ಏನಿದು 'ಮೇಕೆದಾಟು ಯೋಜನೆ'? ಕಾಂಗ್ರೆಸ್ ಏಕೆ ಈ ಪಾದಯಾತ್ರೆ ಹಮ್ಮಿಗೊಂಡಿದೆ? ವಿವರಗಳಿಗಾಗಿ ವಿಡಿಯೋ ನೋಡಿ!
ಏನಿದು 'ಮೇಕೆದಾಟು ಯೋಜನೆ'? ಕಾಂಗ್ರೆಸ್ ಏಕೆ ಈ ಪಾದಯಾತ್ರೆ ಹಮ್ಮಿಗೊಂಡಿದೆ? ವಿವರಗಳಿಗಾಗಿ ವಿಡಿಯೋ ನೋಡಿ!
Advertisement
►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
'ಮೇಕೆದಾಟು ಯೋಜನೆ' ಯೋಜನೆಯ ಕುರಿತಾದ ವಿವರಗಳಿಗಾಗಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಕೃಷ್ಣ ಬೈರೆಗೌಡರ ಈ ವಿಡಿಯೋ ನೋಡಿ!
►►ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
ಜನವರಿ 9 ರಂದು ಬೆಳಗ್ಗೆ 9.30ಕ್ಕೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಿಂದ ಪಾದಯಾತ್ರೆ ಆರಂಭವಾಗಲಿದೆ, ಐದು ದಿನ ಗ್ರಾಮೀಣ ಭಾಗದಲ್ಲಿ ಹಾಗೂ ಐದು ದಿನ ನಗರ ಪ್ರದೇಶದಲ್ಲಿ ಪಾದಯಾತ್ರೆ ನಡೆಯಲಿದೆ. ಹಾಗೂ ಜನವರಿ 19ರಂದು ಫ್ರೀಡಂ ಪಾರ್ಕ್ (ಬೆಂಗಳೂರು)ನಲ್ಲಿ ಸಮಾರೋಪಗೊಳ್ಳಲಿದೆ. ಹೋರಾಟದ ಮುಂದಾಳತ್ವವನ್ನು ಕಾಂಗ್ರೆಸ್ ವಹಿಸಿದ್ದರೂ ಇದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಪಕ್ಷಾತೀತ ಹೋರಾಟ, ಎಲ್ಲ ವರ್ಗ, ಎಲ್ಲ ಸಮುದಾಯದವರು ಭಾಗವಹಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
ಕಾಂಗ್ರೆಸ್ ಹಮ್ಮಿಕೊಂಡಿರುವ ಈ ಪಾದಯಾತ್ರೆಯನ್ನು ವಿಫಲಗೊಳಿಸುವ ಸಂಚು ಹಣೆದಿರುವ ರಾಜ್ಯದ ಬಿಜೆಪಿ ಸರ್ಕಾರ ಪಾದಯಾತ್ರೆಯಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಭಾಗಗಳಿಂದ ಬರುವ ಜನರನ್ನು ತಡೆಯಲು ಜನವರಿ 8ಮತ್ತು 9ರಂದು ಕೊರೊನಾ ಹೆಸರಲ್ಲಿ ಕರ್ಫ್ಯೂ ಹೇರಿಕೆ ಮಾಡಿತ್ತು.
►►ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ
ಆದರೆ ಪಕ್ಷಾತೀತವಾಗಿ ನಡೆಯಲಿರುವ ಈ ಪಾದಯಾತ್ರೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭಾಗವಹಿಸುವ ನಿರೀಕ್ಷೆ ಇದೆ. ಮಾಜಿ ಮುಖ್ಯಮಂತ್ರಿ- ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ್ ಖಂಡ್ರೆ, ಕೆಪಿಸಿಸಿ ಐಟಿ ಸೆಲ್ ಅಧ್ಯಕ್ಷ ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೆಗೌಡ, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್ ಮುಂತಾದ ರಾಜ್ಯ ನಾಯಕರುಗಳು, ವಿಜೇತ ಪರಾಜಿತ ಲೋಕಸಭಾ ಅಭ್ಯರ್ಥಿಗಳು, ವಿಜೇತ ಪರಾಜಿತ ವಿಧಾನಸಭಾ ಅಭ್ಯರ್ಥಿಗಳು, ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು, ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರುಗಳು ಪದಾಧಿಕಾರಿಗಳು, ಎಸ್.ಸಿ., ಎಸ್.ಟಿ ಘಟಕಗಳ ಅಧ್ಯಕ್ಷರುಗಳು ಪದಾಧಿಕಾರಿಗಳು, ಕಾರ್ಮಿಕ ಘಟಕ, ವಕೀಲರ ಘಟಕ, ಕಾರ್ಮಿಕ ಘಟಕ, ಕಿಸಾನ್ ಘಟಕದ ಪದಾಧಿಕಾರಿಗಳು, ಇಂಟಕ್ ಘಟಕದ ಪದಾಧಿಕಾರಿಗಳು ಮುಂತಾದ ಎಲ್ಲಾ ಘಟಕಗಳ ಅಧ್ಯಕ್ಷರುಗಳು ಪದಾದಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
►►ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು: ಮೋದಿ ವಿರೋಧಿಗಳು ಮತ್ತು ಬೆಂಬಲಿಗರು ತಿಳಿದುಕೊಳ್ಳಲೇ ಬೇಕಾದ ನಗ್ನಸತ್ಯಗಳು!
ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: