Advertisement

ದಲಿತರ ಪರ ಪ್ರತಿಭಟನಾಕಾರರ ಮೇಲೆ ಕೇಸು ದಾಖಲು ಖಂಡನೀಯ: ಉಡುಪಿ ಜಿಲ್ಲಾ ಕಾಂಗ್ರೆಸ್

Advertisement

ಕೋಟತಟ್ಟು ಗ್ರಾ.ಪಂ.ನ ಚಿಟ್ಟಿಬೆಟ್ಟುವಿನಲ್ಲಿ ನಡೆದ ಕೊರಗ ಸಮುದಾಯದವರ ಮನೆಯ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಬಳಸಿದರು ಎಂಬ ನೆವದಲ್ಲಿ ನಡೆದ ಪೋಲಿಸ್ ದೌರ್ಜನ್ಯ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆ ಹಾಗೂ ನೊಂದ ಕೊರಗರಿಗೆ ನ್ಯಾಯ ಒದಗಿಸಬೇಕೆಂಬ ಆಗ್ರಹದೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕೋವಿಡ್ ನಿಯಮಾವಳಿಯನ್ನು ಪಾಲಿಸಿಕೊಂಡು ತಾ. ೧೨.೧.೨೦೨೨ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು. ಆದರೆ ಪ್ರತಿಭಟನಾಕಾರರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಪ್ರಸ್ತುತ ಜಿಲ್ಲೆಯಲ್ಲಿ ಬಿಜೆಪಿಯು ಪ್ರತಿಭಟನೆ, ಸಾವರ್ಕರ್ ಕುರಿತಾದ ಸಾರ್ವಜನಿಕ ಸಭೆ, ಮೆರವಣಿಗೆ ಹಾಗೂ ಇನ್ನಿತರ ಸಭೆ ಸಮಾರಂಭಗಳನ್ನು ಸಂಘಟಿಸುತ್ತಿದೆ. ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಬಿಜೆಪಿಯು ಸಂಘಟಿಸುವ ಈ ಕಾರ್ಯಕ್ರಮಗಳನ್ನು ನೋಡಿಯೂ ನೋಡದಂತೆ ನಟಿಸುತ್ತಿರುವುದು ಜಿಲ್ಲಾಡಳಿತದ ದ್ವಂದ್ವ ನಿಲುವಾಗಿದೆ. ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಿಜೆಪಿ ಪಕ್ಷದ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳದೆ, ಕೋಟದಸಂತ್ರಸ್ತ ಕೊರಗರಿಗೆ ನೈತಿಕ ಸ್ಥೈರ್ಯ ತುಂಬಲು ಕಾಂಗ್ರೆಸ್ ಕೋವಿಡ್ ನಿಯಮಾವಳಿಗಳನ್ನು ಅಳವಡಿಸಿಕೊಂಡು ಸೀಮಿತ ಕಾರ್ಯಕರ್ತರನ್ನೊಳಗೊಂಡ ಮನವಿ ಸಮರ್ಪಣಾ ಮೆರವಣಿಗೆಯನ್ನೇ ನೆಪವಾಗಿಟ್ಟುಕೊಂಡು ಜಿಲ್ಲಾಡಳಿತವು ಪ್ರಕರಣವನ್ನು ದಾಖಲಿಸಿರುವುದು ಖಂಡನೀಯ. ಜಿಲ್ಲಾದ್ಯಂತ ಬಿಜೆಪಿ ಮತ್ತದರ ಸಹ ಸಂಘಟನೆಗಳ, ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ, ಮೆರವಣಿಗೆ, ಕ್ರೀಡಾಕೂಟ, ಅದ್ಧೂರಿ ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳು ಎಡೆಯಿಲ್ಲದೆ ನಡೆಯುತ್ತಿದೆ. ಜಿಲ್ಲಾಡಳಿತ ಇದರ ಬಗ್ಗೆ ಮೌನವಹಿಸಿ, ಕೊರಗ ಸಂತ್ರಸ್ತರಿಗೆ ನ್ಯಾಯ ಒದಗೊಸುವಂತೆ ಕಾಂಗ್ರೆಸ್ ಪಕ್ಷ ಬೇಡಿಕೆ ಮಂಡಿಸಿದಾಗ ಪ್ರಕರಣ ದಾಖಲಿಸಿರುವುದು ಸರಕಾರದ ದಲಿತ ವಿರೋಧಿ ನೀತಿಯನ್ನು ಬಿಂಬಿಸುತ್ತದೆ. ಇದೆಲ್ಲಾ ಘಟನೆಗಳನ್ನು ಅವಲೋಕಿಸಿದಾಗ ಆಡಳಿತ ಬಿಜೆಪಿ ಪಕ್ಷವು, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳನ್ನು ದಮನಿಸುವ ಹುನ್ನಾರವನ್ನು ಹೊಂದಿದೆಯೋ ಎನ್ನುವಂತೆ ಭಾಸವಾಗುತ್ತಿದೆ. ಆಡಳಿತದ ತಾರತಮ್ಯವನ್ನು ಮುಂದಿನ ದಿನಗಳಲ್ಲಿ ಸರಿ ಮಾಡದಿದ್ದರೆ ಜಿಲ್ಲಾ ಕಾಂಗ್ರೆಸ್ ಇದರ ವಿರುದ್ಧ ಜನಾಭಿಪ್ರಾಯ ಕ್ರೋಡಿಕರಿಸುವುದಕ್ಕಾಗಿ ಬೃಹತ್ ಮಟ್ಟದ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದು ಎಂದವರು ತಿಳಿಸಿದ್ದಾರೆ. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:

Advertisement
Advertisement
Recent Posts
Advertisement