Advertisement

'ಸದನದಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮಂಡನೆಗೆ ಬೆಂಬಲ ನೀಡಿ ಹೊರಗಡೆ ಬಂದು ಪ್ರತಿಭಟನೆ ಮಾಡುವ ನಾಟಕವಾಡಿದವರು ಕುಮಾರಸ್ವಾಮಿ'

Advertisement

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿಯವರು ಕಳೆದ ಕೆಲವು ದಿನಗಳಿಂದ ಮನಸ್ಸಿಗೆ ಬಂದಂತೆ ವರ್ತಿಸುತ್ತಿದ್ದು ತಾವು ಏಕೆ ಮಾತನಾಡುತ್ತಿದ್ದೇವೆ ಎಂಬುದರ ಸ್ಪಷ್ಟತೆ ಇಲ್ಲದವರಂತೆ ಮಾತನಾಡುತ್ತಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮಂಡನೆಗೆ ಇವರು ಸದನದೊಳಗೆ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಹೊರಗಡೆ ಬಂದು ಅದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ನಾಟಕವಾಡಿದಾಗಲೇ ಇವರ ಪಕ್ಷ ಸೈದ್ಧಾಂತಿಕವಾಗಿ ಸತ್ತುಹೋಗಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಇನ್ನು ತಾವು ರಾಜಕೀಯವಾಗಿ ಯಾವ ಪಕ್ಷದೊಂದಿಗೆ ಸಹಯೋಗ ಮಾಡಿಕೊಳ್ಳಬೇಕೆಂಬ ಸ್ಪಷ್ಟತೆಯನ್ನು ಇಲ್ಲಿಯವರೆಗೂ ಕಂಡುಕೊಳ್ಳದ ಕುಮಾರಸ್ವಾಮಿಯವರನ್ನು ರಾಜಕೀಯವಾಗಿ ಪ್ರಜ್ಞೆಯಿರುವ ಮತ್ತು ಸಹಜವಾಗಿ ಯೋಚಿಸುವ ಯಾರೂ ಕೂಡಾ ಸೀರಿಯಸ್ಸಾಗಿ ತೆಗೆದುಕೊಳ್ಳಲೇಬಾರದು. ಆದರೂ ಈತನ ಪ್ರಚಾರ ಮತ್ತು ಮತ ಕ್ರೋಢೀಕರಣದ ಪ್ರಯತ್ನದ ಭಾಗವಾಗಿ ಬರುತ್ತಿರುವ ಬಾಲಿಶತನದ ಹೇಳಿಕೆಗಳು ಪೂರ್ಣ ವಿವರ ತಿಳಿಯದ ಈಗಿನ ಪೀಳಿಗೆಗೆ ತಪ್ಪು ಸಂದೇಶವಾಗಿ ಹೋಗಬಾರದೆಂಬ ಕಾರಣಕ್ಕೆ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದವರು ಹೇಳಿದರು. ನನಗೆ ನೆನಪಿದ್ದಂತೆ ನಾವು ಈ ಹಿಂದೆ ಸೈದ್ಧಾಂತಿಕ ಹೋರಾಟಗಳ ವಿಷಯಗಳ ಚರ್ಚೆಯಲ್ಲಿ ಇವರ ಭಾಗವಹಿಸುವಿಕೆಯನ್ನು ಕಂಡಿಲ್ಲ. ಹೀಗಿರುವಾಗ ಈಗ ಇವರ ಸೈದ್ಧಾಂತಿಕ ಮಾತುಗಳು ನನ್ನಲ್ಲಿ ನಗು ತರಿಸುತ್ತವೆ. ಇನ್ನು ಅಧಿಕಾರಕ್ಕಾಗಿ ನಾವೆಲ್ಲಾ ಪಕ್ಷ ತೊರೆದೆವು ಎಂದು ಸುಳ್ಳು ಹೇಳುವ ಕುಮಾರಸ್ವಾಮಿ ಅವರು ತಮ್ಮ ಅಧಿಕಾರದ ಆಸೆಗಾಗಿ ನಮ್ಮನ್ನು ಪಕ್ಷದಿಂದ ಉಚ್ಛಾಟಿಸಿದರು ಎಂಬ ಸಂಗತಿಯನ್ನು ಹೇಳುವುದಿಲ್ಲ. ಇದು ಅವರ ಸುಳ್ಳುಕೋರತನಕ್ಕೆ ಇರಬಹುದಾದ ಒಂದು ಸಾಕ್ಷಿ ಎಂದವರು ಹೇಳಿದ್ದಾರೆ. ಒಮ್ಮೆ ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಸಾಹಿತಿಯೊಬ್ಬರಿಗೆ ರಾಜ್ಯಸಭಾ ಸ್ಥಾನವನ್ನು ನೀಡುವ ಪ್ರಸ್ತಾಪ ಬಂದಾಗ ಮುಖ್ಯಮಂತ್ರಿ ಆಗಿದ್ದ ಇವರು ಆ ಸಾಹಿತಿ ಯಾರು? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇನ್ನೊಂದು ಸಂದರ್ಭದಲ್ಲಿ ಜಾತ್ಯಾತೀತತೆ ಎಂದರೆ ಏನು? ಎಂದು ಕೇಳಿದ ಅವರ ಪ್ರಶ್ನೆಯೂ ಕೂಡಾ ನಮ್ಮಲ್ಲಿ ಗೊಂದಲ ಮೂಡಿಸಿತ್ತು ಎಂದವರು ಖೇಧ ವ್ಯಕ್ತಪಡಿಸಿದ್ದಾರೆ. ಇದರ ಅರ್ಥ... ಕನ್ನಡ ನಾಡು, ನುಡಿ ಮತ್ತು ಜನ ಬದುಕಿನ ರಕ್ಷಣೆ ಹೊತ್ತ ಜನ ಪ್ರತಿನಿಧಿಗಳಿಗೆ ವಿಷಯ ಸ್ಪಷ್ಟತೆ ಇದ್ದರೆ ಆರೋಗ್ಯದಾಯಕ ಎಂಬುದೇ ಇಲ್ಲಿನ ಆಶಯವಾಗಿದೆ. ಇನ್ನು ಸಂವಿಧಾನಬದ್ಧವಾಗಿರುವ ವಿರೋಧ ಪಕ್ಷದ ಸ್ಥಾನವನ್ನು ಪುಟಗೋಸಿಗೆ ಹೋಲಿಸಿ ಮಾತನಾಡಿರುವ ಕುಮಾರಸ್ವಾಮಿ ಅವರಿಗೆ ಸಂವಿಧಾನಾತ್ಮಕ ಹುದ್ದೆಗಳ ಮೇಲೆ ತಮಗೆ ಗೌರವ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಬಾಬಾ ಸಾಹೇಬರ ಪ್ರಕಾರ ಓರ್ವ ಮತಾಂಧ, ಜಾತಿವಾದಿ, ಅಜ್ಞಾನಿ ಮತ್ತು ಫ್ಯೂಡಲ್ ವ್ಯಕ್ತಿತ್ವದ ವ್ಯಕ್ತಿಗೆ ಸಂವಿಧಾನಾತ್ಮಕ ಆಶಯಗಳು ಮತ್ತು ಅದರ ವ್ಯವಸ್ಥೆಯ ಮೇಲೆ ಗೌರವ ಇರುವುದಿಲ್ಲ, ಬಹುಶಃ ಸಂವಿಧಾನಾತ್ಮಕ ಹುದ್ದೆಯನ್ನು ಅವಮಾನಿಸಿದ ಕುಮಾರಸ್ವಾಮಿಯವರೂ ಕೂಡಾ ಬಾಬಾ ಸಾಹೇಬರು ಹೇಳಿದ ಮಾತನ್ನು ಸತ್ಯವಾಗಿಸುವ ವರ್ತನೆಯನ್ನು ತೋರಿರುವುದು ಅವರೊಬ್ಬ ಮಾಜಿ ಮುಖ್ಯಮಂತ್ರಿಯಾಗಿ ಸ್ವತಃ ಅವರೇ ತಲೆ ತಗ್ಗಿಸಬೇಕಾದ ಸಂಗತಿ ಎಂದವರು ಹೇಳಿದರು. ಕೊನೆಯದಾಗಿ, ಸಾರ್ವಜನಿಕ ಸೇವಾ ವಲಯದಲ್ಲಿರುವ ಯಾರೇ ಆದರೂ ಗುಣಾತ್ಮಕವಾಗಿ, ಸಂವಿಧಾನಾತ್ಮಕ ಆಶಯಗಳಿಗೆ ಅನುಗುಣವಾಗಿ, ಸಾಂಸ್ಕೃತಿಕ ಮೌಲ್ಯಗಳನ್ನು ರೂಢಿಸಿಕೊಂಡು ಬೆಳೆಯಬೇಕೆಂಬುದು ನನ್ನ ಆಶಯವಾಗಿದ್ದು ನನ್ನ ಈ ಆಶಯಕ್ಕೆ ಕುಮಾರಸ್ವಾಮಿ ಕೂಡಾ ಹೊರತಲ್ಲ ಎಂದು ಹೇಳುತ್ತಾ, ಇನ್ನು ಮುಂದಾದರೂ ಕುಮಾರಸ್ವಾಮಿಯವರು ತಮ್ಮ ಅಧ್ಯಯನ, ಹೋರಾಟ ಮತ್ತು ಸಂಘಟನೆಯ ಮೂಲಕ ಸೈದ್ಧಾಂತಿಕ ಗಟ್ಟಿತನವನ್ನು ರೂಢಿಸಿಕೊಂಡು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಲು ಶ್ರಮಿಸಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: ►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ. ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ? ►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಭಾರತದಲ್ಲಿ ದಿಢೀರ್‌ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ? ►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?* ►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.* ►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ! ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ? ►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ ►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು! ►►ಕಾಂಗ್ರೆಸ್‌ನಲ್ಲಿ ಪ್ರಮೋಷನ್‌ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ ►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ. ►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ! ►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ! ►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ? ►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ! ►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ ►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್! ►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು! ►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ

Advertisement
Advertisement
Recent Posts
Advertisement