ಆದೇಶ ಪತ್ರವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುರವರು ಕೆ.ಅಣ್ಣಯ್ಯ ಶೇರಿಗಾರ್ ರವರಿಗೆ ಮಂಗಳವಾರ ಹಸ್ತಾಂತರಿಸಿದರು.
"ನಿರಂತರ 50 ವರ್ಷ ಸಹಕಾರಿ ರಂಗದಲ್ಲಿ ದುಡಿದು ಅನುಭವ ಹೊಂದಿರುವ ನನ್ನನ್ನು, ಈ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಆಯ್ಕೆ ಮಾಡಿರುವುದು ತುಂಬಾ ಸಂತೋಷವಾಗಿದೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಿದೆ" ಎಂದು ಶೇರಿಗಾರ್ ರವರು ಕನ್ನಡ ಮೀಡಿಯಾ ಡಾಟ್ ಕಾಮ್ ಗೆ ತಿಳಿಸಿರುತ್ತಾರೆ.
ಈ ಸಂದರ್ಭದಲ್ಲಿ ಸಹಕಾರಿ ರಂಗದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ಸಹಕಾರಿಯಾದ ದಿ. ಬಂಟ್ವಾಳ ನಾರಾಯಣ ನಾಯಕ್ , ದಿ. ಜಿ.ಎಸ್.ಆಚಾರ್, ಟಿ.ಶಂಭು ಶೆಟ್ಟಿ, ಜಿಲ್ಲಾ ಬ್ಯಾಂಕಿನ ಈಗಿನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರಕುಮಾರ್ ರವರನ್ನು ಶೇರಿಗಾರ್ ರವರು ಸ್ಮರಿಸಿಕೊಂಡಿದ್ದಾರೆ. ಅಲ್ಲದೆ ಇದಕ್ಕೆ ಸಹಕಾರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಮ್. ವೀರಪ್ಪ ಮೊಯ್ಲಿಯವರನ್ನು ಕೂಡ ಈ ಸಂಧರ್ಭದಲ್ಲಿ ಜ್ಞಾಪಿಸಿಕೊಂಡಿದ್ದಾರೆ. ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಮಾಜಿ ವಿಧಾನ ಪರಿಷತ್ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ, ಕೆಪಿಸಿಸಿ ಸೊತ್ತುಗಳ ರಕ್ಷಣಾ ಸಮಿತಿ ಅಧ್ಯಕ್ಷರಾದ ಪ್ರಸಾದ್ ರಾಜ್ ಕಾಂಚನ್, ಪ್ರಧಾನ ಕಾರ್ಯದರ್ಶಿಗಳಾದ ಎಮ್.ಎ.ಗಫೂರ್, ಮಿಥುನ್ ರೈ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ದಿನೇಶ್ ಪುತ್ರನ್ , ಉಡುಪಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರಾದ ಕ್ರಷ್ಣ ಮೂರ್ತಿ ಆಚಾರ್ಯ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿಯವರ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಶುಭಾಶಯ ತನಗೆ ಸಿಕ್ಕಿದೆ ಎಂದವರು ತಿಳಿಸಿದ್ದಾರೆ. "ನನಗೆ ಸಿಕ್ಕಿರುವ ಈ ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸುವ ಭರವಸೆ ಇದೆ" ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.