Advertisement

58 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲು ನಿಗದಿ ಮಾಡಿ ಚುನಾವಣೆ ನಡೆಸಿ : ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಆಗ್ರಹ

Advertisement
ಹಗರಿಬೊಮ್ಮನಹಳ್ಳಿ :- ೫೮ ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ ತಿಂಗಳಲ್ಲಿ ಚುನಾವಣೆ ಜರುಗಿ ಇಲ್ಲಿಗೆ ನಾಲ್ಕು ತಿಂಗಳಾದರೂ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡಿ ತಕ್ಷಣವೇ ಚುನಾವಣೆ ನಡೆಸದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ತಕ್ಷಣವೇ ಮೀಸಲು ನಿಗದಿಗೊಳಿಸಿ ಚುನಾವಣೆ ನಡೆಸಲು ಒತ್ತಾಯಿಸಿದರು.

ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಥಿಯಲ್ಲಿ ಮಾತನಾಡಿದ ಅವರು ೫೮ ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಬಹುತೇಕ ಕಡೆ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿರುವುದರಿಂದ ಬಿಜೆಪಿ ಸರ್ಕಾರ ಮೀಸಲು ನಿಗದಿಗೊಳಿಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಇರುವಾಗ ಆಡಳಿತಾಧಿಕಾರಿಗಳನ್ನು ನೇಮಿಸಿ ಹಿಂಬಾಗಿಲ ಮೂಲಕ ಅಧಿಕಾರ ನಡೆಸುವ ಭಿಜೆಪಿ ಸರ್ಕಾರದ ನೀತಿ ಸಂವಿಧಾನ ವಿರೋಧಿಯಾಗಿದ್ದು ತಕ್ಷಣವೇ ಮೀಸಲು ನಿಗದಿಗೊಳಿಸಿ ಚುನಾವಣೆ ನಡೆಸಲು ಪೌರಾಡಳಿತ ಇಲಾಖೆ ಸಚಿವರು ಮತ್ತು ಪ್ರಧಾನ ಕರ‍್ಯದರ್ಶಿಗಳಿಗೆ ಪತ್ರ ಬರೆದಿರುವುದಾಗಿ ಪತ್ರೇಶ್ ತಿಳಿಸಿದರು.
Advertisement
Advertisement
Recent Posts
Advertisement