Homepageರಾಜ್ಯಕೊಲೆಯಾದ ರೌಡಿಶೀಟರ್ ಗೆ 25ಲಕ್ಷ ಪರಿಹಾರ ನೀಡುವ ಬಿಜೆಪಿ ಸರ್ಕಾರ ಕರ್ತವ್ಯದ ವೇಳೆ ಮೃತಪಟ್ಟ ಕೊಡಗಿನ ಯೋಧನ ಕುಟುಂಬಕ್ಕೆ ಏಕೆ ಪರಿಹಾರ ನೀಡಿಲ್ಲ?: ಪ್ರಿಯಾಂಕ್ ಖರ್ಗೆ ಆಕ್ರೋಶ ಕೊಲೆಯಾದ ರೌಡಿಶೀಟರ್ ಗೆ 25ಲಕ್ಷ ಪರಿಹಾರ ನೀಡುವ ಬಿಜೆಪಿ ಸರ್ಕಾರ ಕರ್ತವ್ಯದ ವೇಳೆ ಮೃತಪಟ್ಟ ಕೊಡಗಿನ ಯೋಧನ ಕುಟುಂಬಕ್ಕೆ ಏಕೆ ಪರಿಹಾರ ನೀಡಿಲ್ಲ?: ಪ್ರಿಯಾಂಕ್ ಖರ್ಗೆ ಆಕ್ರೋಶ Advertisement ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರೆಲ್ಲರಿಗೂ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ? ಎಂದು ಶಾಸಕ, ಮಾಜಿ ಸಚಿವ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯಾಧ್ಯಕ್ಷ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು ಎಂದವರು ಹೇಳಿದ್ದಾರೆ.ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ.ಪೊಲೀಸರ ತನಿಖಾ ವರದಿಯೂ ಬಂದಿಲ್ಲ.ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದವರು ಕೇಳಿದ್ದಾರೆ.ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕೆ ಕೊಡಲಿಲ್ಲ, ಬಜರಂಗದಳದವರಿಗೆ ಹತ್ಯೆಯಾದ ಸಮೀರ್ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಮೃತರಾದ ಕೊಡಗಿನ ಯೋಧ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಕನಿಷ್ಠ ಸಾಂತ್ವನವೂ ಹೇಳಲಿಲ್ಲವೇಕೆ? ಎಂದವರು ಆಕ್ರೋಶ ವ್ಯಕ್ತಪಡಿಸಿದರು.ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ 'ವಿವೇಚನೆ'ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದವರು ಪ್ರಶ್ನಿಸಿದ್ದಾರೆ.ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಎಂದು ಹೇಳಿದರು.ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ?ಸಿಎಂ ಉತ್ತರಿಸಬೇಕು ಎಂದವರು ಆಗ್ರಹಿಸಿದ್ದಾರೆ. Show Full Article Advertisement Next Read: ಹಿಂದೂ ರಾಷ್ಟ್ರದ ಹೆಸರಿನಲ್ಲಿ ಕಾರ್ಪೊರೇಟ್ -ಬ್ರಾಹ್ಮಣ್ಯದ ಆಳ್ವಿಕೆಯನ್ನು ನೆಲೆಗೊಳಿಸಲೆಂದೇ ಅಧಿಕಾರಕ್ಕೆ ಬಂದಿರುವ ಆರೆಸ್ಸೆಸ್-ಬಿಜೆಪಿಗಳು ಚುನಾವಣೆಯಲ್ಲಿ ಗೆಲ್ಲಲು ಇವಿಎಂ ಕಾರಣವೇ? » Advertisement Recent Posts ಜೆ.ಪಿ ಹೆಗ್ಡೆ ಸಂಸದರಾಗಲಿ. ಕೋಟ ಪರಿಷತ್ ವಿಪಕ್ಷ ನಾಯಕರಾಗಿ ಮುಂದುವರಿಯಲಿ! "ದೇಶದ ಸಂಪತ್ತು ಸಮಾನ ಹಂಚಿಕೆ"ಯ ರಾಹುಲ್ ಗಾಂಧಿ ಯೋಜನೆಗಳು ತಪ್ಪೇ? ಜಯಪ್ರಕಾಶ ಹೆಗ್ಡೆ ಮತಯಾಚನೆ: ಫೋಟೋ ಸುದ್ದಿ ಈ ಬಾರಿಯ ಜೋಡುಕರೆ ಕಂಬಳದಲ್ಲಿ ಐಎಂಎ (ರಿ) ಮಂಗಳೂರು ನೇತೃತ್ವದ ತಂಡ! ಡಾ. ಅಂಬೇಡ್ಕರ್ ಜಯಂತಿ ದಿನ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಚಾರ ಅಭಿಯಾನ! ಕುಚ್ಚಲಕ್ಕಿ ನೀಡುವ ಕುರಿತು ಸುಳ್ಳು ಹೇಳಿದ್ದ ಕೋಟ v/s ನುಡಿದಂತೆ ನಡೆವ ಜೆ.ಪಿ ಹೆಗ್ಡೆ ಜಯಪ್ರಕಾಶ ಹೆಗ್ಡೆಯವರೇ ಸಂಸದರಾಗಬೇಕು! ಏಕೆಂದರೆ... ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ. ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ! ಕಾಲಜ್ಞಾನ ಭವಿಷ್ಯದ ಪ್ರಕಾರ ಪ್ರಿಯಾಂಕಾ ಗಾಂಧಿ ಪ್ರಧಾನಿ: ನೊಣವಿನಕೆರೆ ಗುರೂಜಿ! ಚುನಾವಣಾ ಬಾಂಡ್ ನಿಷೇಧ- ಸುಪ್ರಿಂ ಕೋರ್ಟ್ ತೀರ್ಪು ಶ್ಲಾಘನೀಯ: ಸಿದ್ದರಾಮಯ್ಯ ಮಂಗಳೂರು: ಸೈಂಟ್ ಜೆರೋಜಾ ಶಾಲೆಯಲ್ಲಿ ನಿಜಕ್ಕೂ ನಡೆದದ್ದು ಏನು? ಕಾಂಗ್ರೆಸ್ ಪುನಶ್ಚೇತನ ಯಾವಾಗ? ಉತ್ತರದ ವೈಫಲ್ಯಕ್ಕೆ ದಕ್ಷಿಣಕ್ಕೆ ಶಿಕ್ಷೆ? - ಮಟ್ಟು "ಇದು ವಿನಾಶಕಾರಿ ಬಜೆಟ್" ಸಿದ್ದರಾಮಯ್ಯ ವಿಶ್ಲೇಷಣೆ