Advertisement

ಕಾಂಗ್ರೆಸ್ ನಾಯಕ ಹೇರಿಕುದ್ರು ಗಂಗಾಧರ ಶೆಟ್ಟಿ ಇನ್ನಿಲ್ಲ.

Advertisement

ಕುಂದಾಪುರ ಬ್ಲಾಕ್ ಕಾಂಗ್ರೆಸ್‌ನ ಹಿರಿಯ ನಾಯಕ, ಆನಗಳ್ಳಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ, ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ ಹೇರಿಕುದ್ರು ಗಂಗಾಧರ ಶೆಟ್ಟಿ ಇವರು ಮಾರ್ಚ್ 15ರಂದು ಶುಕ್ರವಾರ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅತ್ಯಂತ ಆರೋಗ್ಯಪೂರ್ಣರಾಗಿದ್ದ ಅವರು ಮಾರ್ಚ್ 13ರಂದು ಬೆಳಿಗ್ಗೆ 6 ಗಂಟೆಗೆ ಹಠಾತ್ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ತತ್ ಕ್ಷಣವೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಲಾಗಿತ್ತು. ಆದರೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿರುವುದು ಸ್ಪಷ್ಟಗೊಂಡ ಹಿನ್ನಲೆಯಲ್ಲಿ ಆ ನಂತರದಲ್ಲಿ ಉಡುಪಿಯ ದೊಡ್ಡ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.

ಅವರು ಅಂದು (ಮಾರ್ಚ್ 13) ಬೆಳಿಗ್ಗೆ 10 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮೈದಾನದಲ್ಲಿ ನಡೆದಿದ್ದ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಭೆಯಲ್ಲಿ ಭಾಗವಹಿಸುವ ಸಿದ್ದತೆಯಲ್ಲಿ ಇದ್ದಿದ್ದರು. ಆದರೆ ವಿಧಿಯ ಕ್ರೂರಲೀಲೆಗೆ ಅವರು ಬಲಿಯಾಗಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಕಾಂಗ್ರೆಸ್ ಪಕ್ಷದ ನಾಯಕರುಗಳಾದ ದಿವಂಗತ ಆಸ್ಕರ್ ಫರ್ನಾಂಡೀಸ್, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ ಹೆಗ್ಡೆ , ಮಂಜುನಾಥ ಭಂಡಾರಿ ಮುಂತಾದ ನಾಯಕರುಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಅವರು ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿಯವರ ಅನುಯಾಯಿಯಾಗಿದ್ದರು. ಗ್ರಾಮಪಂಚಾಯಿತಿ ಮಟ್ಟದಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಪಕ್ಷವನ್ನು ಅತ್ಯಂತ ಬಲಿಷ್ಠವಾಗಿ ಕಟ್ಟಿದ್ದ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಮಟ್ಟದಲ್ಲಿ ಉತ್ತಮವಾದ ಗೌರವವನ್ನು ಪಡೆದಿದ್ದಾರೆ. ಆ ನಿಟ್ಟಿನಲ್ಲಿ ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗಷ್ಟೇ ಅವರನ್ನು ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರನ್ನಾಗಿ ಕೂಡ ನೇಮಕಗೊಳಿಸಿತ್ತು.

ಅವಿವಾಹಿತರಾಗಿದ್ದ ಅವರು ಸಹೋದರರು, ಸಹೋದರಿಯರ ಸಹಿತ ಅಪಾರ ಬಂಧು ಭಾಂಧವರನ್ನು ಅಗಲಿದ್ದಾರೆ.

(ವಿಧಾನಪರಿಷತ್ ಮಾಜಿ ಅಧ್ಯಕ್ಷ ಪ್ರತಾಪ್ ಚಂದ್ರ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದೇವಾನಂದ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ,ಪುರಸಭೆಯ ಮಾಜಿ ಸದಸ್ಯ ಸುಬಾಶ್ ಪೂಜಾರಿ, ಪುರಸಭಾ ಸದಸ್ಯೆ ಪ್ರಭಾವತಿ ಶೆಟ್ಟಿ, ವಾಣಿ ಶೆಟ್ಟಿ ಮೊಳಹಳ್ಳಿ ಮತ್ತಿತರರೊಂದಿಗೆ ಗಂಗಾಧರ ಶೆಟ್ಟಿಯವರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ. File photo)

Advertisement
Advertisement
Recent Posts
Advertisement