Advertisement

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು; ಸಿದ್ದರಾಮಯ್ಯ.

Advertisement

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು, ಈ ಕುರಿತ ಯಾವುದೇ ಚರ್ಚೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ತಿಳಿಸಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತನಾರಾಯಣ ಅವರಿಗೆ ಪತ್ರ ಬರೆದಿದ್ದೇನೆ; ಸಿದ್ದರಾಮಯ್ಯ. ಪತ್ರದ ಪ್ರತಿ ಮತ್ತು ಅದರ ಪೂರ್ಣಪಾಠ ಇಲ್ಲಿದೆ: ಸನ್ಮಾನ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ ನಾರಾಯಣ್ ಅವರೇ, ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ. ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟçಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ. ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ. ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ ೬ ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ ೧.೦೮ ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ. ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ. ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆAದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ ೭೦- ೮೦ ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ , ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ? ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೆ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೆ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ. ವಿಶ್ವಾಸಪೂರ್ವಕವಾಗಿ ಸಿದ್ದರಾಮಯ್ಯ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement