Advertisement

ಅನಾಥ ವೃದ್ಧರು, ಅಂಗವಿಕಲರು, ಮಾರಣಾಂತಿಕ ರೋಗಪೀಡಿತರ ಹೊಟ್ಟೆ ತುಂಬಿಸುವ "ಅನ್ನಭಾಗ್ಯ ಯೋಜನೆ" ನಿಲ್ಲಿಸಲು ಮುಂದಾದರೆ ಹುಷಾರ್: ಸಿದ್ದರಾಮಯ್ಯ ಎಚ್ಚರಿಕೆ

Advertisement

"ಅನ್ನಭಾಗ್ಯವು ಅನಾಥ ವೃದ್ಧರು, ಅಂಗವಿಕಲರು, ಮಾರಣಾಂತಿಕ ರೋಗಪೀಡಿತರು ಹೊಟ್ಟೆಗಿಲ್ಲದೆ ಖಾಲಿಹೊಟ್ಟೆಯಲ್ಲಿ ಮಲಗಬಾರದು ಅಥವಾ ಒಂದೊತ್ತಿನ ಊಟಕ್ಕಾಗಿ ಭಿಕ್ಷೆ ಬೇಡುವಂತಾಗಬಾರದು ಎಂಬ ಕಾರಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ. ಆ ಯೋಜನೆಗೆ ಅಡ್ಡಗಾಲು ಹಾಕುತ್ತಲೇ ಇದ್ದ ಬಿಜೆಪಿ ನಾಯಕರು ಅದನ್ನು ನಿಲ್ಲಿಸಲು ನೆಪಗಳನ್ನು ಹುಡುಕುತ್ತಿರುತ್ತಾರೆ. ರಾಜ್ಯದ ಆಹಾರ ಸಚಿವ ಉಮೇಶ್ ಕತ್ತಿ ಅವರಿಗೆ ಅಂತಹದ್ದೊಂದು ನೆಪ ಸುಪ್ರೀಂ ಕೋರ್ಟ್ ನ ಆದೇಶದಲ್ಲಿ ಸಿಕ್ಕಿದ್ದಕ್ಕೆ ಸಂತಸ ಪಟ್ಟಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

"ರೂ.2,65,000 ಕೋಟಿ ಗಾತ್ರದ ಬಜೆಟ್ ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವ ಹಣ ಕೇವಲ ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು?
ಅಭಿವೃದ್ದಿ ಚಟುವಟಿಕೆಗಳು ಸ್ಥಗಿತಗೊಂಡು, ಕಲ್ಯಾಣ ಕಾರ್ಯಕ್ರಮಗಳು ದುಡ್ಡಿಲ್ಲದೆ ನೆನೆಗುದಿಗೆ ಬೀಳಲು ಕಾರಣ ಈ ಸರ್ಕಾರದ ಕಮಿಷನ್ ದಾಹ. 40% ಕಮಿಷನ್ ಈಗ 50%ಗೆ ಏರಿದೆಯಂತೆ. ಉಮೇಶ್ ಕತ್ತಿಯಂತಹ ಬೇಜವಾಬ್ದಾರಿ ಸಚಿವರು ಅನ್ನಭಾಗ್ಯ ಯೋಜನೆ ನಿಲ್ಲಿಸಲು ಹೊರಟಿದ್ದಾರೆ" ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಸಚಿವ ಉಮೇಶ್ ಕತ್ತಿಯವರೇ ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೆ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ, ಎಚ್ಚರ ಇರಲಿ...!!" ಎಂದು ಸಿದ್ದರಾಮಯ್ಯನವರು ಪತ್ರಿಕಾ ಹೇಳಿಕೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Recent Posts
Advertisement