Homepageರಾಜ್ಯವಿಸರ್ಜಿಸಬೇಕಿರುವುದು ಪರಿಷ್ಕೃತ ಪಠ್ಯವನ್ನೇ ಹೊರತು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನಲ್ಲ: ಸಿದ್ದರಾಮಯ್ಯ ಕಿಡಿ ವಿಸರ್ಜಿಸಬೇಕಿರುವುದು ಪರಿಷ್ಕೃತ ಪಠ್ಯವನ್ನೇ ಹೊರತು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನಲ್ಲ: ಸಿದ್ದರಾಮಯ್ಯ ಕಿಡಿ Advertisement "ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆತನ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?" ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಅವರು ಇಂದು ಫೇಸ್‌ಬುಕ್, ಟ್ವಿಟರ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ #SaveKarnataka ಎಂಬ ಹ್ಯಾಶ್‌ಟ್ಯಾಗ್ ಬಳಸಿ ಆ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ."ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋದಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ?ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು." ಎಂದವರು ಹೇಳಿದ್ದಾರೆ."ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?" ಎಂದವರು ಪ್ರಶ್ನಿಸಿದ್ದಾರೆ."ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ? ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ, ನೂತನ ಪರಿಷ್ಕೃತ ಪಠ್ಯ ರಚನೆಯಾಗುವ ವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿಗಳು ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು." ಎಂದವರು ಒತ್ತಾಯಿಸಿದ್ದಾರೆ."ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದ ಕಿತ್ತುಹಾಕಬೇಕು. ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು." ಎಂದವರು ಆಗ್ರಹಿಸಿದ್ದಾರೆ. Show Full Article Advertisement Next Read: ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಒಂದರ ಮೇಲೊಂದರಂತೆ ಅಂಬೇಡ್ಕರರಿಗೆ ಅವಮಾನ ಮಾಡಿದೆ! ಆ ಅವಮಾನಗಳ ಪಟ್ಟಿ ಹೀಗಿದೆ. » Advertisement Recent Posts ಮುಂದಿನ 10 ವರ್ಷ ಕಾಲ ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಡಿಕೆಶಿ ಸ್ಥಳೀಯ ಸಂಸ್ಥೆಗಳ ಕುಂದುಕೊರತೆಗಳ ಪರಿಹಾರ ನನ್ನ ಗುರಿ : ರಾಜು ಪೂಜಾರಿ MP ಸೀಟು ಕೊಡಿಸುವುದಾಗಿ 2 ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ. (ಪ್ರಾತಿನಿಧಿಕ ಚಿತ್ರ) ಫೋಟೋ ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡುವಿಕೆಯ ವಿರುದ್ದ ಪ್ರಸಾದ್ ಕಾಂಚನ್ ದೂರು. ಸೈಟು ವಾಪಾಸು ನೀಡುವುದಾಗಿ ಸಿಎಂ ಪತ್ನಿಯಿಂದ ಮುಡಾಗೆ ಪತ್ರ! ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಬಿಜೆಪಿ ಪಿತೂರಿ- 1000ಕೋ. ರೂ ಸಂಗ್ರಹ: ಪೋಲೀಸ್ ದೂರು FIR ಆಗಿರುವ ಮೋದಿ ಸಂಪುಟದ 23 ಸಚಿವರು ರಾಜೀನಾಮೆ ನೀಡುವರೇ? ಇಡೀ ಪಕ್ಷ ಸಿದ್ದರಾಮಯ್ಯ ಬೆನ್ನಿಗಿದೆ: ಜಿ.ಸಿ ಚಂದ್ರಶೇಖರ್ ನಾಡಿನ ಶಾಂತಿ ಕದಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಣೆ ಸ್ವಾಗತಾರ್ಹ: ಕೊಡವೂರು ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ! ಬಿಜೆಪಿಗರಿಂದ ಸಿದ್ಧರಾಮಯ್ಯರನ್ನು ಏನೂ ಮಾಡಲಾಗದು: ಗೀತಾ ವಾಗ್ಳೆ ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ! ಶಿರಾಡಿ ಗುಡ್ಡ ಕುಸಿತ; ಮುಖ್ಯಮಂತ್ರಿ ಭೇಟಿ- ಡಾ. ಕಕ್ಕಿಲ್ಲಾಯ ಬಹಿರಂಗ ಪತ್ರ. ಮರವಂತೆ ಜಾತ್ರೆ- ಬಡ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವಿರೇಕೆ?: ಡಾ. ಭಟ್ ನಿರ್ಮಲಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ