Advertisement

ಬ್ರಿಟೀಷರ ಗುಲಾಮಗಿರಿ ಮಾಡಿಕೊಂಡಿದ್ದವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಹೇಳಲು ಬರುವುದು ಬೇಡ: ಬಿ.ಕೆ ಹರಿಪ್ರಸಾದ್

Advertisement

ಇತ್ತೀಚೆಗೆ ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕತೊಡಗಿದ್ದಾರೆ. ಆದರೆ ಬಿಜೆಪಿಗರಿಗೆ ಕಾಂಗ್ರೆಸ್ ಗೆ ಸವಾಲು ಹಾಕುವ ಯಾವುದೇ ನೈತಿಕತೆ ಇಲ್ಲ ಮತ್ತು ಅಂತಹ ಧೈರ್ಯ ತೋರಿಸುವುದು ಕೂಡ ಬೇಕಾಗಿಲ್ಲ. ಏಕೆಂದರೆ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬ್ರಿಟೀಷರ ಗುಲಾಮಗಿರಿ ಮಾಡಿಕೊಂಡವರಿಂದ ಈ ನಾಡಿಗೆ ಅದೇ ಬ್ರಿಟೀಷರಿಂದ ಸ್ವಾತಂತ್ರ್ಯ ದೊರಕಿಸಿಕೊಟ್ಟ ಕಾಂಗ್ರೆಸ್ ಕಲಿಯುವಂತಹದ್ದು ಏನೇನೂ ಇಲ್ಲ. ನಾವು ಕಾಂಗ್ರೆಸಿಗರು ಬ್ರಿಟಿಷರಿಗೆ ಎಂದೆಂದೂ ಭಯಪಡದವರು ಮತ್ತು ಅವರನ್ನು ರಾತ್ರೋರಾತ್ರಿ ಈ ದೇಶದಿಂದ ಓಡಿಸಿದವರು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ವನ್ನು ನಿರಾಕರಿಸಿದ ಹಿನ್ನಲೆಯಲ್ಲಿ ಕೇರಳ ಮತ್ತು ಕರ್ನಾಟಕದಲ್ಲೆಡೆ ನಾರಾಯಣ ಗುರುಗಳ ಅನುಯಾಯಿಗಳಿಂದ ವಿಪರೀತ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರುಗಳ ಇತ್ತೀಚೆಗಿನ ಹೇಳಿಕೆಗಳ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಅವರು 'ಬಿಜೆಪಿಗರು ಪ್ರತಿಭಟನೆ ನಡೆಸುತ್ತಾರಾದರೆ ಅದಕ್ಕೆ ನೂರು ಪಟ್ಟು ಹೆಚ್ಚಿನ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಶಕ್ತಿ ಮತ್ತು ನೈತಿಕತೆ ಕಾಂಗ್ರೆಸ್ ಪಕ್ಷಕ್ಕಿದೆ' ಎಂದವರು ಗುಡುಗಿದ್ದಾರೆ. ಇವರದ್ದೆ ಪಕ್ಷದ ಕೇಂದ್ರ ಸರ್ಕಾರ ಗಣರಾಜ್ಯೋತ್ಸವ ಪೇರೇಡ್ ನಿಂದ ನಾರಾಯಣ ಗುರುಗಳ ಟ್ಯಾಬ್ಲೋವನ್ನು ಏಕೆ ನಿರಾಕರಿಸಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉತ್ತರಿಸಬೇಕು ಎಂದವರು ಆಗ್ರಹಿಸಿದ್ದಾರೆ. ಈ ಸಂಧರ್ಭದಲ್ಲಿ ಶಾಸಕ ಮಾಜಿ ಸಚಿವ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮುಖಂಡರುಗಳಾದ ಐವನ್ ಡಿಸೋಜಾ, ಮೋಯ್ದಿನ್ ಬಾವಾ, ಇಬ್ರಾಹಿಂ ಕೋಡಿಜಾಲ್, ಮಾಜಿ ಮೇಯರ್ ಶಶಿಧರ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:

Advertisement
Advertisement
Recent Posts
Advertisement