Advertisement

ಜ. 30: ಭಾರತ್ ಜೋಡೋ ಸಮಾರೋಪದ ಅಂಗವಾಗಿ ರಾಜ್ಯದೆಲ್ಲೆಡೆ ರಾಷ್ಟ್ರ ಧ್ವಜಾರೋಹಣ: ಕೆಪಿಸಿಸಿ

Advertisement

"ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸುಮಾರು 145ದಿನಗಳಷ್ಟು ದೀರ್ಘಕಾಲ ಮಳೆ ಬಿಸಿಲೆನ್ನದೆ ನಿರಂತರವಾಗಿ ನಡೆದ ಭಾರತ್ ಜೋಡೋ ಯಾತ್ರೆಯು ಜನವರಿ 30ರಂದು ಕಾಶ್ಮೀರದಲ್ಲಿ ಸಮಾರೋಪಗೊಳ್ಳಲಿದೆ. ಈ ಕಾರ್ಯಕ್ರಮದ ಅಂಗವಾಗಿ ರಾಜ್ಯದೆಲ್ಲೆಡೆ ಕಾಂಗ್ರೆಸ್ ಕಚೇರಿಗಳಲ್ಲಿ ಆಯಾಯ ಭಾಗದ ನಾಯಕರುಗಳ ನೇತೃತ್ವದಲ್ಲಿ ರಾಷ್ಟ್ರಧ್ವಜ ಆರೋಹಣ ನಡೆಯಲಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯ ವಿವರಗಳು ಇಂತಿವೆ:

2022ರ ಸೆಪ್ಟೆಂಬರ್ ರಂದು 07ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆಯು12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳನ್ನು ಹಾದು, ಆ ಮೂಲಕ 3970 ಕಿಲೋಮೀಟರ್‌ಗಳಷ್ಟು ದೂರವನ್ನು ಕ್ರಮಿಸಿ 2023ರ ಜನವರಿ 30 ರಂದು ಶ್ರೀನಗರದಲ್ಲಿ ಸಮಾರೋಪಗೊಳ್ಳಲಿದೆ.

ಈ ಯಾತ್ರೆಯು ಲಕ್ಷಾಂತರ ಜನರಿಂದ ಅಗಾಧ ಹಾಗೂ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದೆ ಹಾಗೆಯೇ ಶ್ರೀಯುತ ರಾಹುಲ್ ಗಾಂಧಿ ಯವರ ಪ್ರೀತಿ ಮತ್ತು ಏಕತೆಯ ಸಂದೇಶಗಳು ಇಡೀ ದೇಶವನ್ನು ಒಗ್ಗೂಡಿಸಲು ಜನರ ಮನಸ್ಸಿನಲ್ಲಿ ಪ್ರಭಲವಾದ ಆಶಾಭಾವನೆಯನ್ನು ಮೂಡಿಸಿದೆ. ಈ ಐತಿಹಾಸಿಕ ಯಾತ್ರೆಗೆ ಸಮಾಜದ ಎಲ್ಲಾ ವರ್ಗಗಳ ಪಚಂಡ ಬೆಂಬಲ ಮತ್ತು ಜನರ ಹೃತ್ಪೂರ್ವಕ ಪಾಲ್ಗೊಳ್ಳುವಿಕೆಯಿಂದ ಭಾರತೀಯ ರಾಜಕೀಯದಲ್ಲಿ ಮಹತ್ವಪೂರ್ಣ ಬದಲಾವಣೆಯನ್ನು ತಂದಿದೆ. ಈ ಯಾತ್ರೆಯ ಸಮಾರೋಪದ ಭಾಗವಾಗಿ, ರಾಹುಲ್‌ ಗಾಂಧಿ ಅವರು ಜನವರಿ 30 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀನಗರದಲ್ಲಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ರಾಷ್ಟ್ರಧ್ವಜವನ್ನು ಆರೋಹಣ ಮಾಡಲಿದ್ದಾರೆ.

ಆ ಪ್ರಯುಕ್ತ ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ, ಭಾರತ್ ಜೋಡೋ ಯಾತ್ರೆಗೆ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಪಕ್ಷದ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ರಾಷ್ಟ್ರ ಧ್ವಜದ ಆರೋಹಣ ಕಾರ್ಯಕ್ರಮವನ್ನು ಒಂದೇ ಸಮಯದಲ್ಲಿ ನಡೆಸಬೇಕೆಂದು ವಿನಂತಿಸಲಾಗಿದೆ. ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಕಚೇರಿಗಳು ಇಲ್ಲದಿರುವ ಕಡೆಗಳಲ್ಲಿ ಐತಿಹಾಸಿಕ ಪ್ರಾಮುಖ್ಯತಾ ಸ್ಥಳಗಳಲ್ಲಿ ಧ್ವಜಾರೋಹಣ ಮಾಡುವುದು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರುರವರು "ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಅಂಗವಾಗಿ, ಜಿಲ್ಲೆಯ ಎಲ್ಲಾ ನಾಯಕರುಗಳ ಸಮ್ಮುಖದಲ್ಲಿ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮತ್ತು ಜಿಲ್ಲೆಯ ಎಲ್ಲಾ ಹತ್ತು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮತ್ತಿತರ ಕಾರ್ಯಕ್ರಮಗಳು ನಡೆಯಲಿದೆ" ಎಂದು ತಿಳಿಸಿದ್ದಾರೆ.

Advertisement
Advertisement
Recent Posts
Advertisement