ಯುಕ್ರೇನ್‌ನಲ್ಲಿ ರಷ್ಯಾ ಸೇನೆಯ ದಾಳಿಗೆ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ. ಕುಟುಂಬಕ್ಕೆ ಆಧಾರವಾಗಿ ಬಾಳಿ ತಮ್ಮನ್ನು ಸಲಹಬೇಕಾಗಿದ್ದ ಮಗನ ಸಾವಿನಿಂದ ನೊಂದ ಕುಟುಂಬಕ್ಕೆ ನನ್ನ ಸಂತಾಪಗಳು. ಅವರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಯುಕ್ರೇನ್‌ನಲ್ಲಿ ನವೀನ್ ಸಾವಿಗೆ ಯುದ್ದದಾಹಿ ರಷ್ಯಾ ಸೇನೆ ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ಸರ್ಕಾರವೂ ಅಷ್ಟೇ ಹೊಣೆ ಎಂದವರು ಹೇಳಿದರು. ಯುಕ್ರೇನ್ ಯುದ್ದಕ್ಕೆ ಅಮಾಯಕ ನಾಗರಿಕರು ಬಲಿಯಾಗುತ್ತಿರುವುದು ದುರದೃಷ್ಟಕರ. ಪ್ರಧಾನಿಗಳು ಮತ್ತು ವಿದೇಶಾಂಗ ಇಲಾಖೆ ಅಂತರರಾಷ್ಟ್ರೀಯ ಸಂಬಂಧಗಳನ್ನು ಬಳಸಿಕೊಂಡು ಯುದ್ಧದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ಉಕ್ರೇನ್: ಮೋದಿ ಸರ್ಕಾರ ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ ಕಾರಣ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ಬಲಿ: ಸಿದ್ದರಾಮಯ್ಯ ಆರೋಪ
Advertisement
Advertisement
Recent Posts