Advertisement

ಪಾರ್ಲಿಮೆಂಟ್ ರಕ್ಷಿಸದವರು ದೇಶ ರಕ್ಷಿಸುವರೇ: ಜಿಲ್ಲಾ ಕಾಂಗ್ರೆಸ್ ಪ್ರಶ್ನೆ

Advertisement

ದೇಶದ ಪ್ರಜಾತಂತ್ರ ವ್ಯವಸ್ಥೆಯ ದೇಗುಲವಾಗಿರುವ ಪಾರ್ಲಿಮೆಂಟಿನ ಒಳಗೆ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ದುಷ್ಕರ್ಮಿಗಳು ಒಳನುಸುಳಿ
ಹೊಗೆಬಾಂಬ್ ಸ್ಪೋಟಿಸಿ ಆತಂಕ ಸೃಷ್ಠಿಸಿರುವುದು ಕೇಂದ್ರ ಸರಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಪಾರ್ಲಿಮೆಂಟಿಗೆ ಭದ್ರತೆ ಒದಗಿಸಲಾಗದವರು ದೇಶಕ್ಕೆ ಭದ್ರತೆ ಒದಗಿಸಬಲ್ಲರೇ ಎಂಬ ಸಂಶಯ ದೇಶವಾಸಿಗಳನ್ನು ಕಾಡುವಂತಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ಒಬ್ಬ ಜವಾಬ್ದಾರಿಯುತ ಸಂಸದನಾಗಿ ಪ್ರತಾಪಸಿಂಹ ದುಷ್ಕರ್ಮಿಯೊಬ್ಬನಿಗೆ ಪಾರ್ಲಿಮೆಂಟ್ ಪ್ರವೇಶಕ್ಕೆ ಪಾಸ್ ನೀಡಿರುವುದು ಮತ್ತು ಆ ವ್ಯಕ್ತಿ ಶೂ ಒಳಗೆ ಕಲರ್ ಬಾಂಬ್ ಇಟ್ಟು ಎಲ್ಲ ತನಿಖಾ ದ್ವಾರಗಳನ್ನು ದಾಟಿ ಸಿಕ್ಕಿ ಬೀಳದೆ ಒಳ ಪ್ರವೇಶಿಸಿ ದಾಂಧಲೆ ನಡೆಸಿರುವ ಘಟನೆ ಸಹಜವಾಗಿಯೆ ಪ್ರಶ್ನಾರ್ಥಕವಾಗಿದೆ. ಖಚಿತವಾಗಿಯೂ ಈ ಘಟನೆ ಹಿಂದಿನ ಲೋಕಸಭಾ ಚುನಾವಣಾ ಪೂರ್ವದಲ್ಲಿ ನಡೆದ ಪುಲ್ವಾಮಾ ದಾಳಿಯ ಭದ್ರತಾ ವೈಫಲ್ಯದ ದುರಂತ ಘಟನೆಯನ್ನು ನೆನಪಿಸುತ್ತದೆ. ಕಳೆದ ಬಾರಿ ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಆಗಮಿಸುತ್ತಿದ್ದ ಸಂದರ್ಭ ಉಂಟಾದ ಟ್ರಾಫಿಕ್ ಜಾಮನ್ನು ವೈಭವೀಕರಿಸಿ ಅಂದಿನ ಕಾಂಗ್ರೆಸ್ ಸರಕಾರದ ತಲೆಗೆ ಕಟ್ಟಿ ಇದೊಂದು ದುರುದ್ದೇಶಪೂರಿತ ಭದ್ರತಾ ವೈಫಲ್ಯವೆಂದು ಬೀದಿಗೆ ಬಿದ್ದು ಹೊರಳಾಡಿ ಚುನಾವಣಾ ಆಯೋಗಕ್ಕೆ ದೂರುಕೊಟ್ಟವರು ಈಗೇನು ಹೇಳುತ್ತಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಹುಶಃ ಈ ಪ್ರಕರಣದ ಅಪರಾಧಿ ಒಂದುವೇಳೆ ಕಾಂಗ್ರೆಸ್ ಸಂಸದನ ಪಾಸ್ ಬಳಸಿ ಒಳಪ್ರವೇಶಿಸುತ್ತಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು. ಸಂಸದ ಪ್ರತಾಪಸಿಂಹ ರಾಜ್ಯ ಪ್ರತಿಪಕ್ಷ ನಾಯಕ ಅಶೋಕ್ ಆದಿಯಾಗಿ ಬಿಜೆಪಿ ನಾಯಕರು ಬೀದಿಬೀದಿಗಳಲ್ಲಿ ಪ್ರತಿಭಟಿಸಿ ಕಾಂಗ್ರೆಸ್ ಪಕ್ಷಕ್ಕೆ ದೇಶದ್ರೋಹದ ಆರೋಪ ಹೊರಿಸಿ ಬೊಬ್ಬಿಡುತ್ತಿದ್ದರು.. ಇದೇ ಪಕ್ಷದ ಆಡಳಿತಾವದಿಯಲ್ಲಿ ಇಪ್ಪತ್ತೆರಡು ವರ್ಷಗಳ ಹಿಂದೆ ವಿಶ್ವವೇ ಬೆಚ್ಚಿ ಬೀಳುವ ರೀತಿಯಲ್ಲಿ ಪಾರ್ಲಿಮೆಂಟಿನ ಮೇಲೆ ಉಗ್ರಗಾಮಿಗಳ ಆಕ್ರಮಣವಾಗಿ ಕೆಲವರು ಅಸುನೀಗಿರುವುದು ಇಲ್ಲಿ ಉಲ್ಲೇಖನೀಯ. ಆ ನಿಟ್ಟಿನಲ್ಲಿ ಇದನ್ನು ದೇಶದ್ರೋಹಿ ವಿಚ್ಛಿದ್ರಕಾರೀ ಶಕ್ತಿಗಳ ಮುಂದಿನ ಗುರಿಸಾಧನೆಯ ಪ್ರಯೋಗಾರ್ಥ ಆಕ್ರಮಣವೆಂದು ಪರಿಗಣಿಸಿ, ಕೇಂದ್ರ ಸರಕಾರ ಎಚ್ವತ್ತುಕೊಂಡು ಸೂಕ್ತಕ್ರಮ ಕೈಗೊಳ್ಳಬೇಕು. ಪ್ರಯೋಗದ ಸೂತ್ರದಾರಿಗಳು ಯಾರೆ ಇರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Recent Posts
Advertisement