ನಮ್ಮ ಸರ್ಕಾರ 'ನಾರಾಯಣ ಗುರು ಜಯಂತಿ'ಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು: ಸಿದ್ದರಾಮಯ್ಯ
ನಮ್ಮ ಸರ್ಕಾರ 'ನಾರಾಯಣ ಗುರು ಜಯಂತಿ'ಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು: ಸಿದ್ದರಾಮಯ್ಯ
Advertisement
ನಾರಾಯಣ ಗುರುಗಳು ನನ್ನ ಸೈದ್ಧಾಂತಿಕ ಗುರುಗಳು. ಆ ಗೌರವದ ಕಾರಣಕ್ಕಾಗಿಯೇ ನಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೆ. ಇದರಿಂದಾಗಿ ಗುರುಗಳ ಸಂದೇಶ ಮನೆಮನೆಗಳನ್ನು ಮುಟ್ಟುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
►►ಬುರ್ಖಾ, ಜನಿವಾರ, ಮೂಲಭೂತವಾದ, ಕೋಮುವಾದ ಮತ್ತು ಸಮಾನತಾವಾದ
ನಾನು ಮುಖ್ಯಮಂತ್ರಿಯಾಗಿದ್ದಾಗ 2014ರಲ್ಲಿ ಗಣರಾಜ್ಯೋತ್ಸವದ ಪರೇಡ್ ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳಿಸಿದ್ದು ನಿಜ. ಆ ಟಿಪ್ಪು ಸ್ತಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದು ಕೂಡಾ ನಿಜ. ಸುನೀಲ್ ಕುಮಾರ್ ಅವರಂತಹ ಟಿಪ್ಪು ವಿರೋಧಿಗಳು ಯಾಕೆ ಆಗ ಅದನ್ನು ವಿರೋಧಿಸಿರಲಿಲ್ಲ? ಎಂದವರು ಸುನಿಲ್ ಕುಮಾರ್ ಅವರ ಟಿಪ್ಪು ಕುರಿತ ಹೇಳಿಕೆ ತಿರುಗೇಟು ನೀಡಿದ್ದಾರೆ.
►►ನೆಹರೂ ಮೃತಪಟ್ಟು 57 ವರ್ಷಗಳ ನಂತರವೂ ಬಿಜೆಪಿಗರು ಅವರನ್ನು ವಿರೋಧಿಸಲು ಕಾರಣವೇನು ಗೊತ್ತೇ?
ಟಿಪ್ಪು ಸುಲ್ತಾನ್ ಅವರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥವನ್ನೇ ರಚಿಸಿದ್ದು ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ. ಅದನ್ನು ಪ್ರಕಟಿಸಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಬೇರೆಯವರ ಮೇಲೆ ಆರೋಪಿಸಲು ದೊಡ್ಡಬಾಯಿ ಬಿಡುವ ಸುನೀಲ್ ಕುಮಾರ್ ಆಗ ಬಾಯಿ ಮುಚ್ಚಿಟ್ಟುಕೊಂಡಿದ್ದು ಯಾಕೆ?
ಬಿಜೆಪಿ ಸರ್ಕಾರವೇ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ ಕುರಿತ ಗ್ರಂಥ ಈಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗ್ರಂಥಾಲಯದಲ್ಲಿದೆ. ಈ ಗ್ರಂಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈಗ ಸಚಿವರಾಗಿರುವ ಸುನೀಲ್ ಕುಮಾರ್ ಗಮನಕ್ಕೆ ಇನ್ನೂ ಬಂದಿಲ್ಲವೇ? ಯಾಕೆ ಈ ಆತ್ಮವಂಚನೆ? 2017ರಲ್ಲಿ ಕರ್ನಾಟಕ ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಅವರನ್ನು ಸ್ವಾತಂತ್ರ್ಯಯೋಧ ಎಂದು ಹಾಡಿ ಹೊಗಳಿದ್ದಾಗ ಸುನೀಲ್ ಕುಮಾರ್ ಮತ್ತು ಬಿಜೆಪಿ ನಾಯಕರು ಎಲ್ಲಿ ಅಡಗಿಕೊಂಡಿದ್ದರು? ಎಂದವರು ಪ್ರಶ್ನಿಸಿದ್ದಾರೆ.
►►ನೋಟು ಬ್ಯಾನ್ ನಿಂದ ಮೂರು ಲಕ್ಷ ಕಂಪೆನಿಗಳು ಬಂದ್ ಆದವು’ ಪ್ರಧಾನಿ ಮೋದಿಯವರು ಕೈತಟ್ಟಿ, ಹೆಮ್ಮೆಯಿಂದ ಹೇಳಿದ ಬಾಷಣದ ವಿಡಿಯೋ!
ನಾರಾಯಣ ಗುರು ಸ್ತಬ್ಧಚಿತ್ರದ ವಿವಾದ ಹುಟ್ಟಿಕೊಂಡ ದಿನದಿಂದ ನರೇಂದ್ರ ಮೋದಿ ಅವರ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸುಳ್ಳುಗಳ ಮೂಟೆ ಉರುಳಿಸುತ್ತಿರುವ ಸಚಿವರುಗಳಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಪ್ರಹ್ಲಾದ ಜೋಷಿಯಂತಹವರು ನಾರಾಯಣ ಗುರುಗಳನ್ನು ತಾವು ಒಪ್ಪುವುದಿಲ್ಲ ಎಂಬ ಒಂದು ಸತ್ಯವನ್ನು ಯಾಕೆ ಹೇಳಬಾರದು. ಟಿಪ್ಪು ಸುಲ್ತಾನ್ ಮಾತ್ರವೇ ಅಲ್ಲ ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶಪ್ರಾಯರು. ಮುಖ್ಯಮಂತ್ರಿಯಾಗಿ ನಾನು ಈ ಮಹಾಪುರುಷರ ಚಿಂತನೆಗೆ ಸರ್ಕಾರದ ಯೋಜನೆಗಳ ರೂಪಕೊಟ್ಟು ಅನುಷ್ಠಾನಗೊಳಿಸಿದ್ದೆ. ನಾನು ಬಿಜೆಪಿ ನಾಯಕರಂತೆ ಆತ್ಮವಂಚಕನಲ್ಲ ಎಂದವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
►►ಭಾರತ, ತಾಲೀಬಾನ್ ಆಗುವ ಹಂತದಲ್ಲಿದೆಯೇ? ಭಾರತದೊಳಗಿನ ತಾಲೀಬಾನಿಗರು ಯಾರು? ಅಗತ್ಯವಾಗಿ ಓದಿ.
ಸುದ್ದಿಯ ಹಿನ್ನಲೆ: ರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಲು ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರುಗಳ ಟ್ಯಾಬ್ಲೋವನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅದಕ್ಕೆ ಅವಕಾಶ ಕೊಡದೆ ವಾಪಾಸು ಕಳುಹಿಸಿದ್ದ ಹಿನ್ನಲೆಯಲ್ಲಿ ಕೇರಳ ಮತ್ತು ಕರ್ನಾಟಕದಲ್ಲೆಡೆ ಬಾರೀ ಜನಾಕ್ರೋಶ ವ್ಯಕ್ತವಾಗಿತ್ತು. ಆ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋದಿ ಸರ್ಕಾರದ ನಿರ್ಧಾರವನ್ನು ಕಠಿಣವಾಗಿ ಖಂಡಿಸಿದ್ದರು. ಆಗ ಸಚಿವ ಸುನಿಲ್ ಕುಮಾರ್ ರವರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಟಿಪ್ಪು ಸುಲ್ತಾನ್ ರ ಜಯಂತಿ ಆಚರಿಸಿದ್ದರು. ಅದೇಕೆ ಅವರಿಗೆ ಆಗ ನಾರಾಯಣ ಗುರುಗಳ ನೆನಪಾಗಲಿಲ್ಲ ಎಂದು ಪ್ರಶ್ನಿಸಿದ್ದರು. ಇದೀಗ ಸಿದ್ದರಾಮಯ್ಯನವರು ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ.
►►ವಿದ್ಯುತ್ ತಿದ್ದುಪಡಿ ಮಸೂದೆ- 2021; ಕಾರ್ಪೊರೇಟ್ ಲಾಭ ಪ್ರಖರ – ರೈತ, ಕಾರ್ಮಿಕ ಬದುಕು ಬರ್ಬರ!
►► ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ: