Homepageರಾಜ್ಯವಿಕೃತ ಟ್ರೋಲರ್ ಚಕ್ರತೀರ್ಥನನ್ನು ಬಂಧಿಸಿ, ಆತನಿಂದಾದ ನಷ್ಟವನ್ನು ವಸೂಲಿ ಮಾಡಬೇಕು ಮತ್ತು ಸಚಿವ ನಾಗೇಶ್ ರನ್ನು ಸಂಪುಟದಿಂದ ವಜಾ ಮಾಡಬೇಕು: ಸಿದ್ದರಾಮಯ್ಯ ಆಗ್ರಹ ವಿಕೃತ ಟ್ರೋಲರ್ ಚಕ್ರತೀರ್ಥನನ್ನು ಬಂಧಿಸಿ, ಆತನಿಂದಾದ ನಷ್ಟವನ್ನು ವಸೂಲಿ ಮಾಡಬೇಕು ಮತ್ತು ಸಚಿವ ನಾಗೇಶ್ ರನ್ನು ಸಂಪುಟದಿಂದ ವಜಾ ಮಾಡಬೇಕು: ಸಿದ್ದರಾಮಯ್ಯ ಆಗ್ರಹ Advertisement "ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾಮಾಡಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ."ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಿಕ ಕ್ಷೇತ್ರವನ್ನೇ ಅಲ್ಲೋಲಕಲ್ಲೋಲ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್ ನಿಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತಾ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ?" ಎಂದವರು ಹೇಳಿದ್ದಾರೆ."ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಈ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ." ಎಂದು ಹೇಳಿದರು."ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋದನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ." ಎಂದವರು ಆಕ್ರೋಶ ವ್ಯಕ್ತಪಡಿಸಿದರು.''ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ, ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ.ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ದದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು" ಎಂದವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. Show Full Article Advertisement Next Read: ಚಕ್ರತೀರ್ಥನ ನೇತೃತ್ವದ್ದು "ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ" ಅಲ್ಲ. ಅದೊಂದು "ನೈಜ ಇತಿಹಾಸ ಹೊರಬರಬಾರದು ಎಂದು ಹರಸಾಹಸ ಪಡುತ್ತಿರುವ ಆರ್ಯನ್ ಗ್ಯಾಂಗ್" » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ