ಕಾರ್ಕಳ, ಬ್ರಹ್ಮಾವರ ಮೊರಾರ್ಜಿ ದೇಸಾಯಿ ಕಾಲೇಜುಗಳಲ್ಲಿ ‌ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಕಾಲೇಜು ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗಾಗಿ ವಿಧ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ಯಾವುದೇ ಶಾಲಾ ಕಾಲೇಜುಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜಿನ ಮೊಬೈಲ್ ಸಂಖ್ಯೆ 9353398961 ಹಾಗೂ ಆರೂರು ಕಾಲೇಜಿನ ಮೊಬೈಲ್ ಸಂಖ್ಯೆ 9901733784 ಗಳನ್ನು ಸಂಪರ್ಕಿಸಬಹುದಾಗಿದೆ‌ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಚಿತ್ರಕೃಪೆ: ಗೂಗಲ್)