Advertisement

ಬಿಜೆಪಿಯ 25 ಸಂಸದರು ದಂಡಪಿಂಡಗಳು: ಬಿ.ವಿ.ಶ್ರೀನಿವಾಸ್

Advertisement

ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರ ಜನದ್ರೋಹ ಎಸಗಿದೆ: ಬಿ.ವಿ.ಶ್ರೀನಿವಾಸ್

'ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ನಿರಂತರವಾಗಿ ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿಯು ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ' ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ.

ತೆಲಂಗಾಣ: ಯುವಕಾಂಗ್ರೆಸ್ ನಿಂದ 'Book my CM' ಅಭಿಯಾನ!

'ಬಿಜೆಪಿ ಕಾರ್ಯಕರ್ತರೊಬ್ಬರು ಇಂದು ಬಾಯಿಗೆ ಮಣ್ಣು ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ಕನ್ನಡಿಗರ ಬಾಯಿಗೆ ಮಣ್ಣು ಹಾಕುವ, ಕನ್ನಡಿಗರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಾ ಬಂದಿರುವುದನ್ನು ಬಿಜೆಪಿ ಕಾರ್ಯಕರ್ತ ಸಾಂಕೇತಿಕವಾಗಿ ಆಚರಿಸಿದ್ದಾನೆ' ಎಂದವರು ಟೀಕಿಸಿದ್ದಾರೆ.

ಹರಿಪ್ರಸಾದ್ ರವರೇ, ಸಿದ್ದರಾಮಯ್ಯ ಬಗ್ಗೆ ಅಪಸ್ವರ ಎತ್ತದಿರಿ!

'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾದರು. ಆದರೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗದಂತೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಂತೆ ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಂಸದರು ಮತ್ತು ಸದಸ್ಯರ ಸಭೆಗೆ ನಿರ್ಮಲಾ ಸೀತಾರಾಮನ್ ಅವರು ನೆಪಕ್ಕಾದರೂ ಭಾಗವಹಿಸಲಿಲ್ಲ. ರಾಜ್ಯಕ್ಕೆ ಬರಬೇಕಾದ GST ಪಾಲಿನಲ್ಲಿ, 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆದಾಗ ರಾಜ್ಯವನ್ನು ಪ್ರತಿನಿಧಿಸುವ 25 ಮಂದಿ ಬಿಜೆಪಿ ಸಂಸದರು ಬಾಯಿ ಬಿಡಲೇ ಇಲ್ಲ' ಎಂದು ಆರೋಪಿಸಿದ್ದಾರೆ.

ಮೀಸಲಾತಿ: ಯಾವ್ಯಾವ ಜಾತಿಗಳಿಗೆಷ್ಟು ಗೊತ್ತೇ?

'ರಾಜ್ಯಕ್ಕೆ ಬರ ಬಂದಾಗ, ಅತಿವೃಷ್ಠಿ- ಪ್ರವಾಹದಿಂದ ಸಂಕಷ್ಟ ಎದುರಾದಾಗಲೂ ಈ ಸಂಸದರಾಗಲಿ, ರಾಜ್ಯದವರೇ ಆದ ಕೇಂದ್ರ ಸಚಿವರಾಗಲೀ ರಾಜ್ಯದ ನೆರವಿಗೆ ಬರಲೇ ಇಲ್ಲ. ಈ ಸಂಸದರಾಗಲೀ, ಕೇಂದ್ರ ಸಚಿವರಾಗಲೀ ಇವರ‌್ಯಾರೂ ನೆಪಕ್ಕೂ ಕೂಡ ಪ್ರಧಾನಿ ಮೋದಿ ಅವರ ಬಳಿ ಹೋಗಿ ರಾಜ್ಯದ ಪಾಲಿನ ಹಕ್ಕನ್ನು ಕೇಳುವ ಧೈರ್ಯ ಮಾಡಲಿಲ್ಲ. ಪಾರ್ಲಿಮೆಂಟಿನಲ್ಲೂ ರಾಜ್ಯದ ಪರವಾಗಿ ಸಮರ್ಥ ಧ್ವನಿ ಎತ್ತಿದ ಉದಾಹರಣೆಗಳಿಲ್ಲ. ಈ ರೀತಿ ನಿರಂತರವಾಗಿ ಜನದ್ರೋಹವನ್ನು ಮತ್ತು ಹೊಣೆಗೇಡಿತನವನ್ನು ಆಚರಿಸುತ್ತಾ ಬರುತ್ತಿರುವ ಬಿಜೆಪಿ ಸಂಸದರು ಮತ್ತು ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ಹತ್ತಿರ ಇರುವುದರಿಂದ ಕಾವೇರಿ ವಿಚಾರದಲ್ಲಿ ಮಾತ್ರ ಪ್ರತಿಭಟನೆಯ ಸೋಗು ಹಾಕುತ್ತಿದ್ದಾರೆ' ಎಂದು ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ.

ಇಸ್ರೋ ಬೆಳೆದುಬಂದ ದಾರಿ!

'ಹಿಂದಿ ಭಾಷೆ ಹೇರಿಕೆ, ರಾಜ್ಯದ ಪಾಲಿನ ಉದ್ಯೋಗಾವಕಾಶಗಳನ್ನು ಕಿತ್ತುಕೊಂಡಾಗಲೂ ಈ ಸಂಸದರು ಉಸಿರು ಬಿಡಲಿಲ್ಲ. ಹೀಗೆ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ನಿರಂತರವಾಗಿ ನಾಡದ್ರೋಹಿಗಳಾಗಿರುವ ಸಂಸದರು ಈಗ ಆಡುತ್ತಿರುವ ಮಾತುಗಳು ಆತ್ಮವಂಚನೆಯದ್ದು. ಕಾವೇರಿ ನೀರಿನ ವಿವಾದ ನಾಲ್ಕು ರಾಜ್ಯಗಳಿಗೆ ಸೇರಿದ್ದು. ನಾಲ್ಕೂ ರಾಜ್ಯಗಳ ಪ್ರತಿನಿಧಿಗಳನ್ನು ಕರೆದು ಮಾತುಕತೆ ನಡೆಸುವ ಅಧಿಕಾರ ವ್ಯಾಪ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತ್ರ. ಆದರೆ ಈವರೆಗೂ ಕೇಂದ್ರದಿಂದ ಈ ಪ್ರಯತ್ನವೇ ನಡೆದಿಲ್ಲ.
ಸರ್ವ ಪಕ್ಷ ನಿಯೋಗಕ್ಕೆ ಸಮಯ ಕೊಡಿ ಎಂದು ಪ್ರಧಾನಿ ಅವರನ್ನು ಕೇಳುವ ಧೈರ್ಯ ಕೂಡ ಇಲ್ಲದ ಸಂಸದರ ಪುಕ್ಕಲುತನ ಹೇಡಿತನದ್ದು' ಎಂದವರು ಟೀಕಿಸಿದ್ದಾರೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ದಾಖಲೆಯಾಗುಳಿವ ಮೋದಿ ಸಾಧನೆಗಳು!

'ಹೀಗಾಗಿ ಈ ಕೂಡಲೇ ಸಂಕಷ್ಟ ಸೂತ್ರ ರೂಪಿಸಲು ಅಗತ್ಯ ಕ್ರಮಕ್ಕೆ ಮುಂದಾಗುವಂತೆ, ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕದಂತೆ ನಾಲ್ಕೂ ರಾಜ್ಯಗಳ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ಅವರನ್ನು ಬಿಜೆಪಿ ಸಂಸದರು ಮತ್ತು ನಾಯಕರು ಒತ್ತಾಯಿಸಬೇಕು' ಎಂದು ಬಿ.ವಿ.ಶ್ರೀನಿವಾಸ್ ಆಗ್ರಹಿಸಿದ್ದಾರೆ.

"ಬಿಟ್ಟಿಭಾಗ್ಯ" ಎಂಬ ಹೀಯಾಳಿಕೆ ಏಕೆ? ಶ್ರಮಿಕ ವರ್ಗಕ್ಕೂ "ಪೆನ್ಶನ್" ಕೊಡಿ!

Advertisement
Advertisement
Recent Posts
Advertisement