ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ?
ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ.
ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ. ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ.
ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ. ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ.
ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ 'ವಿವಾಹ' ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿ ಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.
ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಕಾಯ್ದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ.
ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ? ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ.
ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು ಎಂದವರು ಹೇಳಿದರು.
ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರು ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ‌್ಯಾರೂ ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ. ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. 2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ.
ಮುಸ್ಲಿಮರ ಪ್ರಮಾಣ 12.23% ಇಂದ 12.92 ಹೆಚ್ಚಾಗಿದೆ.
ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ.
ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ ಎಂದವರು ವಿಶ್ಲೇಷಿಸಿದ್ದಾರೆ.
ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ.
ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಹಿಂದೂ ಧರ್ಮದ ಜಾತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ " ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ" ಎಂದು ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ.
ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ.
ಇದು ನಿಜವಾಗಿ ಈಗ ನಾವು ಮಾಡಲೇಬೇಕಾದ ಕೆಲಸ. ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದವರು ಹೇಳಿದರು.
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:
►► ನೀವು ಈ ಕೆಳಗಿನ ಲೇಖನಗಳನ್ನು ಓದಿಲ್ಲವೇ? ಅಗತ್ಯವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
►►ಎಳೆಮಕ್ಕಳ, ವಿದ್ಯಾರ್ಥಿಗಳ ಪ್ರಾಣಕ್ಕೆ ಮಾರಕವಾದ ಟೇಸ್ಟಿಂಗ್ ಪೌಡರ್ ಅನ್ನು ಸರ್ಕಾರ ಅದೇಕೆ ನಿಷೇಧಿಸುತ್ತಿಲ್ಲ?
►► ‘ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಭಾರತದಲ್ಲಿ ದಿಢೀರ್ ಜನಪ್ರಿಯರಾಗಲು ಇರುವ ಸರಳ ಮಾರ್ಗ ಯಾವುದು ಗೊತ್ತೇ?
►► ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►► *ಸ್ವಯಂ ಘೋಷಿತ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಸ್ವಾತಂತ್ರ್ಯಾ ನಂತರ ಬರೋಬ್ಬರಿ ಮೂರು ಬಾರಿ ನಿಷೇಧಕ್ಕೊಳಗಾಗಲು ಕಾರಣಗಳೇನು?*
►► *ನೋಟುಬ್ಯಾನ್ ಮಾಡಿದ ನಂತರ ಪ್ರಧಾನಿ ಮೋದಿಯವರು, ಟೋಕಿಯೋದಲ್ಲಿ ಭಾರತದ ಜನರನ್ನು ಗೇಲಿಮಾಡಿ ಮಾಡಿದ ಭಾಷಣದ ಅಪರೂಪದ ವಿಡಿಯೋ.*
►►ಸಂಘಿಬಾನಿಗಳ ಆಡಳಿತದಲ್ಲಿ ಸಂವಿಧಾನ ಬದಲಾಗುತ್ತಾ? ಬದಲಾದರೆ ಏನೇನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ.. ವಿಡಿಯೋ ನೋಡಿ!
►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ಸ್ವಾತಂತ್ರ ಹೋರಾಟವನ್ನು ಹತ್ತಿಕ್ಕಲು ಬ್ರಿಟೀಷರು, ಸಾವರ್ಕರ್ ರನ್ನು ದಾಳವಾಗಿ ಬಳಸಿದ್ದರೇ?
►►9 ಜನ್ಮದಲ್ಲಿ ಸ್ವರ್ಗಸುಖ ಸಿಗುತ್ತದೆ ಎಂದು ಗೌರಿಯನ್ನು ಕೊಲೆ ಮಾಡಿದ್ದ ಹಂತಕರು.. ತಾಲೀಬಾನ್, ಐಸಿಸ್ ಗಿಂತಲೂ ಅಸಹ್ಯವಾದ ಸಿದ್ದಾಂತವೇ ಕೊಲೆಗೆ ಕಾರಣ
►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು!
►►ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು’ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿಗೊಂದು ಬಹಿರಂಗ ಪತ್ರ
►►ಅಫ್ಘಾನಿಸ್ತಾನದ ಬೆಳವಣಿಗೆಗಳು ಸಾಬೀತುಪಡಿಸುತ್ತಿರುವುದು ಮೋದಿ ಸರ್ಕಾರದ ಸಿಎಎ ಕಾಯಿದೆಯ ದೂರದೃಷ್ಟಿಯನ್ನೋ ಅಥವಾ ಸಂಘೀಬಾನಿಗಳ ಧೂರ್ತತನವನ್ನೋ?
►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
►►ಜಿಎಸ್‌ಟಿ ಕಟ್ಟಬೇಡಿ’- ದೇಶದ ವರ್ತಕರಿಗೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕರೆ!
►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ
►►ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್!
►►ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ. ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು!
►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ