Homepageರಾಜ್ಯಪುನಿತ್ ಕೊನೆಯ ಚಿತ್ರ 'ಜೇಮ್ಸ್' ಪ್ರದರ್ಶನ ನಿಲ್ಲಿಸಲು ಬಿಜೆಪಿಗರು ಯತ್ನಿಸುತ್ತಿರುವುದು ಖಂಡನೀಯ: ಸಿದ್ದರಾಮಯ್ಯ ಕಿಡಿ! ಪುನಿತ್ ಕೊನೆಯ ಚಿತ್ರ 'ಜೇಮ್ಸ್' ಪ್ರದರ್ಶನ ನಿಲ್ಲಿಸಲು ಬಿಜೆಪಿಗರು ಯತ್ನಿಸುತ್ತಿರುವುದು ಖಂಡನೀಯ: ಸಿದ್ದರಾಮಯ್ಯ ಕಿಡಿ! Advertisement ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ 'ಕಾಶ್ಮೀರಿ ಫೈಲ್ಸ್, ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜೇಮ್ಸ್ ಚಿತ್ರದ ನಿರ್ಮಾಪಕರು ನನ್ನನ್ನು ಭೇಟಿಯಾಗಿ ತಿಳಿಸಿದ ವಿಷಯ ಆಘಾತಕಾರಿಯಾದುದು. ಅವರು ತಿಂಗಳುಗಳ ಹಿಂದೆಯೇ ಚಿತ್ರ ಪ್ರದರ್ಶನಕ್ಕೆ ಚಿತ್ರಮಂದಿರಗಳನ್ನು ಬುಕ್ ಮಾಡಿ ಮುಂಗಡ ಹಣವನ್ನೂ ಪಾವತಿಸಿದ್ದಾರೆ. ಚಿತ್ರ ಹೌಸ್ ಪುಲ್ ಆಗಿ ಓಡುತ್ತಿದ್ದರೂ ಪ್ರದರ್ಶನ ನಿಲ್ಲಿಸುವಂತೆ ಬಲವಂತ ಮಾಡುತ್ತಿರುವುದು ಅನ್ಯಾಯ ಎಂದವರು ಖೇದ ವ್ಯಕ್ತಪಡಿಸಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಮಧ್ಯಪ್ರವೇಶಿಸಿ ಜೇಮ್ಸ್ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡುತ್ತಿರುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಲು ನಡೆಯುತ್ತಿರುವ ಹುನ್ನಾರದಲ್ಲಿ ರಾಜ್ಯ ಸರ್ಕಾರವೂ ಷಾಮೀಲಾಗಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದವರು ಹೇಳಿದ್ದಾರೆ.ಪುನೀತ್ ರಾಜ್ ಕುಮಾರ್ ಅಗಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಬಿಜೆಪಿ ಶಾಸಕರು ಮತ್ತು ನಾಯಕರು ಕಣ್ಣೀರು ಸುರಿಸಿದ್ದಾರೆ, ಅಪಾರ ಶೋಕ ವ್ಯಕ್ತಪಡಿಸಿದ್ದಾರೆ. ಆ ಎಲ್ಲ ಭಾವನೆಗಳು ಪ್ರಾಮಾಣಿಕವಾದುದೆಂದು ನಾನು ನಂಬಿದ್ದೇನೆ. ಅದನ್ನು ಸಾಬೀತುಪಡಿಸುವ ಕಾಲ ಈಗ ಬಂದಿದೆ. ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವುದು ಕೇವಲ ಪುನೀತ್ ರಾಜ್ ಕುಮಾರ್ ಅವರಿಗೆ ಮಾಡುತ್ತಿರುವ ದ್ರೋಹ ಮಾತ್ರವಲ್ಲ ಸಮಸ್ತ ಕನ್ನಡಿಗರಿಗೆ ಮಾಡುತ್ತಿರುವ ಅವಮಾನವೂ ಹೌದು. ಈ ಅನ್ಯಾಯವನ್ನು ಖಂಡಿಸಿ ಕನ್ನಡಿಗರೆಲ್ಲರೂ ಬೀದಿಗೆ ಇಳಿಯುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡರೆ ಒಳಿತು ಎಂದವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಪುನೀತ್ ರಾಜ್ ಕುಮಾರ್ ಇಡೀ ವಿಶ್ವ ಕೊಂಡಾಡುತ್ತಿರುವ ಕನ್ನಡದ ಹೆಮ್ಮೆಯ ನಟ. ನಟನೆಯಿಂದ ಮಾತ್ರವಲ್ಲ ಸದ್ದಿಲ್ಲದೆ ಮಾಡಿದ ಸಮಾಜಮುಖಿ ಕೆಲಸಗಳಿಂದಲೂ ಜನಮನ ಗೆದ್ದಿರುವ ಅಪರೂಪದ ವ್ಯಕ್ತಿ. ಇವರ ಕೊನೆಯ ಚಿತ್ರವನ್ನು ವೀಕ್ಷಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲು ಜನ ಸಿದ್ಧವಾಗಿದ್ದಾರೆ ಎಂದು ಹೇಳಿದರು.ಕಾಶ್ಮೀರಿ ಫೈಲ್ಸ್ ಇರಲಿ, ಇನ್ನೊಂದಿರಲಿ. ಒಂದು ಚಿತ್ರವನ್ನು ಬಲವಂತದಿಂದ ಪ್ರದರ್ಶನ ಮಾಡಿ ಜನ ನೋಡುವಂತೆ ಒತ್ತಡ ಹೇರುವುದು ಸರಿ ಅಲ್ಲ. ಗಾಂಧೀಜಿ ಬಗ್ಗೆಯೂ ಚಿತ್ರ ಬಂದಿದೆ. ಇತ್ತೀಚೆಗೆ ಜೈಭೀಮ್ ಎಂಬ ಚಿತ್ರವೂ ಬಂದಿದೆ. ಅವುಗಳನ್ನು ನೋಡಬೇಕೆಂದು ಯಾರಾದರೂ ಬಲವಂತ ಮಾಡಿದ್ದಾರಾ ಎಂದವರು ಪ್ರಶ್ನಿಸಿದ್ದಾರೆಪುನಿತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಕನ್ನಡಿಗರೆಲ್ಲರೂ ನೋಡಲು ಪ್ರೊತ್ಸಾಹ ನೀಡಬೇಕಾಗಿತ್ತು. ಕಾಶ್ಮೀರಿ ಫೈಲ್ಸ್ ಎಂಬ ಹಿಂದಿ ಸಿನೆಮಾಕ್ಕೆ ತೆರಿಗೆ ವಿನಾಯಿತಿ ನೀಡುವಾಗ ಕನ್ನಡಿಗನೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳಿಗೆ ಕನ್ನಡದ ಜೇಮ್ಸ್ ನೆನಪಾಗಲಿಲ್ಲವೇ? ತೆರಿಗೆ ವಿನಾಯಿತಿಗೆ ಈಗಲೂ ಕಾಲ ಮಿಂಚಿಲ್ಲ ಎಂದವರು ಹೇಳಿದ್ದಾರೆ. Show Full Article Advertisement Next Read: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರುತ್ತಿರುವ ಸ್ವಯಂಘೋಷಿತ ಹಿಂದೂ ಸಂಘಟನೆಗಳ ಮೇಲೆ ಕ್ರಮಕೈಗೊಳ್ಳಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ