ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿಯಾಗಿ ಹತ್ಯೆಗೊಳಗಾದ ಅಮಾಯಕ ಮೃತರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿರುವುದು ಸರಿಯಲ್ಲ. ಸರ್ಕಾರದಿಂದ ಪರಿಹಾರ ದೊರಕದೆ ಇರುವ ಸಂತ್ರಸ್ತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ರೀತಿಯ ದುರ್ಘಟನೆಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮನವಿ ಮಾಡಲಾಯಿತು.
ಮಾಜಿ ಸಚಿವರಾದ ಬಿ.ರಮಾನಾಥ ರೈ, ಮಾಜಿ ಸಂಸದರು ಬಿ. ಇಬ್ರಾಹಿಂ, ಕೆಪಿಸಿಸಿ ಉಪಾಧ್ಯಕ್ಷರಾದ ಅಭಯ ಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಹರೀಶ್ ಕುಮಾರ್, ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಶಾಸಕ ಮೊಹಿದ್ದಿನ್ ಬಾವ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರುಗಳದ ಶಶಿಧರ್ ಹೆಗ್ಡೆ, ಹರಿನಾಥ್.ಕೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪ್ರಕಾಶ್ ಸಾಲ್ಯಾನ್, ಬೇಬಿ ಕುಂದರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಕಾರ್ಪೊರೇಟರ್ ಗಳಾದ ಅಬ್ದುಲ್ ರವೂಫ್, ನವೀನ್ ಡಿಸೋಜಾ, ಭಾಸ್ಕರ್ ಮೊಯ್ಲಿ, ಪದಾಧಿಕಾರಿಗಳಾದ ಟಿ.ಕೆ.ಸುಧೀರ್, ನೀರಜ್ ಪಾಲ್, ಅಶೋಕ್ ಡಿ.ಕೆ, ಶಬ್ಬೀರ್ ಎಸ್, ಸಲೀಂ ಪಾಂಡೇಶ್ವರ ಉಪಸ್ಥಿತರಿದ್ದರು.