Advertisement

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ

Advertisement

ಜನವರಿ 22 ಆದಿತ್ಯವಾರ ದಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವತಯಾರಿಯ ಅಂಗವಾಗಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರವರು ಉಡುಪಿ ಜಿಲ್ಲೆಗೆ ಆಗಮಿಸುತ್ತಿದ್ದು, ಅಂದು ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವ ಕುರಿತು ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಹೋಟೆಲ್ ಶೆರೋನ್ ನ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಯಿತು.

ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಮತ್ತು ಸದಸ್ಯರು, ಎಲ್ಲಾ ಗ್ರಾಮೀಣ ಸಮಿತಿಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮೂಡಬಿದ್ರೆಯ ಮಾಜಿ ಶಾಸಕ ಹಾಗೂ ಚುನಾವಣಾ ಉಸ್ತುವಾರಿ ಅಭಯ ಚಂದ್ರ ಜೈನ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, 2013ರ ಕಾಂಗ್ರೆಸ್ ಅಭ್ಯರ್ಥಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಹಿರಿಯ ಕಾಂಗ್ರೆಸ್ ನಾಯಕ ಮಾಣಿಗೋಪಾಲ್, ಕೆಎಫ್‌ಡಿಸಿ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಶ್ಯಾಮಲಾ ಭಂಡಾರಿ, ಕೊಳ್ಕೆಬೈಲು ಕಿಶನ್ ಹೆಗ್ಡೆ , ಬೀಜಾಡಿ ಅಶೋಕ್ ಪೂಜಾರಿ ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ನಿರೂಪಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಆಶಾ ಕರ್ವಾಲೋ ವಂದಿಸಿದರು.

Advertisement
Advertisement
Recent Posts
Advertisement