ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣ ಮಾಡಲಾಗದ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳು ಲೆಕ್ಕದ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಬೊಮ್ಮಾಯಿ ಸರ್ಕಾರ ಕೂಡಾ ಮೋದಿಯವರ ಸುಳ್ಳುಗಳನ್ನೇ ಇಲ್ಲಿ ಬಾಯಿಪಾಠ ಒಪ್ಪಿಸುತ್ತಿದೆ . ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 120 ಡಾಲರ್ ಗಿಂತ ಹೆಚ್ಚಿದ್ದರೂ ದೇಶದಲ್ಲಿ ಡೀಸೆಲ್ ಬೆಲೆ ರೂ.47, ಪೆಟ್ರೋಲ್ ಬೆಲೆ ರೂ.75ರ ಗಡಿಯೊಳಗೆ ಇತ್ತು, ಹಾಗಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಿತ್ತು. 2014 ರಿಂದ ಈ ವರೆಗೆ ಕಚ್ಚಾತೈಲ ದರ ಸುಮಾರು 50 ಡಾಲರ್ ಆಸುಪಾಸಿನಲ್ಲಿದ್ದರೂ ಇದರ ಲಾಭ ಗ್ರಾಹಕರಿಗೆ ಸಿಗಲಿಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಸರ್ಕಾರ ಅಬಕಾರಿ ಸುಂಕ ಏರಿಕೆ ಮಾಡಿದ್ದ ಕಾರಣ ಪೆಟ್ರೋಲಿಯಂ ಉತ್ಪನ್ನಗಳ ಜೊತೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಡೀಸೆಲ್ ಮೇಲೆ ರೂ.3.45 ಹಾಗೂ ಪೆಟ್ರೋಲ್ ಮೇಲೆ ರೂ.9.20 ಅಬಕಾರಿ ಸುಂಕ ಇತ್ತು, ನರೇಂದ್ರ ಮೋದಿ ಆಡಳಿತದಲ್ಲಿ ಅಬಕಾರಿ ಸುಂಕ ಡೀಸೆಲ್ ಮೇಲೆ ರೂ. 31.84 ಹಾಗೂ ಪೆಟ್ರೋಲ್ ಮೇಲೆ ರೂ. 32.98 ಆಗಿದೆ. ಇದರಲ್ಲಿ ಶೇ. 50 ಕಡಿಮೆ ಮಾಡಲಿ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಡೀಸೆಲ್, ಪೆಟ್ರೋಲ್ ಅಬಕಾರಿ ಸುಂಕದ ಮೂಲಕ ರೂ. 23 ಲಕ್ಷ ಕೋಟಿ ಸಂಗ್ರಹಿಸಿದೆ. 2020-21 ರಲ್ಲಿ ಸಂಗ್ರಹಿಸಿದ ಅಬಕಾರಿ ಸುಂಕ ರೂ. 3 ಲಕ್ಷ 35 ಸಾವಿರ ಕೋಟಿ. ಕಳೆದ ಏಳು ವರ್ಷಗಳಲ್ಲಿ ಕರ್ನಾಟಕದಿಂದ ರೂ.1 ಲಕ್ಷ 20 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ ಎಂದವರು ಹೇಳಿದ್ದಾರೆ.
ಪೆಟ್ರೋಲ್ ಬೆಲೆಯೇರಿಕೆಗೆ ತೈಲ ಬಾಂಡ್ ಕಾರಣ ಎನ್ನುವುದು ಶುದ್ದ ಸುಳ್ಳು. 2006 ರಿಂದ 2010 ರವರೆಗೆ ಖರೀದಿಸಿದ್ದು ರೂ. 1.40 ಲಕ್ಷ ಕೋಟಿ ಮೌಲ್ಯದ ತೈಲಬಾಂಡ್. ಮನಮೋಹನ್ ಸಿಂಗ್ ಸರ್ಕಾರ ರೂ. 5,762 ಕೋಟಿ ತೈಲಬಾಂಡ್ ಮರುಪಾವತಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೂ.30,923 ಕೋಟಿ ಬೆಲೆಯ ತೈಲ ಬಾಂಡ್ ಗಳನ್ನಷ್ಟೇ ಮರುಪಾವತಿಸಬೇಕಾಗಿದೆ. ಕೇಂದ್ರ ಸರ್ಕಾರ ಒಂದೇ ವರ್ಷದಲ್ಲಿ ಸಂಗ್ರಹಿಸಿರುವ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕದಲ್ಲಿ ಒಟ್ಟು ಸಾಲವೇ ತೀರಿಹೋಗುತ್ತದೆ. ಹಾಗಾಗಿ ತೆರಿಗೆಯನ್ನು ಶೇ. 50 ಕಡಿತಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯಲ್ಲಿ ರೂ. 3 ಕಡಿಮೆ ಮಾಡಿದ್ದಾರೆ. ರಾಜ್ಯದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಯಾಕೆ ತೆರಿಗೆ ಕಡಿತಗೊಳಿಸಬಾರದು? ಆಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಜೊತೆಗೆ ಅಗತ್ಯ ವಸ್ತುಗಳ ಬೆಲೆಯೂ ಇಳಿಯುತ್ತದೆ. ಜಿ.ಎಸ್.ಟಿ ಬಂದಮೇಲೆ ರಾಜ್ಯಗಳಿಗಿದ್ದ ತೆರಿಗೆ ಸಂಗ್ರಹದ ಅವಕಾಶ ಇಲ್ಲದಂತಾಗಿ ಆದಾಯ ಇಳಿಮುಖವಾಗಿದೆ. ಈ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರವನ್ನು ನೀಡಬೇಕಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಪರಿಹಾರವನ್ನೂ ಕೊಡದೆ ನೀವೆ ಸಾಲ ತಗೊಳ್ಳಿ ಎಂದು ಹೇಳುತ್ತಿರುವುದು ಯಾವ ನ್ಯಾಯ? ಎಂದವರು ಪ್ರಶ್ನಿಸಿದ್ದಾರೆ.
15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ, ರಾಜ್ಯದ ಪಾಲನ್ನು 4.71% ಇಂದ 3.64% ಗೆ ಇಳಿಸಲಾಗಿದೆ. ಹಿಂದೆ ರಾಜ್ಯದ ಪಾಲು, ವಿಶೇಷ ಅನುದಾನ ಸೇರಿ ಒಟ್ಟು ರೂ. 80,000 ಕೋಟಿ ರಾಜ್ಯಕ್ಕೆ ಬರುತ್ತಿತ್ತು, ಆದರೆ ಈಗ ರೂ. 38,000 ಮಾತ್ರ ಬರುತ್ತಿದೆ. ಇದಕ್ಕೆ ಯಾರು ಹೊಣೆ?
15ನೇ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿದ್ದ ರೂ. 5,495 ವಿಶೇಷ ಅನುದಾನವನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕಾರ ಮಾಡಿದರು, ಅದನ್ನು ಕೇಳುವ ಧೈರ್ಯ ಪುಕ್ಕಲು ಬೊಮ್ಮಾಯಿ ಸರ್ಕಾರಕ್ಕೆ ಇಲ್ಲ.
ಮುಖ್ಯಮಂತ್ರಿ ಬೊಮ್ಮಾಯಿಯವರು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುತ್ತಾರೆ ಎಂಬ ನಿರೀಕ್ಷೆ ಇಲ್ಲ. ಭಂಡ ಸರ್ಕಾರ ಇದು. ಇವತ್ತು ಆಟೋ ಚಾಲಕರು, ಕ್ಯಾಬ್ ಚಾಲಕರು, ಟ್ರ್ಯಾಕ್ಟರ್ ಇರುವ ರೈತರು, ಬಸ್ ಮಾಲೀಕರು, ಲಾರಿ ಮಾಲೀಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಗೋಳನ್ನಾಗಲಿ, ವಿರೋಧ ಪಕ್ಷಗಳ ಹೋರಾಟವನ್ನಾಗಲಿ ಕೇಂದ್ರ ನರೇಂದ್ರ ಮೋದಿ ಸರ್ಕಾರ ಮತ್ತು ರಾಜ್ಯ ದ ಬೊಮ್ಮಾಯಿ ಸರ್ಕಾರಗಳು ಗಣನೆಗೆ ತೆಗೆದುಕೊಳ್ಳದಷ್ಟು ಭಂಡತನವನ್ನು ಬೆಳೆಸಿಕೊಂಡಿದೆ. ಮಾಧ್ಯಮಗಳು ಜನರ ಬವಣೆಗೆ ದನಿಯಾದರೆ ಸರ್ಕಾರಗಳು ಎಚ್ಚೆತ್ತುಕೊಳ್ಳಬಹುದೇನೋ? ಎಂದವರು ಹೇಳಿದ್ದಾರೆ.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►►ಇದನ್ನೂ ಓದಿ:
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?