Advertisement

ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಉಡುಪಿ ಜಿಲ್ಲಾ ಕಾಂಗ್ರೆಸ್ ಆಕ್ರೋಶ

Advertisement

ಅನ್‌ಬ್ಲೆಂಡೆಡ್ ತೈಲದ ಮೇಲೆ ಲೀಟರಿಗೆ 2 ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಲಿದೆ. ದುಡಿಯುವ ಮತ್ತು ಮಧ್ಯಮ ವರ್ಗದ ಪರವಾಗಿ ಯಾವುದೇ ಯೋಜನೆ ರೂಪಿಸಿಲ್ಲ. ಆದಾಯ ತೆರಿಗೆಯಲ್ಲಿ ವಿನಾಯಿತಿ ಇಲ್ಲದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿರುವುದು ಮಧ್ಯಮ ವರ್ಗವನ್ನು ನಿರಾಶೆಗೊಳಿಸಿದೆ. ಆಹಾರ ಭದ್ರತೆ ಮೇಲಿನ ಅನುದಾನ ಇಳಿಕೆ ಮಾಡಲಾಗಿದೆ. ಒಂದೆಡೆ ಡಿಜಿಟಲ್‌ಗೆ ಉತ್ತೇಜನದ ಬಾಷಣ ಬಿಗಿಯುತ್ತಾ ಇನ್ನೊಂದೆಡೆ ಡಿಜಿಟಲ್ ಸೇವೆಗಳಿಗೆ ತೆರಿಗೆ ಹೇರಿಕೆ ಮೋದಿ ಸರಕಾರದ ಗೊಂದಲಕ್ಕೆ ಸಾಕ್ಷಿಯಾಗಿದೆ. ಸರಕಾರಿ ಸಂಸ್ಥೆಗಳ ಬಂಡವಾಳ ಹಿಂತೆಗೆತ ಹಾಗೂ ಹಲವಾರು ಯೋಜನೆಗಳಿಗೆ ಅನುದಾನ ಕಡಿತ ಮಾಡಲಾಗಿದೆ. ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದೆ ದಕ್ಷಿಣ ಭಾರತವನ್ನೇ ಕಡೆಗಣಿಸಲಾಗಿದೆ. ಬಜೆಟ್ ಹಣವನ್ನು ಹಂಚಿಕೆ ಮಾಡುವುದನ್ನು ಬಿಟ್ಟರೆ ಯಾವುದೇ ಉದ್ಯೋಗ ಸೃಷ್ಟಿಗೆ ಹೊಸ ಯೋಜನೆಗಳನ್ನು ರೂಪಿಸಿಲ್ಲ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಜನೋಪಯೋಗಿ ವಸ್ತುಗಳ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಜನರ ಮೇಲೆ ಹೆಚ್ಚಿನ ಹೊರೆ ಹೊರೆಸಿದಂತಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮತ್ತು ಕಾಂಗ್ರೆಸ್ ಜಿಲ್ಲಾ ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು ರವರು ಜಂಟಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ಓದುಗರ ನಿರಂತರ ನೆರವು ಅಗತ್ಯ. 'ಕನ್ನಡ ಮೀಡಿಯಾ ಡಾಟ್ ಕಾಂ' ಗೆ ಆರ್ಥಿಕ ನೆರವು ನೀಡಲು ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ:

Advertisement
Advertisement
Recent Posts
Advertisement