Advertisement

'ನ್ಯಾಯ ಯಾತ್ರೆ'ಯ ಮೇಲೆ ಬಿಜೆಪಿಯ ದಾಳಿ: ಜ- 23:  ಉಡುಪಿಯಲ್ಲಿ ಪ್ರತಿಭಟನೆ

Advertisement

ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಯವರ ನೇತೃತ್ವದ 'ಭಾರತ್ ಜೋಡೋ ನ್ಯಾಯ್ ಯಾತ್ರೆ'ಯು ಆದಿತ್ಯವಾರ (ಜನವರಿ 21) ಅಸ್ಸಾಂನಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿಯ ದುಷ್ಕರ್ಮಿಗಳು ರಾಹುಲ್ ಗಾಂಧಿ ಯವರು ಸಾಗುತ್ತಿದ್ದ ಬಸ್ಸನ್ನು ಅಡ್ಡಗಟ್ಟಿ ಅವರ ಮೇಲೆ ದಾಳಿ ನೆಡೆಸಲು ಯತ್ನಿಸಿದ್ದಾರೆ ಮತ್ತು ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಂ ರಮೇಶ್ ಅವರ ಕಾರಿನ ಮೇಲೆ ದಾಳಿ ಮಾಡಿ ಅದರ ಮೇಲಿನ ನ್ಯಾಯ್ ಯಾತ್ರೆಯ ಸ್ಟಿಕರ್ ಕಿತ್ತು ಬಿಜೆಪಿಯ ಬಾವುಟ ಹಾರಿಸಲು ಕೂಡ ಪ್ರಯತ್ನಿಸಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲಿನ ಈ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರು ದಿನಾಂಕ 23-01-24 ರಂದು ಮಂಗಳವಾರ ಸಂಜೆ 4-00 ಗಂಟೆಗೆ ರಾಜ್ಯದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಬೇಕು ಎಂದು ಆದೇಶಿಸಿರುವ ಹಿನ್ನಲೆಯಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಚೌಕದ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಮುಖಂಡರು , ಪದಾಧಿಕಾರಿಗಳು , ಘಟಕಗಳ ಅಧ್ಯಕ್ಷರು , ಜನಪ್ರತಿನಿಧಿಗಳು ,ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ರವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

Advertisement
Advertisement
Recent Posts
Advertisement