Homepageರಾಜ್ಯನಾನು ಪ್ರಶ್ನಿಸಿದ್ದು ಆರೆಸ್ಸೆಸನ್ನು. ಉತ್ತರಿಸುತ್ತಿರುವವರು ಬಿಜೆಪಿಗರು. ಆರೆಸ್ಸೆಸ್ಸಿಗರೇನು ಓದು ಬರಹ ಬಾರದವರೇ? ಅವರೇಕೆ ಉತ್ತರಿಸುತ್ತಿಲ್ಲ: ಸಿದ್ದರಾಮಯ್ಯ ಪ್ರಶ್ನೆ ನಾನು ಪ್ರಶ್ನಿಸಿದ್ದು ಆರೆಸ್ಸೆಸನ್ನು. ಉತ್ತರಿಸುತ್ತಿರುವವರು ಬಿಜೆಪಿಗರು. ಆರೆಸ್ಸೆಸ್ಸಿಗರೇನು ಓದು ಬರಹ ಬಾರದವರೇ? ಅವರೇಕೆ ಉತ್ತರಿಸುತ್ತಿಲ್ಲ: ಸಿದ್ದರಾಮಯ್ಯ ಪ್ರಶ್ನೆ Advertisement ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೆಸ್ಸೆಸ್ ನಾಯಕರುಗಳಿಗೆ ಸವಾಲೆಸೆದಿದ್ದಾರೆ.ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಎಂದವರು ಪ್ರಶ್ನಿಸಿದ್ದಾರೆ.ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳು ಅಲ್ಲವೇ?ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ ಎಂದು ಹೇಳಿದ್ದಾರೆ.ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ? ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ ಎಂದವರು ಕೇಳಿದ್ದಾರೆ.ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?ಹಿಂದೂಗಳೆಲ್ಲ ಒಂದು ಎಂದು ಕಂಠ ಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ ಯಾಕೆ ಎಂದವರು ಕೇಳಿದ್ದಾರೆ.ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಎಂದು ಪ್ರಶ್ನಿಸಿದ್ದಾರೆಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದವರು ಸವಾಲೆಸೆದಿದ್ದಾರೆ. Show Full Article Advertisement Next Read: ಸಾವರ್ಕರ್ ರನ್ನು "ವೀರ್" ಎಂದು ಕರೆದುಕೊಂಡದ್ದು ಸ್ವತಃ ಸಾವರ್ಕರ್ ರವರೇ ವಿನಃ ಈ ದೇಶದ ಚರಿತ್ರೆಯಲ್ಲ! » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ