ಈ ದೇಶದಲ್ಲಿ ಬಿಜೆಪಿಗರಂತಹ ಜಾತಿವಾದಿಗಳು ಬೇರಾರು ಇಲ್ಲ, 'ಸಂವಿಧಾನ ಬದಲಾವಣೆ ಮಾಡ್ತೀವಿ' ಎಂದು ಹೇಳಿದ ಬಿಜೆಪಿ ಪಕ್ಷಕ್ಕೆ, ತಮ್ಮ ಸ್ವಾರ್ಥಕ್ಕಾಗಿ ಹಲವರು ಹೋಗ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದೆ. ಆದರೆ ಬಿಜೆಪಿ ನಾಯಕರು ನನ್ನ ಹೇಳಿಕೆಯನ್ನು ತಮಗೆ ಬೇಕಾದಂತೆ ತಿರುಚಿ, ನನ್ನ ವಿರುದ್ಧ ಹೋರಾಟ ಮಾಡ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಪ್ರತಿಕೃತಿ ಸುಟ್ಟ ತಕ್ಷಣ ನಾನು ಸುಟ್ಟೋಗಲ್ಲ. ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ. ಎಲ್ಲರೂ ಸಮಾನವಾಗಿರಬೇಕು, ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು, ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು ಎಂಬ ನನ್ನ ನಿಲುವಿಗೆ ನಾನು ಈಗಲೂ ಬದ್ಧ ಎಂದರು.
ಸಿದ್ದರಾಮಯ್ಯ ಕುರುಬ ಸಮಾಜಕ್ಕೆ ಏನು ಕೊಟ್ಟಿದ್ದಾರೆ? ಎಂದು ಕೆಲವರು ಕೇಳ್ತಾರೆ. ಒಂದು ಜಾತಿಯಲ್ಲಿ ಮಾತ್ರ ಬಡವರಿದ್ದಾರ? ಮುಖ್ಯಮಂತ್ರಿಯಾಗಿ ಒಂದು ಸಮಾಜದ ಅಭಿವೃದ್ಧಿ ಮಾತ್ರ ಬಯಸುವುದು ಸರಿಯೇ?
ಹೀಗಾಗಿ ಅವಕಾಶದಿಂದ ವಂಚಿತರಾದ ಎಲ್ಲ ಜನರ ಪರ ನಾನು ಕೆಲಸ ಮಾಡಿದ್ದೇನೆ ಎಂದವರು ಹೇಳಿದ್ದಾರೆ.
ಕೆಂಪೇಗೌಡರು, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು, ಭಗೀರಥ, ಕೃಷ್ಣ, ವೇಮನ ಮತ್ತಿತರರ ಜಯಂತಿ ಆಚರಣೆ ಮಾಡಿದ್ದು ನಮ್ಮ ಸರ್ಕಾರ. ಜಾತಿ, ಧರ್ಮಗಳನ್ನು ಮೀರಿ ಸಾಧನೆಯನ್ನು ಮಾಡಿದವರ ಜಯಂತಿ ಆಚರಣೆಗೆ ಜಾತಿ ಏಕೆ? ಸಮಾಜದಲ್ಲಿ ಜಾತಿ ವಿಷಬೀಜ ಬಿತ್ತುವ ಕೊಳಕು ಮನಸ್ಸಿನವರಿಗೆ ಮಾತ್ರ ನಾನು ಜಾತಿವಾದಿಯಂತೆ ಕಾಣುವುದು. ನನ್ನನ್ನು ಜಾತಿವಾದಿ ಎನ್ನುವವರು ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಸಾಲಮನ್ನಾ ಮುಂತಾದ ಯೋಜನೆಗಳ ಫಲಾನುಭವಿಗಳ ಬಳಿ ಸಿದ್ದರಾಮಯ್ಯ ಜಾತಿವಾದಿಯೇ ಎಂದು ಕೇಳಿ ಎಂದವರು ಹೇಳಿದರು.
*Related news- ಸಿದ್ದರಾಮಯ್ಯನವರು ಸಿಂದಗಿಯ ಸಭೆಯಲ್ಲಿ ದಲಿತರನ್ನು ಅಗೌರವಿಸುವ ಮಾತನ್ನು ಆಡಿದ್ದರೇ? ಇಲ್ಲಿದೆ ವಿವರಗಳು!
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸಿಂದಗಿಯ ಸಭೆಯಲ್ಲಿ 'ದಲಿತ ನಾಯಕರುಗಳಾದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ, ನಾರಾಯಣ ಸ್ವಾಮಿ ಮುಂತಾದವರು ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಮತ್ತವರ ರಚನೆಯ ಸಂವಿಧಾನವನ್ನು ವಿರೋಧಿಸುವ ಬಿಜೆಪಿ ಜೊತೆ ಸ್ವಾರ್ಥಕ್ಕಾಗಿ ಸೇರಿಕೊಂಡಿದ್ದಾರೆ' ಎಂದು ಹೇಳಿದ್ದನ್ನು ತಿರುಚಿ 'ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ' ಎಂದು ಹೇಳಿದ್ದಾರೆ ಎಂದು ಕೆಲವು ಬಿಜೆಪಿ ಪರ ಮಾಧ್ಯಮಗಳು ಅಪಪ್ರಚಾರ ನಡೆಸುವ ಮೂಲಕ 'ಸಿದ್ದರಾಮಯ್ಯ ನವರು ದಲಿತ ವಿರೋಧಿ' ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿರುವುದರ ನಡುವೆ ಇಂದು ಸ್ವತಃ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮಾಡುವ ಮೂಲಕ ಸತ್ಯ ಏನೆಂಬುವುದನ್ನು ಸಾರ್ವಜನಿಕರೆದುರು ಬಿಚ್ಚಿಟ್ಟಿದ್ದಾರೆ.
ಟ್ವೀಟ್ ನ ವಿವರಗಳು ಇಂತಿವೆ:
1/14- ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ, ನಾರಾಯಣ ಸ್ವಾಮಿ ಮೊದಲಾದವರು ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಮತ್ತವರ ರಚನೆಯ ಸಂವಿಧಾನವನ್ನು ವಿರೋಧಿಸುವ ಬಿಜೆಪಿ ಜೊತೆ ಸ್ವಾರ್ಥಕ್ಕಾಗಿ ಸೇರಿದ್ದಾರೆ ಎಂದು ಸಿಂದಗಿಯ ಮಾದಿಗ ದಂಡೋರಾ ಸಭೆಯಲ್ಲಿ ಹೇಳಿದ್ದೆ ಹೊರತು ಎಲ್ಲಿಯೂ ದಲಿತರನ್ನು ಅಗೌರವಿಸುವ ಮಾತು ಆಡಿಲ್ಲ.
2/14- ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುತ್ತೇವೆ ಎಂದಾಗ, ದಲಿತರನ್ನು ನಾಯಿಗಳು ಎಂದು ತುಚ್ಚೀಕರಿಸಿದಾಗ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯ ದಲಿತ ನಾಯಕರು, ಈಗ ನನ್ನ ವಿರುದ್ಧ ಕೂಗು ಹಾಕುತ್ತಿರುವುದು ರಾಜಕೀಯ ಸ್ವಾರ್ಥಕ್ಕಾಗಿಯಲ್ಲದೆ ಮತ್ತೇನು?
3/14- ನನ್ನನ್ನು ದಲಿತ ವಿರೋಧಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ನನ್ನದೊಂದು ಸಣ್ಣ ಸವಾಲು. ರಾಜ್ಯ ಬಜೆಟ್ ನ ಶೇಕಡಾ 24.1ರಷ್ಟು ಭಾಗವನ್ನು ಮೀಸಲಿಡುವ SCSP/TSP ಕಾಯ್ದೆಯನ್ನು ನಾನು ಜಾರಿಗೆ ತಂದಿದ್ದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ಅದನ್ನು ಜಾರಿಗೆ ತರುವಂತೆ ಮಾಡಿ ನೋಡೋಣ.
4/14- 2008-09 ರಿಂದ 2012-13ನೇ ಸಾಲಿನವರೆಗೆ ಬಿಜೆಪಿ ಸರ್ಕಾರ SCSP/TSP ಯೋಜನೆಯಡಿ ಖರ್ಚು ಮಾಡಿದ್ದು ಕೇವಲ ರೂ.22,261 ಕೋಟಿ. ನಮ್ಮ ಸರ್ಕಾರದ ಅವಧಿಯಲ್ಲಿ ರೂ. 88,395 ಕೋಟಿ.
ಯಾರು ದಲಿತ ವಿರೋಧಿ?
ನಾನಾ? ಬಿಜೆಪಿ ನಾಯಕರಾ?
5/14- ಪರಿಶಿಷ್ಟ ಜಾತಿ/ ಪಂಗಡದ ಸರ್ಕಾರಿ ನೌಕರರ ಮುಂಬಡ್ತಿ ಸೌಲಭ್ಯವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದಾಗ ಬಿಜೆಪಿ ದಲಿತ ನಾಯಕರು ಕಣ್ಣುಮುಚ್ಚಿ ಕೂತಿದ್ದರು. ಸುಗ್ರಿವಾಜ್ಞೆ ಮೂಲಕ ಆ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಿದ್ದು ನಮ್ಮ ಸರ್ಕಾರ ಎನ್ನುವುದನ್ನು ಮರೆಯಬೇಡಿ.
6/14- ಪರಿಶಿಷ್ಟ ಜಾತಿ/ ಪಂಗಡದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಶೇಕಡಾ 18ರಷ್ಟು ಮೀಸಲಾತಿ ನೀಡಿ ಕೆಟಿಟಿಪಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ನಮ್ಮ ಸರ್ಕಾರ.
ರಾಜ್ಯ ಬಿಜೆಪಿಯ ದಲಿತ ನಾಯಕರು ಮೋದಿಯವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ದಲಿತರಿಗೆ ಈ ಅನುಕೂಲ ಮಾಡಿಕೊಡಿ.
7/14- ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ/ಪಂಗಡಗಳ ಆಶ್ರಮ ಶಾಲೆ, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಹಾರಕ್ಕಾಗಿ ಮಾಸಿಕವಾಗಿ ನೀಡುತ್ತಿದ್ದ ಹಣ ರೂ.600, ರೂ.750 ಮತ್ತು ರೂ.850 ಅದನ್ನು ಕ್ರಮವಾಗಿ ರೂ.1300, ರೂ.1500 ಮತ್ತು ರೂ.1600ಕ್ಕೆ ಹೆಚ್ಚಿಸಿದ್ದು ನಮ್ಮ ಸರ್ಕಾರ.
8/14- ನಮ್ಮ ಸರ್ಕಾರ ಹೋಬಳಿಗೊಂದು ಪ.ಜಾ/ಪ.ಪಂ ವಸತಿ ಶಾಲೆಯಂತೆ 270 ಹೊಸ ವಸತಿ ಶಾಲೆ ಹಾಗೂ 200 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿತ್ತು. ಇದರಿಂದ 74,300 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಪ್ರವೇಶಾವಕಾಶ ಸಿಕ್ಕಿದೆ.
ಬಿಜೆಪಿ ಸರ್ಕಾರದ ಸಾಧನೆ ಏನು?
9/14- ಪ.ಜಾ/ ಪ.ಪಂ. ಉದ್ಯಮಿಗಳಿಗೆ KSFC ಮೂಲಕ ಶೇ.4 ರ ಬಡ್ಡಿಯಲ್ಲಿ ರೂ.10 ಕೋಟಿ ವರೆಗೆ ಸಾಲ. ಈ ಸೌಲಭ್ಯವನ್ನು ರಾಷ್ಟ್ರೀಕೃತ ಬ್ಯಾಂಕುಗಳಿಗೂ ವಿಸ್ತರಣೆ ಮಾಡಿದ್ದೆವು. ಈ ಮೂಲಕ 1,597 ಉದ್ಯಮಿಗಳಿಗೆ 908 ಕೋಟಿ ರೂ. ಸಾಲ ನೀಡಿದ್ದೆವು –ಇದು ನಮ್ಮ ಸಾಧನೆ.
ಬಿಜೆಪಿ ಸರ್ಕಾರದ ಸಾಧನೆ ಏನು?
10/14- ಪ.ಜಾ/ ಪ.ಪಂ ಸಮುದಾಯದ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ/ಅತಿ ಸೂಕ್ಷ್ಮ 72 ಸಮುದಾಯಗಳನ್ನು ಗುರುತಿಸಿ ರೂ.222 ಕೋಟಿ ವೆಚ್ಚದಲ್ಲಿ ಅವರ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದು ನಮ್ಮ ಸರ್ಕಾರ.
11/14- ನಮ್ಮ ಸರ್ಕಾರ 840 ಕೋಟಿ ರೂ. ವೆಚ್ಚದಲ್ಲಿ ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನರಾಂ ಮತ್ತು ಮಹರ್ಷಿ ವಾಲ್ಮೀಕಿ ಯವರ ಹೆಸರಲ್ಲಿ 8,199 ಭವನಗಳನ್ನು ನಿರ್ಮಿಸಿತ್ತು. ನನ್ನನ್ನು ದಲಿತ ವಿರೋಧಿ ಎಂದು ಹೇಳುವವರು ಬಿಜೆಪಿ ಕಾಲದಲ್ಲಿ ಕಟ್ಟಿದ್ದೆಷ್ಟು ಎಂದು ಲೆಕ್ಕ ಹೇಳಲಿ.
12/14- ನಮ್ಮ ಸರ್ಕಾರ 1,494 ಕೋಟಿ ರೂ. ವೆಚ್ಚದಲ್ಲಿ ಪ.ಜಾ/ಪ.ಪಂ ವಿದ್ಯಾರ್ಥಿನಿಲಯಗಳ ಸ್ವಂತ ಕಟ್ಟಡ, ರೂ.1,537 ಕೋಟಿ ವೆಚ್ಚದಲ್ಲಿ 129 ವಸತಿ ಶಾಲಾ ಸಂಕೀರ್ಣ ನಿರ್ಮಾಣ, 16 ವಿಶ್ವವಿದ್ಯಾಲಯಗಳಲ್ಲಿ 116 ಕೋಟಿ ರೂ. ವೆಚ್ಚದಲ್ಲಿ ಸ್ನಾತಕೋತ್ತರ ವಸತಿನಿಲಯ ನಿರ್ಮಿಸಿದೆ.
ಬಿಜೆಪಿ ಸರ್ಕಾರ ಏನು ಮಾಡಿದೆ?
13/14- ಎರಡೂವರೆ ಲಕ್ಷ ಪ.ಜಾ/ ಪ.ಪಂ ಫಲಾನುಭವಿಗಳು ವಿವಿಧ ಅಭಿವೃದ್ಧಿ ನಿಗಮದಿಂದ ಪಡೆದಿದ್ದ ರೂ.581 ಕೋಟಿ ಸಾಲ ಮನ್ನಾ ಮಾಡಿದ್ದು ನಮ್ಮ ಸರ್ಕಾರ. ಬಿಜೆಪಿ ಸರ್ಕಾರ ಈ ಸಮುದಾಯದ ಫಲಾನುಭವಿಗಳ ಎಷ್ಟು ಸಾಲ ಮನ್ನಾ ಮಾಡಿದೆ?
14/14- ನಾನು ಮುಸ್ಲಿಂ ವಿರೋಧಿ ಎಂದು ಬೊಬ್ಬಿಟ್ಟ ಪಕ್ಷದ ಅಭ್ಯರ್ಥಿಗಳ ಠೇವಣಿ ಜಪ್ತಿ ಮಾಡಿಸಿ ಉಪ ಚುನಾವಣೆಯಲ್ಲಿ ಮತದಾರರು ಉತ್ತರ ಕೊಟ್ಟಿದ್ದಾರೆ. ಈಗ ಬಿಜೆಪಿಯ ಕೆಲವು ತಥಾಕಥಿತ ದಲಿತ ನಾಯಕರು ನಾನು ದಲಿತ ವಿರೋಧಿ ಎಂದು ಕೂಗಾಡುತ್ತಿದ್ದರಂತೆ.
ಇದಕ್ಕೂ ಮತದಾರರೇ ಉತ್ತರ ನೀಡುತ್ತಾರೆ.
#ದಲಿತವಿರೋಧಿಬಿಜೆಪಿ
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?*
►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.*
►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ!
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ?
►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ
►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು!
►►ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ
►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ!
►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ
►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್!
►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು!
►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ