ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ ಎಂದು ವರದಿಯಾಗಿದೆ.

ಈ ಮೊದಲು ಅರ್ಜಿ ಸಲ್ಲಿಕೆಗೆ ನವಂಬರ್ 15 ಕೊನೆ ದಿನವಾಗಿತ್ತು ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ ಮೂಲೆಗಳಿಂದ ಕಾಂಗ್ರೆಸ್ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್‌ಗೆ ಬರಲು ಇಚ್ಚಿಸಿರುವ ಹಲವಾರು ಪ್ರಭಲ ನಾಯಕರುಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.