ಕೆಪಿಸಿಸಿ ಕಚೇರಿ: ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ.
ಕೆಪಿಸಿಸಿ ಕಚೇರಿ: ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ.
Advertisement
ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ, ಯಶಸ್ವಿ ನಿರ್ದೇಶಕ ಎಸ್.ನಾರಾಯಣ್ ಮತ್ತು ಪಿ.ಯು ಅಸೋಸಿಯೇಶನ್ ಮಾಜಿ ಅಧ್ಯಕ್ಷರಾದ ತಿಮ್ಮಯ್ಯ ಪುರ್ಲೆ ರವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು."ಕಾಂಗ್ರೆಸ್‌ನ ವಿಚಾರಧಾರೆ ಮತ್ತು ತತ್ವಾದರ್ಶಗಳಿಂದ ಪ್ರೇರಿತರಾದ ನಿರ್ದೇಶಕ ಎಸ್ ನಾರಾಯಣ್ ಮತ್ತು ತಿಮ್ಮಯ್ಯ ಪುರ್ಲೆಯವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷವು ಬಲಗೊಂಡಿದೆ. ನಾಡಿನ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಮತ್ತೆ ಆಡಳಿತಕ್ಕೆ ಬರಬೇಕೆಂಬುದು ಎಲ್ಲರ ಆಶಯವಾಗಿದೆ. 2023ರಲ್ಲಿ ನಡೆಯಲಿರುವ ಚುನಾವಣೆಗೆ 'ಕೈ' ಬಲಗೊಳ್ಳುತ್ತಿದ್ದು, ಹೊಸಹರಿವುಗಳೊಂದಿಗೆ ಪಕ್ಷವು ಮತ್ತಷ್ಟು ಬಲಗೊಳ್ಳುತ್ತಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನದ ರಾಜ್ಯಾಧ್ಯಕ್ಷ ರಘುನಂದನ್ ರಾಮಣ್ಣ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.