Advertisement

ರಾಜ್ಯಪಾಲರ ಕ್ರಮದ ವಿರುದ್ದ ಸೋಮವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ!

Advertisement

ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಹೊಂದಿರುವ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ
ಕರ್ನಾಟಕದ ರಾಜ್ಯಪಾಲರಾದ ಗೆಹ್ಲೋಟ್ ರವರು ಈ ರಾಜ್ಯದ ಓರ್ವ ಬ್ಲಾಕ್‌ಮೇಲರ್‌ನ ದೂರನ್ನು ಆಧರಿಸಿ 136ಶಾಸಕರ ಬೆಂಬಲ ಹೊಂದಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದನ್ನು, ಮತ್ತವರ ಈ ಪಕ್ಷಪಾತಿ ನಡೆಯನ್ನು ಖಂಡಿಸಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ ಅಗಸ್ಟ್19 (ಸೋಮವಾರ) ಬೆಳಿಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು ಹಾಗೂ ರಾಜ್ಯಪಾಲರ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಈಮೈಲ್ ಮೂಲಕ (presidentofindia@rb.nic.in) ಪತ್ರವನ್ನು (Memorandum) ಸಲ್ಲಿಸಬೇಕು. ಈ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಕನಿಷ್ಟ ಅರ್ಧ ಕಿಲೋಮೀಟರ್ ಪಾದಯಾತ್ರೆಯ ಮೂಲಕ ಹೋಗಿ ಪ್ರತಿಭಟನೆ ಆರಂಭಿಸಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಸ್ಪಷ್ಟ ಸೂಚನೆಯ ಮೇರೆಗೆ ಸೋಮವಾರ ಉಡುಪಿಯಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುರವರು ಕನ್ನಡಮೀಡಿಯಾ ಡಾಟ್ ಕಾಮ್ ಗೆ ತಿಳಿಸಿದ್ದಾರೆ.

ಈ ಪ್ರತಿಭಟನೆಯ ಅಂಗವಾಗಿ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, 2013, 2018 ಹಾಗೂ 2023ರ ಎಲ್ಲಾ ವಿಧಾನಸಭಾ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು, ಡಿಸಿಸಿ, ಬಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ, ಸೆಲ್, ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು, ವಾರ್ಡ್ ಪಂಚಾಯಿತಿ ಹಾಗೂ ಬೂತ್ ಮಟ್ಟದ ಕಾರ್ಯಕರ್ತರುಗಳು ಹಾಗೂ ಇತರ ಎಲ್ಲ ಸ್ಥಳೀಯ ಮುಖಂಡರುಗಳು ಸೋಮವಾರ (ಅಗಸ್ಟ್ 19) ದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ವಠಾರದಲ್ಲಿ ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಉಪಸ್ಥಿತರಿರಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Recent Posts
Advertisement