Homepageರಾಜ್ಯಕೊಲೆಯಾದ ರೌಡಿಶೀಟರ್ ಗೆ 25ಲಕ್ಷ ಪರಿಹಾರ ನೀಡುವ ಬಿಜೆಪಿ ಸರ್ಕಾರ ಕರ್ತವ್ಯದ ವೇಳೆ ಮೃತಪಟ್ಟ ಕೊಡಗಿನ ಯೋಧನ ಕುಟುಂಬಕ್ಕೆ ಏಕೆ ಪರಿಹಾರ ನೀಡಿಲ್ಲ?: ಪ್ರಿಯಾಂಕ್ ಖರ್ಗೆ ಆಕ್ರೋಶ ಕೊಲೆಯಾದ ರೌಡಿಶೀಟರ್ ಗೆ 25ಲಕ್ಷ ಪರಿಹಾರ ನೀಡುವ ಬಿಜೆಪಿ ಸರ್ಕಾರ ಕರ್ತವ್ಯದ ವೇಳೆ ಮೃತಪಟ್ಟ ಕೊಡಗಿನ ಯೋಧನ ಕುಟುಂಬಕ್ಕೆ ಏಕೆ ಪರಿಹಾರ ನೀಡಿಲ್ಲ?: ಪ್ರಿಯಾಂಕ್ ಖರ್ಗೆ ಆಕ್ರೋಶ Advertisement ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರೆಲ್ಲರಿಗೂ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ? ಎಂದು ಶಾಸಕ, ಮಾಜಿ ಸಚಿವ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯಾಧ್ಯಕ್ಷ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು ಎಂದವರು ಹೇಳಿದ್ದಾರೆ.ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ.ಪೊಲೀಸರ ತನಿಖಾ ವರದಿಯೂ ಬಂದಿಲ್ಲ.ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದವರು ಕೇಳಿದ್ದಾರೆ.ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕೆ ಕೊಡಲಿಲ್ಲ, ಬಜರಂಗದಳದವರಿಗೆ ಹತ್ಯೆಯಾದ ಸಮೀರ್ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಮೃತರಾದ ಕೊಡಗಿನ ಯೋಧ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಕನಿಷ್ಠ ಸಾಂತ್ವನವೂ ಹೇಳಲಿಲ್ಲವೇಕೆ? ಎಂದವರು ಆಕ್ರೋಶ ವ್ಯಕ್ತಪಡಿಸಿದರು.ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ 'ವಿವೇಚನೆ'ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದವರು ಪ್ರಶ್ನಿಸಿದ್ದಾರೆ.ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಎಂದು ಹೇಳಿದರು.ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ?ಸಿಎಂ ಉತ್ತರಿಸಬೇಕು ಎಂದವರು ಆಗ್ರಹಿಸಿದ್ದಾರೆ. Show Full Article Advertisement Next Read: ಹಿಂದೂ ರಾಷ್ಟ್ರದ ಹೆಸರಿನಲ್ಲಿ ಕಾರ್ಪೊರೇಟ್ -ಬ್ರಾಹ್ಮಣ್ಯದ ಆಳ್ವಿಕೆಯನ್ನು ನೆಲೆಗೊಳಿಸಲೆಂದೇ ಅಧಿಕಾರಕ್ಕೆ ಬಂದಿರುವ ಆರೆಸ್ಸೆಸ್-ಬಿಜೆಪಿಗಳು ಚುನಾವಣೆಯಲ್ಲಿ ಗೆಲ್ಲಲು ಇವಿಎಂ ಕಾರಣವೇ? » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ