ಮೀನುಗಾರರ ಕಾಂಗ್ರೆಸ್ ಅಧ್ಯಕ್ಷರಾಗಿ ಶೇಖರ ಚಾತ್ರಬೆಟ್ಟು

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮೀನುಗಾರರ ಘಟಕ ಇದರ ಅಧ್ಯಕ್ಷರಾಗಿ ನೇಮಕಗೊಂಡಿರುವ ಶೇಖರ ಚಾತ್ರಬೆಟ್ಟು ಇವರಿಗೆ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿಯವರು ನೇಮಕ ಪತ್ರವನ್ನು ಹಸ್ತಾಂತರಿಸಿದರು.

ಹಿರಿಯ ಕಾಂಗ್ರೆಸ್ ನಾಯಕ, ಕರ್ನಾಟಕ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಅನುಮೋದನೆಯ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರು ಮಾಡಿರುವ ಶಿಫಾರಸ್ಸಿಗೆ ಅನುಸಾರವಾಗಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಘಟಕ ಇದರ ಅಧ್ಯಕ್ಷ ರಾಜೇಶ್ ಜಿ. ಮೆಂಡನ್ ರವರು ಈ ಆಯ್ಕೆಯನ್ನು ಘೋಷಿಸಿದ್ದಾರೆ. 2 ಬಾರಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಉಪಾದ್ಯಕ್ಷರಾಗಿ 3 ಬಾರಿ ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಗಂಗೊಳ್ಳಿ ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶೇಖರ ಚಾತ್ರಬೆಟ್ಟು ಪ್ರಸ್ತುತ ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಕುಂದಾಪುರ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರಾಗಿದ್ದಾರೆ.

ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಬ್ಲಾಕ್ ಕಾಂಗ್ರೆಸ್ ಖಜಾಂಚಿ ಕೋಣಿ‌ ನಾರಾಯಣ ಆಚಾರ್, ಕೆಪಿಸಿಸಿ ಐಟಿ ಸೆಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯೆ, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ದೇವಕಿ ಸಣ್ಣಯ್ಯ, ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಪ್ರಭಾವತಿ ಜೆ. ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರೆಗಾರ್, ಯುವ ಮುಖಂಡರಾದ ಸುನಿಲ್ ಪೂಜಾರಿ ಕೋಡಿ, ಮುನಾಫ್ ಕೋಡಿ, ಸುಜನ್ ಶೆಟ್ಟಿ, ಮುಖಂಡರಾದ ಸದಾನಂದ ಖಾರ್ವಿ, ಧರ್ಮಪ್ರಕಾಶ್, ಆಶಾ ಕರ್ವಾಲೋ, ಅಶೋಕ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.