Homepageರಾಜ್ಯಹುಬ್ಬಳ್ಳಿ ಘಟನೆ ಖಂಡನೀಯ: ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ: ನಾವು ದೇಶದ ಕಾನೂನಿನ ಪರ: ಸಿದ್ದರಾಮಯ್ಯ ಹುಬ್ಬಳ್ಳಿ ಘಟನೆ ಖಂಡನೀಯ: ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ: ನಾವು ದೇಶದ ಕಾನೂನಿನ ಪರ: ಸಿದ್ದರಾಮಯ್ಯ Advertisement ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಗಳು ಅತ್ಯಂತ ಖಂಡನೀಯ. ಇದಕ್ಕೆ ಹೊಣೆಗಾರರಾಗಿರುವ ಕಿಡಿಗೇಡಿಗಳು ಯಾವುದೇ ಜಾತಿ, ಧರ್ಮ ಇಲ್ಲವೇ ಪಕ್ಷದವರೇ ಆಗಿರಲಿ ಪೊಲೀಸರು ಅವರನ್ನು ಬಂಧಿಸಿ ಅಲ್ಲಿನ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು. ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲು ರಾಜ್ಯ ಸರ್ಕಾರ ಅವಕಾಶ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಕೋಮುದ್ವೇಷವನ್ನು ಹುಟ್ಟುಹಾಕಿ, ಹರಡುವ ಮೂಲಕ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕೆಡಿಸುವ ಹುನ್ನಾರವನ್ನು ಸಮಾಜವಿರೋಧಿ ಶಕ್ತಿಗಳು ಸತತವಾಗಿ ನಡೆಸುತ್ತಾ ಬಂದಿರುವುದನ್ನು ಕಾಣಬಹುದು. ಇದು ಕೇವಲ ಆಕಸ್ಮಿಕವಾದ ಘಟನೆಗಳಾಗಿರದೆ ಇದರ ಹಿಂದೆ ಯೋಜಿತ ಕಾರ್ಯಸೂಚಿ ಇದ್ದ ಹಾಗೆ ಕಾಣುತ್ತಿದೆ.ರಾಜ್ಯದಲ್ಲಿನ ಕಾನೂನು ವ್ಯವಸ್ಥೆಯಲ್ಲಿ ಹಿಂದೆಂದೂ ಈ ರೀತಿಯ ಅರಾಜಕತೆ ಕಂಡಿರಲಿಲ್ಲ. ಇದಕ್ಕೆ ಅಸಮರ್ಥ ಮತ್ತು ದುರ್ಬಲ ಗೃಹಸಚಿವರೇ ಮುಖ್ಯ ಕಾರಣ ಎನ್ನುವುದು ನಿರ್ವಿವಾದ. ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಸಮಾಜವಿರೋಧಿ ಶಕ್ತಿಗಳು ಬೀದಿಗಳಿಯುತ್ತಿರುವಂತೆ ಕಾಣುತ್ತಿದೆ ಎಂದವರು ಹೇಳಿದ್ದಾರೆ.ರಾಜ್ಯದ ಕೆಲವು ಸಚಿವರು ಮತ್ತು ಆಡಳಿತಾರೂಢ ಪಕ್ಷದ ನಾಯಕರು ಪೊಲೀಸರ ಕಾರ್ಯನಿರ್ವಹಣೆಯಲ್ಲಿ ಮತ್ತೆ ಮತ್ತೆ ಮಧ್ಯಪ್ರವೇಶಿಸಿ, ತಮಗೆ ಅನುಕೂಲವಾಗುವಂತೆ ಕೆಲಸ ಮಾಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಇದರಿಂದ ಪೊಲೀಸರು ನೈತಿಕವಾಗಿ ಕುಸಿದುಹೋಗಿದ್ದಾರೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆ. ರಾಜಕೀಯದ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಬಂಧಿಸುವ ಮತ್ತು ತನಿಖೆಯನ್ನೇ ನಡೆಸದೆ ಅಪರಾಧಿಗಳ ಹೆಸರನ್ನು ಮಾಧ್ಯಮಕ್ಕೆ ತಿಳಿಸುವ ಕೆಲಸವನ್ನು ಮಾಡಬಾರದು. ಇದರಿಂದ ಪರಿಸ್ಥಿತಿ ಉಲ್ಭಣಗೊಂಡರೆ ಅದರ ನಿಯಂತ್ರಣದ ಭಾರ ತಮ್ಮ ಮೇಲೆಯೇ ಬೀಳಲಿದೆ ಎಂಬ ಎಚ್ಚರ ಪೊಲೀಸರಿಗೂ ಇರಬೇಕಾಗುತ್ತದೆ ಎಂದವರು ಹೇಳಿದ್ದಾರೆ.ಅಪರಾಧಿಗಳು ಕೇವಲ ಅಪರಾಧಿಗಳು, ಅವರಿಗೆ ಜಾತಿ, ಧರ್ಮಗಳಿರುವುದಿಲ್ಲ. ಇದನ್ನು ಸರ್ಕಾರ, ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಮೊದಲು ತಿಳಿದುಕೊಳ್ಳಬೇಕು. ಯಾರದೋ ಪ್ರಚೋದನೆಯಿಂದ ವಿವೇಚನೆಯನ್ನು ಕಳೆದುಕೊಂಡು ಸಿಟ್ಟಿನ ಕೈಗೆ ವಿವೇಕವನ್ನು ಕೊಡಬಾರದು, ಇಂತಹ ಸಂದರ್ಭಗಳನ್ನು ಸಹನೆ, ಸಂಯಮಗಳ ಮೂಲಕ ಎದುರಿಸಬೇಕು. ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ. ನಾವು ಸತ್ಯ, ನ್ಯಾಯ ಮತ್ತು ನೆಲದ ಕಾನೂನಿಗೆ ಬದ್ಧ. ಪೊಲೀಸರು ನೆಲದ ಕಾನೂನಿಗೆ ನಿಷ್ಠರಾಗಿ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲ ಇದೆ. ರಾಜಕೀಯ ಪೂರ್ವಗ್ರಹಪೀಡಿತರಾಗಿ ಕೈಗೊಳ್ಳುವ ನಿರ್ಧಾರಗಳಿಗಷ್ಟೇ ನಮ್ಮ ವಿರೋಧವಿದೆ ಎಂದವರು ಹೇಳಿದರು. Show Full Article Advertisement Next Read: ಎಡಬಿಡಂಗಿ ವರ್ತನೆಯ ಗೃಹ ಮಂತ್ರಿ ಹಾಗೂ ಕೋಲೆ ಬಸವಣ್ಣ ರೂಪದ ಮುಖ್ಯಮಂತ್ರಿಯಿಂದಾಗಿ ರಾಜ್ಯ ಅರಾಜಕತೆಯ ಗೂಡಾಗಿದೆ: ದಿನೇಶ್ ಗುಂಡೂರಾವ್ » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ