ಅವರು ಇಂದು ಮಂಗಳೂರಿನ ಬಲ್ಮಠದ ಸಹೋದಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಸಂಪಾದಿಸಿರುವ ರಘುರಾಮ ಶೆಟ್ಟಿ ಅವರ ಸಂಪಾದಕೀಯ ಬರಹಗಳ "ಬೇರೆಯೇ ಮಾತು" ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ವಾರ್ತಾಭಾರತಿ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆ. ಹಿರಿಯ ಪತ್ರಕರ್ತ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ (ಸಿದ್ದರಾಮಯ್ಯ ಅವಧಿ) ದಿನೇಶ್ ಅಮೀನ್ ಮಟ್ಟು, ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್, ರಂಗ ಚಾವಡಿ ಸಂಚಾಲಕರಾದ ಜಗನ್ನಾಥ್ ಶೆಟ್ಟಿ ಬಾಳ, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ ಸೇರಿದಂತೆ ಅನೇಕ ಪತ್ರಕರ್ತರು, ವಡ್ಡರ್ಸೆ ರಘುರಾಮ ಶೆಟ್ಟಿಯವರ ಅಭಿಮಾನಿಗಳು ಭಾಗವಹಿಸಿದ್ದರು.