ಅನ್ನಕ್ಕೆ ಮಣ್ಣು ಹಾಕುವುದು ಯಾವ ಧರ್ಮ? ಬದುಕಿಗೆ ಬೆಂಕಿ ಇಡುವುದು ಯಾವ ಧರ್ಮ? ಮನುಷ್ಯತ್ವಕ್ಕೆ ಸಮಾಧಿ ಕಟ್ಟುವುದು ಯಾವ ಧರ್ಮ? ಮಾನವೀಯತೆಯ ಸಾಕಾರಮೂರ್ತಿ ಶ್ರೀರಾಮಚಂದ್ರನಿಂದ ಇವರು ಕಲಿತದ್ದು ಯಾವ ಧರ್ಮ? ಸೇವೆಯನ್ನೇ ಧರ್ಮವೆಂದು ನಂಬಿದ ಶ್ರೀ ಆಂಜನೇಯನಿಂದ ಇವರು ಕಲಿತ ಆದರ್ಶ ಧರ್ಮ ಇದೇನಾ? ನನ್ನ ಪ್ರಕಾರ ಇವರು ಹಿಂದೂಗಳೇ ಅಲ್ಲ, ಮನಷ್ಯರೂ ಅಲ್ಲ. ಧರ್ಮಾಂದತೆಯ ಮತ್ತಿನಲ್ಲಿ ತೇಲುತ್ತಿರುವ ಕ್ರೂರ ಮೃಗಗಳು ಎಂದವರು ಹೇಳಿದರು.
ಅಂಗಡಿಗಳನ್ನು ನಾಶಪಡಿಸಿ, ಕಲ್ಲಂಗಡಿಯನ್ನು ಹಾಳುಗೆಡವಿದ ಎಲ್ಲ ಕಿರಾತಕರ ವಿರುದ್ಧ ಸರಕಾರ ಕೂಡಲೇ ಕ್ರಿಮಿನಲ್ ಕೇಸು ದಾಖಲಿಸಬೇಕು, ರಾಜ್ಯದಿಂದಲೇ ಗಡೀಪಾರು ಮಾಡಬೇಕು. ಇದು ನನ್ನ ಆಗ್ರಹ. ದುಷ್ಕರ್ಮಿಗಳು ನಡೆಸಿದ ಈ ಪೈಶಾಚಿಕ ಕೃತ್ಯದ ಬಗ್ಗೆ ಕಲ್ಲಂಗಡಿ ಕಳೆದುಕೊಂಡ ನಬಿಸಾಬಿ ಹಾಗೂ ಕೃತ್ಯವನ್ನು ವಿರೋಧಿಸಿ ದೇಗುಲದ ಮುಖ್ಯಸ್ಥರು ನೀಡಿರುವ ಹೇಳಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.