"21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು" ಎಂಬ ವಿಷಯದ ಕುರಿತಾಗಿ ಸರಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳವರೆಗೆ (ರಾಜ್ಯದ ಎಲ್ಲಾ ಶಾಲೆಗಳ 6ನೆ ತರಗತಿಯ ನಂತರದ ವಿದ್ಯಾರ್ಥಿಗಳಿಗೆ ಮತ್ತು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಈ ತಿಂಗಳ ಅಂತ್ಯದೊಳಗೆ ನಡೆಸಲು ಕ್ರಮ ವಹಿಸಬೇಕು. ಈ ಮೂಲಕ ವಿಧ್ಯಾರ್ಥಿಗಳಿಗೆ ಮತ್ತು ಯುವಜನರಿಗೆ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ಒದಗಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪತ್ರದ ಮೂಲಕ ಆದೇಶ ನೀಡಿದ್ದಾರೆ.
ಗಾಂಧೀಜಿ ಕುರಿತು ಪ್ರಬಂಧ ಸ್ಪರ್ದೆ: ಶಿಕ್ಷಣ ಸಚಿವರಿಗೆ ಸಿಎಂ ಸೂಚನೆ!
Advertisement
Advertisement
Recent Posts