ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಶ್ರೀ ದೀಪಕ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೀಪಕ್ ಸಿಂಗ್ ಅವರು ತಕ್ಷಣದಿಂದ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವ ವಹಿಸಿಕೊಂಡು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.
"ಕನ್ನಡ ಮೀಡಿಯಾ ಡಾಟ್ ಕಾಂ" ನ ಹಿತೈಷಿಯಾಗಿರುವ ದೀಪಕ್ ಸಿಂಗ್ ರವರು ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ಅತ್ಯಂತ ಆಳವಾದ ಅನುಭವ ಹೊಂದಿದ್ದು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಶ್ರೀಯುತರು ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆನಂತರ ಪ್ರಧಾನ ಕಾರ್ಯದರ್ಶಿಯಾಗಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಐಟಿ ಸಲ್ ನ ಅಧ್ಯಕ್ಷರಾಗಿ, ಕೆಪಿಸಿಸಿ ಸೋಶಿಯಲ್ ಮೀಡಿಯಾದ ಸಹಸಂಚಾಲಕರಾಗಿ, ಕೆಪಿಸಿಸಿ ಸೋಶಿಯಲ್ ಮೀಡಿಯಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ ಈ ನಡುವೆ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕೂಡ ಸೇವೆ ಸಲ್ಲಿಸಿದ್ದಾರೆ.