ಅವರು ಇಂದು #AryanRSS ಹ್ಯಾಶ್‌ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡುವ ಮೂಲಕ ಆರೆಸ್ಸೆಸ್ ನ ಅಸ್ಪೃಶ್ಯತಾ ಆಚರಣೆಯ ಕುರಿತು ವಿವರಿಸಿದ್ದಾರೆ.
ಆರ್.ಎಸ್.ಎಸ್ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ.
ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು.
ನಿಮ್ಮನ್ನು "ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷತೆ" ಯಂತಹ ಸ್ಥಾನದಲ್ಲಿ ಕಾಣುವ ಆಸೆ ನನಗೆ ಎಂದವರು ಹೇಳಿದ್ದಾರೆ.
ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ನಿಮಗೆ ನಾನು ನೀಡುವ ಸಲಹೆ ಎಂದವರು ಕರೆ ನೀಡಿದ್ದಾರೆ.