂಗ್ರೆಸ್ ಬಲಿಷ್ಠಗೊಳಿಸಲು ಅನುಕೂಲವಾಗಲಿದೆ ಎನ್ನಲಾಗಿದೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಜಿಗ್ನೇಶ್‌ಗೆ ರಾಜ್ಯಮಟ್ಟದಲ್ಲಿ ಪ್ರಮುಖ ಸ್ಥಾನವನ್ನು ನೀಡಲಾಗುವುದು ಮತ್ತು ಕನ್ನಯ್ಯ ಕುಮಾರ್ ರವರಿಗೆ ರಾಷ್ಟ್ರಮಟ್ಟದಲ್ಲಿ ಸ್ಥಾನ ನೀಡುವ ಮೂಲಕ ಪಕ್ಷವನ್ನು ದೇಶದಾದ್ಯಂತ ಪುನರ್ ಸಂಘಟಿಸುವ ಕುರಿತು ಚಿಂತಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?