Advertisement

ಅಸ್ತಿತ್ವದ ಪ್ರಶ್ನೆ ಮತ್ತು ಅನಿವಾರ್ಯ ಸರ್ವಾಧಿಕಾರಿ ನೀತಿ ಎದುರಿಸಲು ಗಾಂಧಿ ಪರಿವಾರದ ಸಶಕ್ತ ನಾಯಕತ್ವವೇ ಸೂಕ್ತ

Advertisement

ಲೇಖಕರು: ದಿನೇಶ್ ಗುಂಡೂರಾವ್
ಶಾಸಕರು ಹಾಗೂ ಕೆ.ಪಿ.ಸಿ.ಸಿ. ಮಾಜಿ ಅಧ್ಯಕ್ಷರು

ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಾವೀಗ ಹೊಸ ಮನ್ವಂತರವೊಂದಕ್ಕೆ ಎದೆಯೊಡ್ಡಬೇಕಾಗಿದೆ. ಪಕ್ಷದ ಅಸ್ತಿತ್ವದ ದೃಷ್ಟಿಯಿಂದ ಅದು ಅನಿವಾರ್ಯ ಕೂಡ ವಂಶಪಾರಂಪರ್ಯ ರಾಜಕಾರಣಕ್ಕೆ ಕಾಂಗ್ರೆಸ್ ಜೋತುಬಿದ್ದಿದೆ ಎಂಬರ್ಥದಲ್ಲಿ ಬಿಜೆಪಿ ನಾಯಕರು ಮೊದಲಿನಿಂದಲೂ ಪುಕಾರು
ಎಬ್ಬಿಸುತ್ತಲೇ ಬಂದಿದ್ದಾರೆ. ಸದ್ಯ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಎಂದೂ ಬಲವಂತದಿಂದಾಗಲೀ ನೆಹರೂ-ಗಾಂಧಿ ಕುಟುಂಬದ ಹೆಸರು ಹೇಳಿಕೊಂಡಾಗಲೀ ಅಧ್ಯಕ್ಷ ಪದವಿ ಪಡೆದವರಲ್ಲ.

ಬಹುತೇಕರಿಗೆ ತಿಳಿಯದ ಸಂಗತಿಯೆಂದರೆ, ಇಂದಿರಾ ಗಾಂಧಿ ಹತ್ಯೆಯ ನಂತರ ರಾಜೀವ್ ಗಾಂಧಿ ರಾಜಕೀಯಕ್ಕೆ ಬರುವುದನ್ನು ವಿರೋಧಿಸಿದ ಏಕೈಕ ವ್ಯಕ್ತಿ ಸೋನಿಯಾ. ಬಹುಶಃ ಇಂದಿರಾ ಅವರ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಸೋನಿಯಾ ಅವರಿಗೆ ಆಗಲೇ ತಮ್ಮ ಪತಿಯ ಸಾವಿನ ಅಪಶಕುನದ ಸೂಚನೆ ಸಿಕ್ಕಿತ್ತೇನೋ? ಆದರೆ, ಆಗಿನ ಸ್ಥಿತಿಯಲ್ಲಿ ರಾಜೀವ್ ಅನಿವಾರ್ಯವಾಗಿ ರಾಜಕೀಯ ಪ್ರವೇಶಿಸಿದ್ದನ್ನು ನಿಸ್ಸಹಾಯಕ ಕಣ್ಣುಗಳಿಂದ ನೋಡಿದ್ದರು ಅವರು. ದುರದೃಷ್ಟವಶಾತ್, ಅತ್ತೆಯಂತೆಯೇ ಮುಂದೆ ಪತಿ ಕೂಡ ಜೀವ ಕಳೆದುಕೊಂಡದ್ದು ವಿಧಿಯಾಟ.

1990ರ ದಶಕದಲ್ಲಿ ರಾಷ್ಟ್ರ ರಾಜಕಾರಣ ಹಲವು ಸ್ಥಿತ್ಯಂತರಗಳಿಗೆ ಸಾಕ್ಷಿಯಾಗಿತ್ತು. ಅದು, ವಾಜಪೇಯಿ ಮತ್ತು ಅಡ್ವಾಣಿ ಅವರು ರಾಜಕೀಯವಾಗಿ ಉತ್ತುಂಗಕ್ಕೇರುತ್ತಿದ್ದ ಕಾಲಘಟ್ಟ. ಮತ್ತೊಂದು ಕಡೆ, ಅಸ್ಮಿತೆಯ ವಿಚಾರ ಇಟ್ಟುಕೊಂಡು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳ ಎದುರು ಕಾಲರ್ ಏರಿಸುತ್ತಿದ್ದವು. ಆ ಸಮಯದಲ್ಲಿ ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿ ಅವರ ಅವಧಿಯಲ್ಲಿ ಪಕ್ಷದ ಸಾಧನೆ ಹೇಳಿಕೊಳ್ಳುವಂತೇನೂ ಇರಲಿಲ್ಲ. ಪಕ್ಷದೊಳಗೆ ಅನೇಕ ಶಕ್ತಿ ಕೇಂದ್ರಗಳು ಉದ್ಭವವಾಗಿದ್ದವು.

ಇಂತಹ ಸ್ಥಿತಿಯಲ್ಲಿ ಸೋನಿಯಾ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ನಿರ್ಧಾರಕ್ಕೆ ಬರಲಾಯಿತು. ಇದಕ್ಕೆ ಬಿಜೆಪಿಯ ಟೀಕೆಯ ಜೊತೆಗೆ ಪಕ್ಷದ ಕೆಲ ಹಿರಿಯ ನಾಯಕರಿಂದ ಅಪಸ್ವರದ ಕೂಗೂ ಕೇಳಿಬಂದಿತ್ತು. ಶರದ್ ಪವಾರ್, ಪಿ.ಎ. ಸಂಗ್ಮಾರಂತಹ ಹಿರಿಯ ನಾಯಕರು ಸೋನಿಯಾ ಆಯ್ಕೆಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದರು.

ಕೊನೆಗೆ ಈ ಎಲ್ಲ ವಿರೋಧಗಳನ್ನೂ ಮೆಟ್ಟಿನಿಂತು. ಕಾರ್ಯಕರ್ತರು ಹಾಗೂ ನಿಷ್ಠಾವಂತ ಕಾಂಗ್ರೆಸ್ಸಿಗರ ಒತ್ತಡಕ್ಕೆ ಮಣಿದ ಸೋನಿಯಾ, 1998ರ ಆ ಸಂದಿಗ್ಧ ಕಾಲದಲ್ಲೇ ಕಾಂಗ್ರೆಸ್ ಎಂಬ ಹಡಗಿನ ಚುಕ್ಕಾಣಿ ಹಿಡಿದರು.2004ರ ಚುನಾವಣೆಯಲ್ಲಿ ಸೋನಿಯಾ ನಾಯಕತ್ವದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗಳಿಸಿತು. ಯುಪಿಎ ಮೈತ್ರಿಕೂಟ ಸ್ಥಾಪಿಸಿ, ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿಯನ್ನು ಸೋನಿಯಾ ಸಮರ್ಥವಾಗಿ ನಿಭಾಯಿಸಿದರು. ಅನಾಯಾಸವಾಗಿ ಒಲಿದು ಬಂದಿದ್ದ ಪ್ರಧಾನಿ ಹುದ್ದೆಯನ್ನು ತಿರಸ್ಕರಿಸಿದ ಅವರು ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗುವಂತೆ ನೋಡಿಕೊಂಡರು.

2009ರಲ್ಲೂ ಸೋನಿಯಾ ಪ್ರಧಾನಿಯಾಗಬಹುದಿತ್ತಾದರೂ ಆ ಹುದ್ದೆಯನ್ನು ಅವರು ಸ್ವೀಕರಿಸಲಿಲ್ಲ.ನೆಹರೂ-ಗಾಂಧಿ ಕುಟುಂಬದ ಹೊರತಾಗಿಯೂ ಅನೇಕರು ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಸ್ವಾತಂತ್ರಾö್ಯ ನಂತರದ ಕಾಂಗ್ರೆಸ್‌ನಲ್ಲಿ ಜೆ.ಬಿ. ಕೃಪಲಾನಿ, ನೀಲಂ ಸಂಜೀವ ರೆಡ್ಡಿ, ಕಾಮರಾಜ್, ಶಂಕರ್ ದಯಾಳ್ ಶರ್ಮಾ, ನರಸಿಂಹ ರಾವ್ ಅವರಂತಹ ಘಟಾನುಘಟಿ ನಾಯಕರು ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದಾರೆ. ಕರ್ನಾಟಕದ ಮೇರು ರಾಜಕಾರಣಿ ಎಸ್. ನಿಜಲಿಂಗಪ್ಪ ಕೂಡ ಈ ಸ್ಥಾನವನ್ನು ಅಲಂಕರಿಸಿದ್ದರು.

ಬಿಜೆಪಿ ನಾಯಕರು ಇದರ ಬಗ್ಗೆ ಬಾಯಿ ಬಿಡುವುದೇ ಇಲ್ಲ.ಈಗ ಪಕ್ಷಕ್ಕೆ ನೆಹರೂ-ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎನ್ನುವ ಮಾತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸರ್ವಾಧಿಕಾರಿ ನೀತಿಯನ್ನು ಎದುರಿಸಿ ನಿಲ್ಲಲು ಪಕ್ಷಕ್ಕೆ ಗಾಂಧಿ ಪರಿವಾರದ ನಾಯಕತ್ವವೇ ಸೂಕ್ತ. ಹಾಗಾಗಿ ಪಕ್ಷದ ಅಧ್ಯಕ್ಷರಾಗಲು ರಾಹುಲ್ ಗಾಂಧಿಯವರೇ ಅರ್ಹ ಅಭ್ಯರ್ಥಿ.

2019ರ ಲೋಕಸಭಾ ಚುನಾವಣೆಯ ಬಳಿಕ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಪದವಿಗೆ
ರಾಹುಲ್ ರಾಜೀನಾಮೆ ನೀಡಿದರು. ಪುಲ್ವಾಮ ಘಟನೆಯ ನಂತರ ಬಿಜೆಪಿ ನಡೆಸಿದ ಭಾವನಾತ್ಮಕ ಪ್ರಚಾರ ಹಾಗೂ ಬದಲಾದ ರಾಜಕೀಯ ಸನ್ನಿವೇಶವು 2019ರಲ್ಲಿ ಕಾಂಗ್ರೆಸ್‌ನ ಸೋಲಿಗೆ ಕಾರಣವೇ ವಿನಾ ಬೇರೇನೂ ಇಲ್ಲ.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಎತ್ತಿ ತೋರಿಸುವಲ್ಲಿ ರಾಹುಲ್ ಈಗಲೂ ಮುಂಚೂಣಿಯಲ್ಲಿದ್ದಾರೆ. ಇದನ್ನು ಸಹಿಸಲಾಗದ ಬಿಜೆಪಿ ನಾಯಕರು ರಾಹುಲ್‌ರನ್ನು ವಿನಾಕಾರಣ ಟೀಕಿಸಿ, ಅವರ ಮನೋಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಮಾಡುತ್ತಿದ್ದಾರೆ. ರಾಹುಲ್ ಅವಕಾಶವಾದಿ ರಾಜಕಾರಣಿಯಲ್ಲ. 2013ರ ಅಂತ್ಯದಲ್ಲಿ, ಯುಪಿಎ ಅವಧಿಯಲ್ಲಿ ಪ್ರಧಾನಿಯಾಗುವ ಅವಕಾಶವಿದ್ದರೂ ಮಂತ್ರಿ ಹುದ್ದೆಯನ್ನು ಸಹ ಅವರು ಸ್ವೀಕರಿಸಲಿಲ್ಲ.

ಆದರೆ ನರೇಗಾ, ಆಹಾರ ಭದ್ರತಾ ಕಾಯ್ದೆ, ಭೂಸ್ವಾಧೀನ ಕಾಯ್ದೆಯಂಥ ಪ್ರಗತಿಪರ ಕಾನೂನುಗಳನ್ನು ಜಾರಿಗೆ ತರುವಲ್ಲಿ ತೆರೆಮರೆಯಲ್ಲಿ ಪ್ರಮುಖ ಪಾತ್ರವಹಿಸಿದರು. ದೇಶದ ಜನರ ನಾಡಿಮಿಡಿತವನ್ನು ಚೆನ್ನಾಗಿ ಅರಿತಿರುವ
ರಾಹುಲ್ ಅವರೇ ಮತ್ತೆ ಪಕ್ಷದ ಅಧ್ಯಕ್ಷ ಸ್ಥಾನವಹಿಸಿಕೊಳ್ಳಲು ಅರ್ಹರು.

►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
Advertisement
Advertisement
Recent Posts
Advertisement